ಸಕಲೇಶಪುರ ಬಳಿ ಭೂಕುಸಿತ; ಶಿರಾಡಿ ಘಾಟ್ ಸಂಚಾರ ಬಂದ್

ಹಾಸನ: ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿ ಬಳಿ ಭೂಕುಸಿತ ಸಂಭವಿಸಿದ್ದು, ಶಿರಾಡಿ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ವಾಹನಗಳು ಹಾಸನದಿಂದ ಬೇಲೂರು ಮಾರ್ಗವಾಗಿ ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಲತಾಕುಮಾರಿ ಆದೇಶ ಮಾಡಿದ್ದಾರೆ. ಮಂಗಳೂರಿನಿಂದ ಬೆಂಗಳೂರಿಗೆ ಬರುವ ವಾಹನಗಳು ಸಂಪಾಜೆ ಮತ್ತು ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಸಂಚರಿಸಲಿವೆ ಎಂದು ತಿಳಿಸಿದ್ದಾರೆ.
ಹಿರಿಯಡಕ: ಕೊಂಡಾಡಿ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘದಲ್ಲಿ ಜೂನ್ 29 ರಂದು ಹಿಂದುಸ್ಥಾನಿ ಸಂಗೀತ ಶಾಲೆಯ ಉದ್ಘಾಟನಾ ಕಾರ್ಯಕ್ರಮ

ಉಡುಪಿ: ಹಿರಿಯಡ್ಕ ಕೊಂಡಾಡಿ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ(ರಿ) ಭಜನೆಕಟ್ಟೆಯಲ್ಲಿ ಹಿಂದುಸ್ಥಾನಿ ಸಂಗೀತ ಶಾಲೆಯ ಉದ್ಘಾಟನಾ ಕಾರ್ಯಕ್ರಮವು ಜೂನ್ 29 ರಂದು ಬೆಳಿಗ್ಗೆ 9:30ಕ್ಕೆ ನಡೆಯಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ, ಈಟಿವಿ ‘ಎದೆ ತುಂಬಿ ಹಾಡುವೆನು’ ಸೀಸನ್ 1ರ ವಿಜೇತರಾದ ಹಾಗೂ 24 ಗಂಟೆಗಳ ನಿರಂತರ ಗಾಯನದ ಮೂಲಕ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಲ್ಲಿ ದಾಖಲೆಯನ್ನು ಸಾಧಿಸಿದ ವಿದ್ವಾನ್ ಯಶವಂತ್ ಎಂ.ಜಿ. ಭಾಗವಹಿಸಲಿದ್ದಾರೆ. ಶ್ರೀ ರಾಘವೇಂದ್ರ ಕಾರ್ಕಳ, ಶ್ರೀ ರಾಘವೇಂದ್ರ ಮಠ, ತೆಳ್ಳಾರು ರಸ್ತೆ, ಶ್ರೀ […]
ಉತ್ತರಾಖಂಡ:ಅಲಕನಂದಾ ನದಿಗೆ ಬಸ್ ಬಿದ್ದು ಓರ್ವ ಮೃತ್ಯು, 10 ಮಂದಿ ನಾಪತ್ತೆ

ಡೆಹ್ರಾಡೂನ್: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಬಸ್‌ವೊಂದು ನಿಯಂತ್ರಣ ತಪ್ಪಿ ಅಲಕನಂದಾ ನದಿಗೆ ಬಿದ್ದ ಪರಿಣಾಮ ಕನಿಷ್ಠ ಓರ್ವ ಮೃತಪಟ್ಟಿದ್ದು, 10 ಮಂದಿ ನಾಪತ್ತೆಯಾಗಿದ್ದಾರೆ. ರುದ್ರಪ್ರಯಾಗ ಜಿಲ್ಲೆಯ ಘೋಲ್ತಿರ್ ಪ್ರದೇಶದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ. ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಈಗಾಗಲೇ 7 ಜನರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ಸಿನಲ್ಲಿ 18 ಮಂದಿ ಪ್ರಯಾಣಿಕರಿದ್ದರು. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ […]
ಉಡುಪಿಯ ಪ್ರಸಿದ್ಧ ಖಾಸಗಿ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.

ಉಡುಪಿ:ಉಡುಪಿಯ ಪ್ರಸಿದ್ಧ ಖಾಸಗಿ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ. ಹುದ್ದೆಗಳು: ◼ಶೋರೂಮ್ ಮ್ಯಾನೇಜರ್ ( salary 35k )◼ಅಕೌಂಟೆಂಟ್◼ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ (chits) (salary 22k )◼ರೆಸ್ಟೋರೆಂಟ್ ಮ್ಯಾನೇಜರ್ (salary 35k)◼ಆಫೀಸ್ ಎಕ್ಸಿಕ್ಯೂಟಿವ್◼ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಮಾಹಿತಿಗಾಗಿ ಸಂಪರ್ಕಿಸಿ:8050364397, 6361434397
ಜು.1 ರಂದು ಉಡುಪಿ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉಡುಪಿ, ಜೂ.25: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆಯನ್ನು ಜು.1ರಂದು ಬೆಳಗ್ಗೆ 10.30ಕ್ಕೆ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು. ಹಿರಿಯ ಪತ್ರಕರ್ತ ಹಾಗೂ ಅಂಕಣ ಕಾರ ರಾಜಾರಾಂ ತಲ್ಲೂರು ‘ಮಾಧ್ಯಮ: ಮುಂದಿನ 10ವರ್ಷಗಳ- ಮಿಡಿಯಾ ಕನ್ವರ್ಜೆನ್ಸ್, ಎಲ್‌ಎಲ್‌ಎಂ’ ವಿಷಯದ ಕುರಿತು […]