ಜುಲೈ 8ರಂದು ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯ 4ನೇ ಆರಾಧನಾ ಮಹೋತ್ಸವ

ಉಡುಪಿ: ಶ್ರೀ ಕ್ಷೇತ್ರ ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಮತ್ತು ನಂದಿಕೇಶ್ವರ ದೇವಸ್ಥಾನದ ಆಶ್ರಯದಲ್ಲಿ ಜುಲೈ 8ರಂದು ಧರ್ಮಯೋಗಿ ಮೋಹನ ಸ್ವಾಮೀಜಿ ಅವರ 4ನೇ ವರ್ಷದ ಆರಾಧನಾ ಮಹೋತ್ಸವ ನಡೆಯಲಿದೆ ಎಂದು ಶ್ರೀಕ್ಷೇತ್ರ ಮುದ್ರಾಡಿಯ ಧರ್ಮಾಧಿಕಾರಿ ಸುಕುಮಾರ ಮೋಹನ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 7ಗಂಟೆಯಿಂದ ಚಿಕ್ಕಮಗಳೂರಿನ ಕೆ.ಎಸ್.ನಿತ್ಯಾನಂದ ಸ್ವಾಮೀಜಿ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ. ಬೆಳಿಗ್ಗೆ 8ಗಂಟೆಗೆ ಶ್ರೀ ಆದಿಶಕ್ತಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಜರುಗಲಿದೆ. ಬೆಳಿಗ್ಗೆ […]

ಪೆರ್ಡೂರು ಅನಂತಪದ್ಮನಾಭ ದೇವಾಲಯದಲ್ಲಿ ವಿಜಯನಗರ ಕಾಲದ ಪ್ರಾಚೀನ ದಶಾವತಾರ ದ್ವಾರಬಂಧ ಪತ್ತೆ

ಉಡುಪಿ: ಜಿಲ್ಲೆಯ ಪೆರ್ಡೂರು ಅನಂತಪದ್ಮನಾಭ ದೇವಾಲಯದಲ್ಲಿ ವಿಜಯನಗರ ಕಾಲದ ದಶಾವತಾರ ಶಿಲ್ಪ ಪಟ್ಟಿಕೆಯ ದ್ವಾರಬಂಧ ಕಂಡು ಬಂದಿದೆ ಎಂದು ನಿವೃತ್ತ ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಮತ್ತು ಆದಿಮ ಕಲಾ ಟ್ರಸ್ಟ್ (ರಿ.), ಉಡುಪಿ ಇದರ ಸ್ಥಾಪಕಸದಸ್ಯ ಪ್ರೊ. ಟಿ. ಮುರುಗೇಶಿ ಅವರು ತಿಳಿಸಿದ್ದಾರೆ. ಈ ಕಂಚಿನ ದ್ವಾರಬಂಧವು ಸುಮಾರು 4.5 ಅಡಿ ಎತ್ತರ ಮತ್ತು 3.5 ಅಡಿ ಅಗಲವಾಗಿದೆ. ಅಡ್ಡ ಪಟ್ಟಿಕೆಯ ಮೇಲೆ ಗಜಲಕ್ಷ್ಮಿಯ ಲಲಾಟ ಬಿಂಬವಿದೆ. ಎಡ-ಬಲದ ಲಂಭ ಪಟ್ಟಿಕೆಗಳ […]

