ಪ್ರಿಯಾಂಕ ಖರ್ಗೆ ಹೇಳಿಕೆಯಲ್ಲಿ ತಪ್ಪೇನಿಲ್ಲ ಆರ್ ಎಸ್ ಎಸ್ ಗೆ ನಿಷೇಧ ಹೇರಬೇಕು ಎಂದರೆ ಹೇರಲೇಬೇಕು: ಮಂಜುನಾಥ ಭಂಡಾರಿ

ಉಡುಪಿ: ಕಾಂಗ್ರೆಸ್‌ನ ಯಾವ ನಾಯಕರು ಏನು ಹೇಳಿದ್ದಾರೆ ಎನ್ನೋದು ಮುಖ್ಯವಲ್ಲ, ಎಐಸಿಸಿ ಅಧ್ಯಕ್ಷರು ಏನು ಹೇಳಿದ್ದಾರೆ ಎನ್ನುವುದೇ ಮುಖ್ಯ ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ನಾಯಕರ ಬಳಿ ಮಾಧ್ಯಮಗಳು ಅಭಿಪ್ರಾಯ ಕೇಳಿದಾಗ ಹೇಳುತ್ತಾರೆ. ಸೆಪ್ಟೆಂಬರ್‌ನಲ್ಲಿ ಯಾವ ಕ್ರಾಂತಿಯೂ ಇಲ್ಲ. ವಾಂತಿಯೂ ಆಗುವುದಿಲ್ಲ. ಪಕ್ಷ ಬಲಿಷ್ಠವಾಗಿದ್ದು, ವರಿಷ್ಠ ಮಂಡಳಿ ನಿರ್ಧಾರ ತೆಗೆದುಕೊಳ್ಳುತ್ತದೆ. ಬದಲಾವಣೆ ಆಗಬೇಕು ಎಂದರೆ ಅಖಿಲ ಭಾರತ ಮಟ್ಟದಲ್ಲಿ ನಿರ್ಧಾರ ಮಾಡುತ್ತಾರೆ. ಒಬ್ಬರು, ಇಬ್ಬರು ನಾಯಕರಿಂದ ಯಾವುದೇ ಬದಲಾವಣೆ ಆಗುವುದಿಲ್ಲ ಎಂದರು. […]
ಕೆಪಿಸಿಸಿ ನಿಯೋಗದಿಂದ ಉಡುಪಿ ಜಿಲ್ಲೆಯ ವಿವಿಧ ಧಾರ್ಮಿಕ ನಾಯಕರ ಭೇಟಿ

ಉಡುಪಿ: ಕರಾವಳಿ ಭಾಗದಲ್ಲಿ ಇತ್ತೀಚೆಗೆ ನಡೆದಿರುವ ಹಲವು ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಕೂಲಂಕಷ ಅಧ್ಯಯನ ನಡೆಸಿ, ಇವುಗಳಿಗೆ ಕಡಿವಾಣ ಹಾಕಲು ಅನುಸರಿಸಬೇಕಾದ ಕ್ರಮಗಳ ಕುರಿತು ಶಿಫಾರಸ್ಸು ಮಾಡಿ ವರದಿ ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ನಿಯೋಜಿತವಾದ ಪಕ್ಷದ ಹಿರಿಯ ನಾಯಕರ ಕೆಪಿಸಿಸಿ ನಿಯೋಗ ಮಂಗಳವಾರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ನ ಹಿರಿಯ ಅಧಿಕಾರಿಗಳು, ಪರ್ಯಾಯ ಪುತ್ತಿಗೆ ಹಾಗೂ ಪೇಜಾವರ ಶ್ರೀಗಳು ಸೇರಿದಂತೆ ವಿವಿಧ ಧರ್ಮಗಳ ಮುಖಂಡರು, ವಿವಿಧ ಸಂಘಟನೆಗಳ ನಾಯಕರನ್ನು ಭೇಟಿ ಮಾಡಿ ಚರ್ಚಿಸಿತು. ಎಐಸಿಸಿ […]
ಉಡುಪಿ: ಕೆಪಿಸಿಸಿ ನಿಯೋಗದಿಂದ ಮುಸ್ಲಿಮ್ ಮುಖಂಡರೊಂದಿಗೆ ಸಮಾಲೋಚನೆ

