ವಿಟಿಯು ರಾಜ್ಯ ಮಟ್ಟದ ಮಹಿಳೆಯರ ಬಾಲ್ ಬ್ಯಾಡ್ಮಿಂಡನ್ ಪಂದ್ಯಾಟ ಆಳ್ವಾಸ್‌ಗೆ ಇಂಜಿನಿಯರ್ ಕಾಲೇಜಿಗೆ ಪ್ರಶಸ್ತಿ

ಮೂಡುಬಿದಿರೆ: ಜಿಸಿಇ ರಾಮನಗರದಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಮಹಿಳಾ ತಂಡವು ದ್ವಿತೀಯ ಸ್ಥಾನವನ್ನು ಪಡೆಯಿತು.ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

ಹೆಬ್ರಿ: ಆರಂಭಿಕ ಶಿಕ್ಷಣವೇ ಉನ್ನತ ಶಿಕ್ಷಣಕ್ಕೆ ಆಧಾರ – ಎಚ್ ನಾಗರಾಜ ಶೆಟ್ಟಿ.

ಹೆಬ್ರಿ: ಮಕ್ಕಳ ಬಾಲ್ಯದ ಆರಂಭಿಕ ಶಿಕ್ಷಣವು ಯೋಗ್ಯ ಗುಣಮಟ್ಟದ ಶಿಕ್ಷಣ ದೊರೆತಲ್ಲಿ ಅವರ ಉನ್ನತ ಶಿಕ್ಷಣಕ್ಕೆ ಅದೇ ಬುನಾದಿಯಾಗುತ್ತದೆ. ಆರಂಭಿಕ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕಾದದ್ದು ಪ್ರತಿಯೊಬ್ಬ ಪೋಷಕರ ಆದ್ಯ ಕರ್ತವ್ಯ. ಈ ದಿಸೆಯಲ್ಲಿ ನಮ್ಮ ಶಿಕ್ಷಣ ಸಂಸ್ಥೆಯು ಅತ್ಯಾಧುನಿಕ ಸೌಕರ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ಎಂದು ಎಸ್. ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್ ನಾಗರಾಜ್ ಶೆಟ್ಟಿ ಅವರು ಹೇಳಿದರು. ಇವರು, ಎಸ್.ಆರ್ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಎಲ್.ಕೆ.ಜಿ ಮಕ್ಕಳ ತರಗತಿ ಆರಂಭೋತ್ಸವ ಕಾರ್ಯಕ್ರಮವನ್ನು […]

ಹರಿಶ್ಚಂದ್ರ ಸಾಲ್ಯಾನ್ ಅವರ ನುಡಿಮುತ್ತು ಕೃತಿ ಬಿಡುಗಡೆ.

ಉಡುಪಿ: ಕೃತಿಗಳು ಲೇಖಕನ ಮನದಾಳದ, ಜೀವಾನಾನುಭವದ ಮಾತುಗಳಾಗಿರುತ್ತವೆ. ಆದ್ದರಿಂದ ಉತ್ತಮ ಕೃತಿಗಳಿಂದ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಮೂಲ್ಕಿಯ ಪುನರೂರು ಟೂರಿಸ್ಟ್ ಹೋಂ ಸಭಾಂಗಣದಲ್ಲಿ ಬುಧವಾರ ನಡೆದ ಲೇಖಕ ಹರಿಶ್ವಂದ್ರ ಪಿ. ಸಾಲಿಯಾನ್ ಮೂಲ್ಕಿ ಅವರ ‘ನುಡಿ ಮುತ್ತು’ ಕೃತಿ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದು ಪುಸ್ತಕ ಓದುವವರ ಸಂಖ್ಯೆ ವಿರಳವಾಗಿದೆ ನಿಜ, ಆದರೆ ಉತ್ತಮ ಕೃತಿಗಳನ್ನು ಓದುವವರು ಇದ್ದೇ […]