ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ: ತಲ್ಲೂರು ಶಿವರಾಮ ಶೆಟ್ಟಿ

ಬೆಂಗಳೂರು: ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ‘ಕರ್ನಾಟಕ ಯಕ್ಷಗಾನ ಅಕಾಡೆಮಿಯು ಪಡುವಲಪಾಯ ಮತ್ತು ಮೂಡಲಪಾಯ ಯಕ್ಷಗಾನ ಗಳನ್ನು ಸಮಾನವಾಗಿ ಪ್ರೋತ್ಸಾಹಿಸುತ್ತಿದೆ. ಬಯಲು ಸೀಮೆಯ ಯಕ್ಷಗಾನದ ಪ್ರಕಾರಗಳಾದ ಕೇಳಿಕೆ, ಘಟ್ಟದ ಕೋರೆ, ಮೂಡಲಪಾಯ ಮೊದಲಾದ ಪ್ರಕಾರಗಳ ಪ್ರಸರಣ, ಸಂರಕ್ಷಣೆಯ ಬಗ್ಗೆ ಕ್ರಿಯಾಶೀಲವಾದ ವಿಶೇಷ ಯೋಜನೆಗಳನ್ನು ಹಮ್ಮಿಕೊಳ್ಳಲಿದೆ’ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ನುಡಿದರು. […]