ಉಡುಪಿ: ಗೋಕಳ್ಳತನ, ಗೋಮಾಂಸ ಸಾಗಾಟ; ಪೊಲೀಸರ ಕಾರ್ಯಾಚರಣೆ- ಇಬ್ಬರ ಬಂಧನ

ಉಡುಪಿ: ಕಾರ್ಕಳ ತಾಲೂಕು ಮುಡಾರು ಗ್ರಾಮದ ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ ನಿಂದ ಮೂರು ಹಸುಗಳನ್ನು ಕಳ್ಳತನಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಸಲೀಂ(38) ಬಂಧಿತ ಆರೋಪಿ. ಈತನನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.ಇನ್ನೊಂದು ಪ್ರಕರಣದಲ್ಲಿ ಗಂಗೊಳ್ಳಿ ಕಡೆಗೆ ತೆರಳುವ ರಸ್ತೆಯಲ್ಲಿ ಸ್ಕೂಟರ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಹೀಮ್(35) ಬಂಧಿತ ಆರೋಪಿ. ಈತನಿಂದ ಸ್ಕೂಟರ್ ಮತ್ತು 25 ಕೆಜಿ ದನದ […]
ಬಂಟಕಲ್ ಕಾಲೇಜಿನಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”

ಬಂಟಕಲ್: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ಕ್ರಾಸ್ ಘಟಕ, ರೋಟರ್ಯಾಕ್ಟ್ ಘಟಕ ವತಿಯಿಂದ ದಿನಾಂಕ 21 ಜೂನ್ 2025ರಂದು ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗದ ಬಗ್ಗೆಉಪನ್ಯಾಸವನ್ನು ಮತ್ತು ಪ್ರಾತ್ಯಕ್ಷಿಕೆಯನ್ನು ಕಾಲೇಜಿನಆವರಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಾರ್ಕಳದ ಮನಶಾಸ್ತ್ರಜ್ಞ ಮತ್ತುಯೋಗ ತಜ್ಞರಾದ ಡಾ. ಪ್ರಸನ್ನ ಹೆಗ್ಡೆ, ಇವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಇವರು ಯೋಗವು ನಮ್ಮ ದೈನಂದಿನ ಜೇವನದಲ್ಲಿ ಹೇಗೆ ಮಹತ್ವವನ್ನು ಪಡೆದುಕೊಂಡಿದೆ. ಅದು […]
ಮೂಡುಬಿದಿರೆ:ಯೋಗ ಸಂಗಮ -2025’

ಮೂಡುಬಿದಿರೆ:ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಕಾಲೇಜು, ಪುಣೆಯ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ‘ಯೋಗ ಸಂಗಮ -2025’ ಕಾರ್ಯಕ್ರಮ ನಡೆಯಿತು. ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿವಿಧ ಶಿಕ್ಷಣ ಸಂಸ್ಥೆಗಳ 1500 ವಿದ್ಯಾರ್ಥಿಗಳು ಏಕಕಾಲದಲ್ಲಿ sಸಾಮಾನ್ಯ ಯೋಗ ಪ್ರೋಟೋಕಾಲನ್ನು ಅನುಸರಿಸಿ 45 ನಿಮಿಷಗಳ ಸಾಮೂಹಿಕ ಯೋಗ ಪ್ರದರ್ಶನವನ್ನು ನೀಡಿದರು. ದೇಶದ ಒಂದು ಲಕ್ಷಕ್ಕೂ ಅಧಿಕ ಭಾಗಗಳಲ್ಲಿ ಈ ಯೋಗ ಸಂಗಮ ಕರ್ಯಕ್ರಮವನ್ನು […]
ಇಸ್ರೇಲ್-ಇರಾನ್ ನಡುವೆ ಸಂಘರ್ಷ: ಇರಾನ್ನಿಂದ ತಾಯ್ನಾಡಿಗೆ ಮರಳಿದ 290 ವಿದ್ಯಾರ್ಥಿಗಳು

ನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವೆ ಉಂಟಾಗಿರುವ ಸಂಘರ್ಷದ ಹಿನ್ನೆಲೆ 290 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ವಿಮಾನವು ಶುಕ್ರವಾರ ತಡರಾತ್ರಿ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಇರಾನ್ನಿಂದ ಭಾರತೀಯರನ್ನು ಸ್ಥಳಾಂತರಿಸಲು ಭಾರತ ಸರ್ಕಾರ ‘ಆಪರೇಷನ್ ಸಿಂಧು’ವನ್ನು ಪ್ರಾರಂಭಿಸಿದೆ. ಇರಾನ್ನ ಮಶಾದ್ನಿಂದ 290 ವಿದ್ಯಾರ್ಥಿಗಳನ್ನು ಹೊತ್ತ ವಿಮಾನವು ದೆಹಲಿ ತಲುಪಿತು. ಇದರಲ್ಲಿ ಹೆಚ್ಚಿನವರು ಜಮ್ಮು ಮತ್ತು ಕಾಶ್ಮೀರಕ್ಕೆ ಸೇರಿದ ವಿದ್ಯಾರ್ಥಿಗಳಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳ ಮರಳುವಿಕೆಗಾಗಿ ಕಾತರದಿಂದ ಕಾಯುತ್ತಿದ್ದ ಕುಟುಂಬಗಳಿಗೆ ಇದೊಂದು ಉತ್ತಮವಾದ ಕ್ರಮವಾಗಿದೆ. ಭಾರತ […]
ಇಡೀ ವಿಶ್ವಕ್ಕೆ ಯೋಗ ಕಲಿಸಿದ್ದು ಭಾರತ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ:ಇಡೀ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು, ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಯೋಗದಿಂದ ಮಾತ್ರ ಮನಸ್ಸಿಗೆ ಉಲ್ಲಾಸ ಸಿಗುತ್ತದೆ ಎಂದರು. ನಾನು ಕಳೆದ 25 ವರ್ಷಗಳಿಂದ ಯೋಗಾಭ್ಯಾಸ […]