ಉಡುಪಿ:ಕೆಂಪೇಗೌಡರ ದೂರದೃಷ್ಠಿಯಲ್ಲಿ ಬೆಂಗಳೂರು ನಗರ ನಿರ್ಮಾಣ : ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ: ನಾಡಪ್ರಭು ಕೆಂಪೇಗೌಡರು ಭವಿಷ್ಯದ ದೂರದೃಷ್ಠಿಯಿಂದ ನಿರ್ಮಿಸಿದ ಬೆಂಗಳೂರು ನಗರವು ಇಂದು ಇಡೀ ವಿಶ್ವದ ಜನರನ್ನು ತನ್ನತ್ತ ಸೆಳೆಯುವಂತೆ ಮಾಡುವುದರೊಂದಿಗೆ ಕೋಟ್ಯಾಂತರ ಜನರು ಬದುಕು ಕಟ್ಟಿಕೊಳ್ಳಲು ಆಶ್ರಯ ನೀಡಿದೆ ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು. ಅವರು ಶುಕ್ರವಾರ ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು […]

ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ: ರಜತ ವರ್ಷಾಚರಣೆ ಅಂಗವಾಗಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ.

ಉಡುಪಿ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಪರ್ಕಳ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ಉಡುಪಿ ಜಿಲ್ಲಾ ಸಹಕಾರ ಭಾರತಿ ಇವರುಗಳ ಸಹಯೋಗದೊಂದಿಗೆ ಸೊಸೈಟಿಯ ರಜತ ವರ್ಷ ಪ್ರಾರಂಭದ ದಿನ ಸ್ಥಾಪನಾ ದಿನಾಂಕ ಜೂ.27 ರಂದು ಪರ್ಕಳ ಪ್ರೌಢ ಶಾಲೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ಜರಗಿತು. 2025 ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆಯ ಅಂಗವಾಗಿ ಗಿಡ ನೆಡುವ ಸಂಕಲ್ಪ ‘ ಏಕ್ […]

ಐತಿಹಾಸಿಕ ಪುರಿ ಜಗನ್ನಾಥ ರಥಯಾತ್ರೆ ವೇಳೆ ಜನದಟ್ಟಣೆ: 9 ಮಂದಿ ಸ್ಥಿತಿ ಗಂಭೀರ.

ಪುರಿ: ಐತಿಹಾಸಿಕ ಪುರಿ ಜಗನ್ನಾಥ ದೇಗುಲದ ರಥಯಾತ್ರೆ ವೇಳೆ ಶುಕ್ರವಾರ ಅತಿಯಾದ ಸೆಕೆ ಮತ್ತು ಕಿಕ್ಕಿರಿದ ಜನದಟ್ಟಣೆಯಿಂದಾಗಿ ಸುಮಾರು 625 ಮಂದಿ ಕುಸಿದು ಬಿದ್ದಿದ್ದು, ಅಸ್ವಸ್ಥಗೊಂಡರು ಎಂದು ಅಧಿಕಾರಿಗಳು ತಿಳಿಸಿದರು. ಜಿಲ್ಲಾಸ್ಪತ್ರೆಯಲ್ಲಿ ಸುಮಾರು 70 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ ಒಂಬತ್ತು ಮಂದಿಯ ಸ್ಥಿತಿ ಗಂಭೀರವಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು. ‘ಜನದಟ್ಟಣೆಯಿಂದಾಗಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೆಲವರಿಗೆ ವಾಂತಿಯಾದರೆ ಮತ್ತೆ ಕೆಲವರು ನಿಶ್ಯಕ್ತಿಯಿಂದ ಬಳಲಿದ್ದರು. ಹಲವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ’ ಎಂದು ಪುರಿ ಜಿಲ್ಲೆಯ […]

ಮುಂಬೈ:ಹಿಂದಿ ಬಿಗ್ ಬಾಸ್ 13 ರ ಸ್ಪರ್ಧಿ ಹಾಗೂ ‘ಕಾಂಟಾ ಲಗಾ’ ಖ್ಯಾತಿಯ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನ’

ಮುಂಬೈ: ‘ಕಾಂಟಾ ಲಗಾ’ ಹಾಡಿನ ಮೂಲಕ ದೇಶಾದ್ಯಂತ ಜನಪ್ರಿಯರಾಗಿದ್ದ ಖ್ಯಾತ ನಟಿ ಮತ್ತು ಹಿಂದಿ ಬಿಗ್ ಬಾಸ್ 13ರ ಸ್ಪರ್ಧಿ ಶೆಫಾಲಿ ಜರಿವಾಲಾ (42) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮುಂಬೈನ ಅಂಧೇರಿ ಲೋಖಂಡ್‌ವಾಲಾದಲ್ಲಿರುವ ತಮ್ಮ ನಿವಾಸದಲ್ಲಿದ್ದ ಶೆಫಾಲಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸದ್ಯ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ರವಾನಿಸಲಾಗಿದೆ. ರಾತ್ರೋರಾತ್ರಿ ತಾರೆಯಾದ […]