ಅಪರೂಪದ ಚಿಪ್ಪು ಹಂದಿಗೆ ಜೀವದಾನ: 50 ಅಡಿ ಬಾವಿಯಿಂದ ರಕ್ಷಣೆ

ಉಡುಪಿ: ಹಿರಿಯಡಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿಯಲ್ಲಿ 50 ಅಡಿ ಆಳದ ಬಾವಿಗೆ ಬಿದ್ದ ಅಪರೂಪದ ಚಿಪ್ಪು ಹಂದಿ ಅನ್ನು ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ.ಸಂಜೆಯ ವೇಳೆಗೆ ಈ ಘಟನೆ ಬೆಳಕಿಗೆ ಬಂದು, ಸ್ಥಳೀಯ ಸಾಮಾಜಿಕ ಕಾರ್ಯಕರ್ತ ವಿತಿನ್ ಹಿರಿಯಡ್ಕ ಅವರು ತಕ್ಷಣವೇ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಅವರಿಗೆ ವಿಷಯ ತಿಳಿಸಿದರು. ಕುಲಾಲ್ ಅವರು ಅರಣ್ಯ ಇಲಾಖೆಯ ತಂಡವನ್ನು ಸ್ಥಳಕ್ಕೆ ಕರೆದೊಯ್ದರು. ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಸತತ ಪ್ರಯತ್ನದ ಫಲವಾಗಿ, ನೀರೆಯ […]

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.26ರ ವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿಯಲಿದೆ. ಜೂನ್‌ 26ರ ವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗಲಿದ್ದು, ಉಳಿದೆಲ್ಲಾ ಕಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಜೂನ್ 26ರ ವರೆಗೂ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, […]

ಸೂಲಿಬೆಲೆ ಸುಳ್ಳಿನ ಚಕ್ರವರ್ತಿ ಅಂತಾ ಕರ್ನಾಟಕಕ್ಕೆ ಗೊತ್ತು: ಲಕ್ಷ್ಮೀ ಹೆಬ್ಬಾಳ್ಕರ್ ಲೇವಡಿ

ಉಡುಪಿ: ಚಕ್ರವರ್ತಿ ಸೂಲಿಬೆಲೆಯೋರ್ವ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ ಭಗವದ್ಗೀತೆ ಮಹಾಭಾರತ ಹೇಳುತ್ತಾರೆ. ಆದರೆ ಬಾಯಿ ತೆರೆದರೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು. ಕಪ್ಪಗಿರುವುದನ್ನು ಬೆಳ್ಳಗೆ ಮಾಡುವುದರಲ್ಲಿ ಬೆಳ್ಳಗೆ ಇರೋದನ್ನ ಕಪ್ಪು ಮಾಡುವುದರಲ್ಲಿ ಅವರು ನಿಸ್ಸೀಮರು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿದರು. ಉಡುಪಿಯಲ್ಲಿ ಇಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ವಾಕ್ ಸ್ವಾತಂತ್ರ್ಯ ಸೇರಿದಂತೆ ಎಲ್ಲಾ ತರನಾದ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಕೊಟ್ಟಿದೆ. ಇಡೀ […]

ಶಂಕರನಾರಾಯಣ: ವಿಪರೀತ ಮೊಬೈಲ್ ಬಳಸುತ್ತಾಳೆಂದು ಪತ್ನಿಯನ್ನು ಕಡಿದು ಕೊಂದ ಪತಿ

ಉಡುಪಿ: ಹೆಂಡತಿ ವಿಪರೀತ ಮೊಬೈಲ್ ಬಳಸುತ್ತಾಳೆಂದು ಸಿಟ್ಟುಗೊಂಡ ಪತಿ, ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ತಾಲ್ಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಹೊಸಮಠ ನಿವಾಸಿ ರೇಖಾ (27) ಕೊಲೆಯಾದ ಮಹಿಳೆ. ಈಕೆಯ ಪತಿ ಕೊಳಂಬೆ ಗ್ರಾಮದ ನಿವಾಸಿ ಗಣೇಶ ಪೂಜಾರಿ(42) ಎಂಬಾತನನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ವೃತ್ತಿಯಲ್ಲಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಪೂಜಾರಿ ಪತ್ನಿ ಯಾವಾಗಲೂ ವಿಪರೀತ ಮೊಬೈಲ್ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ಮದ್ಯಪಾನ ಮಾಡಿಕೊಂಡು ಬಂದು ಪತ್ನಿಯೊಂದಿಗೆ ಜಗಳವಾಡಿದ್ದಾನೆ. […]

ಉಡುಪಿ:ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವು “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಜೂನ್ 21 ರಂದು ಬೆಳಗ್ಗೆ 7 ಗಂಟೆಗೆ ನಗರದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ […]