ಹೆಬ್ರಿ ಎಸ್.ಆರ್ ಪದವಿ ಪೂರ್ವ ಕಾಲೇಜು: ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ.

ಹೆಬ್ರಿ: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ, ಕೆಂಪೇಗೌಡ ಜನ್ಮದಿನಾಚರಣೆಯ ಪ್ರಯುಕ್ತ ಆಯೋಜಿಸಿದ ಹೆಬ್ರಿ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಎಸ್.ಆರ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸ್ಫೂರ್ತಿ ಪ್ರಥಮ ಸ್ಥಾನ ಮತ್ತು ಸನಿಹ ತೃತೀಯ ಸ್ಥಾನ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಾಣಿಜ್ಯ ವಿಭಾಗದ ಶಶಿಧರ್ ಸಮಾಧಾನಕರ ಬಹುಮಾನ ಪಡೆದಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್. ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿ ಅಭಿನಂದಿಸಿದರು.

ಕಾರ್ಕಳ ಪತ್ರಕರ್ತರ ಸಂಘದಿಂದ ಎಎಸ್ ಪಿಗೆ ದೂರು.

ಕಾರ್ಕಳ: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್‌ನಲ್ಲಿ ಮಾಧ್ಯಮ ವಿರೋಧಿ ಸಂದೇಶ ಹಂಚಿಕೊಂಡಿರುವುದನ್ನು ಖಂಡಿಸಿರುವ ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ಘಟಕವು ಕಾರ್ಕಳ ಪೊಲೀಸ್ ವಿಭಾಗದ ಎಎಸ್ಪಿಗೆ ಶುಕ್ರವಾರ ದೂರು ಸಲ್ಲಿಸಿದೆ. ಪಕ್ಷವೊಂದರ ಕಾರ್ಯಕರ್ತರೆನ್ನಲಾದ ಪ್ರಖ್ಯಾತ್ ಹಾಗೂ ಹರಿಪ್ರಸಾದ್ ಶೆಟ್ಟಿ ಎಂಬವರು ಸಾಮಾಜಿಕ ಜಾಲತಾಣವಾದ ಫೇಸ್ ಬುಕ್‌ನಲ್ಲಿ ಪತ್ರಿಕೋದ್ಯಮ, ಮಾಧ್ಯಮಕ್ಕೆ ನಿಂದನಾತ್ಮಕ ಬರಹಗಳನ್ನು ಪ್ರಕಟಿಸಿದ್ದಾರೆ. ಕಾನೂನು ಕ್ರಮ ಕೈಗೊಳ್ಳುವಂತೆ ಎಎಸ್ಪಿ ಹರ್ಷ ಪ್ರೀಯವದಂ ಅವರಿಗೆ ಮನವಿ ಸಲ್ಲಿಸಿ, ಕಾನೂನು ಕ್ರಮ ಜರುಗಿಸುವಂತೆ ಮನವಿ ಸಲ್ಲಿಸಿದರು. ದೂರು ಸ್ವೀಕರಿಸಿದ ಎಎಸ್ಪಿಯವರು […]

ಉಡುಪಿ:ವಸತಿ ಶಾಲೆಗಳಲ್ಲಿ ವಿಶೇಷ ವರ್ಗದ ಮಕ್ಕಳಿಗೆ ನೇರ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ವಿಶೇಷ ವರ್ಗದ ಮಕ್ಕಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ಪ್ರವೇಶ ಪಡೆಯಲು ಇಲಾಖಾ ವೆಬ್‌ಸೈಟ್ https://cetonlin.karnataka.gov.in/kreis24d/Forms/onlineregister.aspx ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷ ವರ್ಗದ ಅಡಿಯಲ್ಲಿ ಬರುವ ಸಮುದಾಯಗಳು : ಸಫಾಯಿ ಕರ್ಮಚಾರಿಗಳ ಮಕ್ಕಳು, ಚಿಂದಿ ಆಯುವವರ ಮಕ್ಕಳು, ಸ್ಮಶಾನ […]

ಉಡುಪಿ:ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವಾಗಲಿ :ಅಶೋಕ್ ಕೊಡವೂರು

ಉಡುಪಿ: ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೂ ತಲುಪಿಸುವ ಕಾರ್ಯವಾಗಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ಕೊಡವೂರು ತಿಳಿಸಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಛೇರಿ ಸಭಾಂಗಣದಲ್ಲಿನಡೆದ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕೆಂಬ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ,ಗೃಹಜ್ಯೋತಿ, ಗೃಹಲಕ್ಷ್ಮಿ […]

ಉಡುಪಿ:ರಕ್ತದಾನದಿಂದ ಆಪತ್ತಿನಲ್ಲಿರುವವರ ಜೀವ ರಕ್ಷಣೆ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ರಕ್ತದಾನ ಮಹಾದಾನವಾಗಿದ್ದು, ಆಪತ್ತಿನಲ್ಲಿರುವ ಮತ್ತೊಬ್ಬರ ಜೀವ ಉಳಿಸಲು ಸಹಾಯವಾಗುತ್ತದೆ.ಇಂತಹ ಕಾರ್ಯಕ್ಕೆ ಹೆಚ್ಚು ಜನರು ಮುಂದೆ ಬರಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಧಿಕಾರಿಯವರ ಕಚೇರಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ) ಉಡುಪಿ ಜಿಲ್ಲಾ ಶಾಖೆ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ ಉಡುಪಿ ಹಾಗೂ ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ನಡೆದ ರಕ್ತದಾನ […]