ಮಂಗಳೂರು: ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

ಮಂಗಳೂರು: ಇಲ್ಲಿನ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಎಕ್ಸ್ಪರ್ಟ್ ಸಮೂಹ ಸಂಸ್ಥೆಗಳ ಐಟಿ ನಿರ್ದೇಶಕ ಅಂಕುಶ್ ಎನ್.ನಾಯಕ್ ಮಾತನಾಡಿ, ‘ ದಿನದಲ್ಲಿ ಕನಿಷ್ಠ ಒಂದು ಗಂಟೆ ಸಮಯವನ್ನು ನಮ್ಮ ಹವ್ಯಾಸಗಳಿಗೆ ಮೀಸಲಿಡಬೇಕು.ಪ್ರತಿಯೊಬ್ಬರು ಯಾವುದಾದರೂ ರೀತಿಯ ಸಂಗೀತ ಕಲಿಯಬೇಕು.ಸಂಗೀತವು ನಮ್ಮಲ್ಲಿ ಕ್ರಿಯಾಶೀಲತೆ ಹಾಗೂ ಏಕಾಗ್ರತೆಯನ್ನು ಹೆಚ್ಚಿಸುತ್ತದೆ ಎಂದರು. ಸಂಗೀತ ದಿನಾಚರಣೆ ಪ್ರಯುಕ್ತ ಶಕ್ತಿ ಶಾಲೆಯ ವಿದ್ಯಾರ್ಥಿಗಳು ಸಂಗೀತ, ವಾದ್ಯ ಕಾರ್ಯಕ್ರಮ ನಡೆಸಿಕೊಟ್ಟರು. ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಕೆ. ಸಿ. ನಾಯ್ಕ್ […]
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

ಉಡುಪಿ: ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಯಬೇಕಿಲ್ಲ. ನೈತಿಕ ಅಧಿಕಾರ ಎಂದರೇನು?. ಅವರು ಮೊದಲು ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು ನೀಡಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಬಗ್ಗೆ ಮಾತನಾಡುವ ಸಚಿವರಿಗೆ ನೈತಿಕತೆ ಇಲ್ಲ ಎಂಬ ಸುನೀಲ್ ಕುಮಾರ್ ಅವರ ಆರೋಪಕ್ಕೆ ಶನಿವಾರ ಪ್ರತಿಕ್ರಿಯಿಸಿದ ಸಚಿವರು, ಉಸ್ತುವಾರಿ ಸಚಿವೆಗೆ ನೈತಿಕತೆ ಇಲ್ಲ ಅಂದರೆ ಏನು. ಸುನೀಲ್ […]
ಅಧಿಕಾರಿಗಳು ಫೀಲ್ಡ್ ಗಿಳಿದು ಕೆಲಸ ಮಾಡಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಖಡಕ್ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮಕೈಗೊಳ್ಳಲು ಅಧಿಕಾರಿಗಳು ಫೀಲ್ಡಿಗಿಳಿದು ಕೆಲಸ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಕಡಲ ಕೊರೆತ ತಡೆಗಟ್ಟುವ ಸಲುವಾಗಿ 4.50 ಕೋಟಿ ಹಣ ಬಿಡುಗಡೆಯಾಗಿದ್ದು, ಕಾಮಗಾರಿಗಳನ್ನು ತ್ವರಿತಗೊಳಿಸಬೇಕು ಎಂದರು. […]
ನರೇಗಾ ಅನುದಾನ ವಿಳಂಬದ ಬಗ್ಗೆ ಬಿಜೆಪಿಗರು ಮಾತಾಡಲಿ: ಬಿಜೆಪಿ ನಾಯಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸವಾಲು

ಉಡುಪಿ: ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪಲು ಒಂದು ತಿಂಗಳು ತಡವಾದರೂ ಟೀಕಿಸುವ ಬಿಜೆಪಿ ನಾಯಕರು, ದುಡಿಯುವ ಕೈಗಳಿಗೆ ಸಿಗುವ ನರೇಗಾ ಅನುದಾನ ನೀಡದ ಕೇಂದ್ರ ಸರ್ಕಾರದ ವಿರುದ್ಧ ಮಾತಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದರು. ದುಡಿಯುವ ಕೈಗಳಿಗೆ ಹಣ ಸಿಗಲಿ ಎಂಬ ಉದ್ದೇಶದಿಂದ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ನರೇಗಾ ಯೋಜನೆ ಆರಂಭಿಸಿದರು. ಆದರೆ, ಕಳೆದ ಐದು ತಿಂಗಳಿಂದ […]
ಮೂಡ್ಲಕಟ್ಟೆ: ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್, ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಮತ್ತು ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಅಪ್ ಪ್ಯಾರಾಮೆಡಿಕಲ್ ಸೈನ್ಸಸ್ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಆಯುಷ್ಮಾನ್ ಅರೋಗ್ಯ ಕೇಂದ್ರದ ಯೋಗ ಗುರುಗಳಾದ ಶ್ರೀಮತಿ ಶೋಭಾ ಶೆಟ್ಟಿ ಹಾಗೂ ಶ್ರೀಮತಿ ಚೆನ್ನಮ್ಮ ಉಡುಪ, ಐ ಎಂ ಜೆ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ ಡಾ. ರಾಮಕೃಷ್ಣ ಹೆಗ್ಡೆ, ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಜೆನ್ನಿಫರ್ […]