ಮಣಿಪಾಲ: ಎಕ್ಸ್ ಪ್ರೆಸ್ ಬಸ್ ನ ಚಕ್ರದಡಿಗೆ ಸಿಲುಕಿ ಮಹಿಳೆ ಮೃತ್ಯು.

ಉಡುಪಿ: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಬಸ್ ನಡಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಮಣಿಪಾಲ ಈಶ್ವರನಗರದ ಎಂಐಟಿ ಕಾಲೇಜು ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಸಂಭವಿಸಿದೆ.ಮೃತರನ್ನು ವಿನೋದ ಸಿಸ್ಟರ್ (65) ಎಂದು ಗುರುತಿಸಲಾಗಿದೆ. ಅವರು ತನ್ನ ಮಗಳ ಮಕ್ಕಳನ್ನು ಶಾಲಾ ಬಸ್ ನಿಂದ ಇಳಿಸಿ ಮನೆ ಬಿಟ್ಟು ಬಳಿಕ ಉಪ್ಪೂರು ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಸ್ ನ ಚಕ್ರದಡಿಗೆ ಸಿಲುಕಿದ ಮಹಿಳೆಯ ದೇಹ ಛಿದ್ರ ಛಿದ್ರಗೊಂಡಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ […]

ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ.

ಉಡುಪಿ: ಕಾರ್ಮಿಕ ಇಲಾಖೆಯ ಸರಕಾರದ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ

ಮಣಿಪಾಲ: ಶ್ರೀ ಶಾರದಾ ಟ್ರೈನಿಂಗ್ ಇನ್ ಸ್ಟಿಟ್ಯೂಟ್ ನಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಗತಿ ಆರಂಭ

ಮಣಿಪಾಲ: ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಗತಿ ಆರಂಭ ಕಳೆದ 14 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಮಣಿಪಾಲದ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನಲ್ಲಿ 2024-25ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯನ್ನು ವಿಧ್ಯುಕ್ತವಾಗಿ ಆರಂಭವಾಯಿತು. ತರಬೇತಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಡಾ. ಎನ್.ವಿ. ಕಾಮತ್ ಅವರು ಮಾತ್ರವಲ್ಲದೇ ಅತಿಥಿಗಳಾಗಿ ಶ್ರೀಮತಿ ಚಂದ್ರಕಲಾ, ಶ್ರೀಮತಿ ಚೇತನಾ ಅವರೂ ಭಾಗವಹಿಸಿ ದೀಪ ಪ್ರಜ್ವಲನದ ಮೂಲಕ ಉದ್ಘಾಟನೆಯನ್ನು ನೆರವೇರಿಸಿದರು. ಸಂಸ್ಥೆಯ ಪ್ರಾಂಶುಪಾಲೆ ಶ್ರೀಮತಿ ಸುನೀತಾ ಅವರು ಸಂಸ್ಥೆಯು ನಡೆದು ಬಂದ […]

ಉಡುಪಿ:ಹೊಸ ವಾಣಿಜ್ಯ ಕಟ್ಟಡ ಮಾರಾಟಕ್ಕಿದೆ.

ಉಡುಪಿ:ಉಡುಪಿಯಲ್ಲಿ ಹೊಸ ವಾಣಿಜ್ಯ ಕಟ್ಟಡ ಮಾರಾಟಕ್ಕೆ ಲಭ್ಯವಿದ್ದು, ಇದರ ಒಟ್ಟು ವಿಸ್ತೀರ್ಣ: 12,000 ಚದರ ಅಡಿ(ಸೂಪರ್ ಬಿಲ್ಟ್ ಅಪ್ ಏರಿಯಾ).ಕಚೇರಿ, ಕ್ಲಿನಿಕ್, ಹೋಟೆಲ್, ಅಥವಾ ಇತರ ಯಾವುದೇ ವ್ಯಾಪಾರಿಕ ಉದ್ದೇಶಗಳಿಗೆ ಇದು ಸೂಕ್ತ ಸ್ಥಳವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಥವಾ ಸ್ಥಳವನ್ನು ಭೇಟಿ ಮಾಡಲು ಸಂಪರ್ಕಿಸಿ: ಕೋರ್ಟ್ ಬ್ಯಾಕ್ ರೋಡ್, ಉಡುಪಿ – 576101📞 80957 47077 / 96200 25220

ಜುಲೈ 4ರಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 4ರಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಬನ್ನಂಜೆ ಶ್ರೀ ನಾರಾಯಣಗುರು ಆಡಿಟೋರಿಯಂನಲ್ಲಿ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆ ಜ್ಯೋತಿ ಕೃಷ್ಣ ಹೆಬ್ಬಾರ್ ಅವರು, ಈ ಸಮಾರಂಭದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಮತ್ತು ರಾಜ್ಯ ಗ್ಯಾರಂಟಿ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ ಅವರು […]