ಉಡುಪಿ: ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಸೌಹಾರ್ದವನ್ನು ಸಮಾಜದಲ್ಲಿ ಮೂಡಿಸುವ ಉದ್ದೇಶದಿಂದ ಕೆಪಿಸಿಸಿಯಿಂದ ನಿಯೋಜನೆಗೊಂಡ ಹಿರಿಯ ಮುಖಂಡರನ್ನು ಒಳಗೊಂಡ ನಿಯೋಗ ಇಂದು ಉಡುಪಿ ಜಾಮೀಯ ಮಸೀದಿಗೆ ಭೇಟಿ ನೀಡಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಿತು. ರಾಜ್ಯಸಭಾ ಸದಸ್ಯ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಡಾ.ನಾಸಿರ್ ಹುಸೇನ್, ವಿಧಾನ ಪರಿಷತ್‌ನ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಎಂಎಲ್‌ಸಿ ಮಂಜುನಾಥ್ ಭಂಡಾರಿ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಕಿಮ್ಮನೆ ರತ್ನಾಕರ್ ಅವರ […]
ಉಡುಪಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:IQMIST Pvt.Ltd ವತಿಯಿಂದ ವಿವಿಧ ಹುದ್ದೆಗಳಿಗೆ ಜುಲೈ 10 ಮತ್ತು 11ರಂದು ಸಂದರ್ಶನ ನಡೆಯಲಿದೆ. ಬೆಳಿಗ್ಗೆ 11 ಗಂಟೆಯಿಂದ ಸಂಜೆ 7:00 ಗಂಟೆವರೆಗೆ ಫ್ರೆಶರ್ಸ್ ಮತ್ತು ಅನುಭವವಿರುವವರು ಈ ಸಂದರ್ಶನದಲ್ಲಿ ಭಾಗವಹಿಸಬಹುದು. ಹುದ್ದೆಗಳು: ▪ ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್▪ ವಿಡಿಯೋ ಎಡಿಟರ್▪ ಸೋಶಿಯಲ್ ಮೀಡಿಯಾ ಸ್ಪೆಶಲಿಸ್ಟ್▪ ಗ್ರಾಫಿಕ್ ಡಿಸೈನರ್▪ ಸೇಲ್ಸ್ ಎಕ್ಸಿಕ್ಯೂಟಿವ್▪ ಅಕೌಂಟ್ ಮ್ಯಾನೇಜರ್▪ ಮಾರ್ಕೆಟಿಂಗ್ ಮ್ಯಾನೇಜರ್▪ ಬಿಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್▪ ಕ್ಲೈಂಟ್ ರಿಲೇಶನ್ಶಿಪ್ ಮ್ಯಾನೇಜರ್ ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ವಾಟ್ಸಪ್ ನಂಬರ್ ಗೆ […]
ಉಡುಪಿ:ವಿದ್ಯಾರ್ಥಿವೇತನ ಸೌಲಭ್ಯ : ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಪ್ರೀ-ಮೆಟ್ರಿಕ್ ಮತ್ತು ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ಎಸ್.ಎಸ್.ಪಿ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಂದನೇ ತರಗತಿಯಿಂದ ಎಸ್.ಎಸ್.ಎಲ್.ಸಿ ವರೆಗಿನ ವಿದ್ಯಾರ್ಥಿಗಳು ವೆಬ್‌ಸೈಟ್ https://ssp.postmatric.karnataka.gov.in/ssppre/ನಲ್ಲಿ ಹಾಗೂ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರಪದವಿವರೆಗಿನ ವಿದ್ಯಾರ್ಥಿಗಳು ವೆಬ್‌ಸೈಟ್ https://ssp.postmatric.karnataka.gov.in/post_sa/signin.aspx ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, […]