ಬಂಟಕಲ್: ಅಶ್ವಿನ್ ಶೆಟ್ಟಿಯವರಿಗೆ ಪಿ ಎಚ್ ಡಿ ಪದವಿ ಪ್ರಧಾನ

ಬಂಟಕಲ್: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ಶ್ರೀಯುತ ಅಶ್ವಿನ್ ಶೆಟ್ಟಿ ಇವರು ಸಂಸ್ಥೆಯ ಪ್ರಾಂಶುಪಾಲರಾದ ಡಾ.ತಿರುಮಲೇಶ್ವರ ಭಟ್ ಮತ್ತು ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಮತ್ತು ಇಂಡಸ್ಟ್ರಿಯಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಸತ್ಯಶಂಕರಶರ್ಮಾ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಎಫೆಕ್ಟ್ ಆಫ್ ಟ್ರೀಸ್ ಎಲಿಮೆಂಟ್ ಮೆಗ್ನೀಶಿಯಂ ಆನ್ ದ ಮೆಕ್ಯಾನಿಕಲ್ ಆ್ಯಂಡ್ ವೇರ್ ಬಿಹೇವಿಯರ್ ಆಫ್ ಸಿಲಿಕಾನ್ ಕಾರ್ಬೈಡ್ ರೀಯಿನ್‌ಪೋರ್ಸ್ಡ್ ಅಲ್ಯೂಮಿನಿಯಂ-ಸಿಲಿಕಾನ್ ಯುಟಿಕ್ಟಿಕ್ ಮೆಟಲ್ ಮ್ಯಾಟ್ರಿಕ್ಸ್ […]

ಉಡುಪಿ: ಪರ್ಕಳ ರಸ್ತೆಯ ದುರಾವಸ್ಥೆ ವಿರುದ್ಧ ಜು.6 ರಂದು ಪ್ರತಿಭಟನೆ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಕೆಳಪರ್ಕಳ ಭಾಗದಲ್ಲಿ ರಸ್ತೆಯ ದುರಾವಸ್ಥೆಯನ್ನು ಖಂಡಿಸಿ, ಕೂಡಲೇ ಅದನ್ನು ಸಂಚಾರ ಯೋಗ್ಯವನ್ನಾಗಿ ಮಾಡುವಂತೆ ಆಗ್ರಹಿಸಿ ಪರ್ಕಳ ರಸ್ತೆ ಹೋರಾಟ ಸಮಿತಿಯ ವತಿಯಿಂದ ಜು.6ರಂದು ಸಾರ್ವಜನಿಕರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಖ್ಯಾತ ಮನೋವೈದ್ಯ ಡಾ.ಪಿ.ವಿ.ಭಂಡಾರಿ ತಿಳಿಸಿದ್ದಾರೆ. ಪರ್ಕಳ ಪ್ರದೇಶದ ರಸ್ತೆಗಳ ಹದಗೆಟ್ಟ ಸ್ಥಿತಿಯಿಂದ ಸಾರ್ವಜನಿಕರು ತೀವ್ರ ವಾದ ತೊಂದರೆ ಅನುಭವಿಸು ತಿದ್ದಾರೆ. ಸತತ ಮಳೆಯ ಕಾರಣ ದಿನದಿಂದ ದಿನಕ್ಕೆ ರಸ್ತೆ ಪರಿಸ್ಥಿತಿ ಹದಗೆಡುತ್ತಿದ್ದು, ಸಂಚಾರಕ್ಕೆ ಬಳಸಲು ಅಸಮರ್ಥ ವಾಗಿದೆ.ಇದರಿಂದ ಅಪಘಾತಗಳು ಹೆಚ್ಚಾಗುತ್ತಿದೆ […]

ಪುತ್ತೂರು: ಅತ್ಯಾಚಾರ ಪ್ರಕರಣ; ಆರೋಪಿ ಕೃಷ್ಣ ರಾವ್ ಪೊಲೀಸರ ವಶಕ್ಕೆ.

ಪುತ್ತೂರು: ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ರಾವ್ ಎಂಬಾತನ ವಿರುದ್ಧ ಕೆಲ ದಿನಗಳ ಹಿಂದೆ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಯುವತಿ ಗರ್ಭಿಣಿ ಆಗುತ್ತಿದ್ದಂತೆ ಆತ ಆಕೆಯನ್ನು ಮದುವೆಯಾಗಲು ನಿರಾಕರಿಸಿ ನಾಪತ್ತೆಯಾಗಿದ್ದ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ ಗರ್ಭಿಣಿಯಾದ ಬಳಿಕ ಗಂಡು ಮಗುವಿಗೆ ಜನ್ಮ ನೀಡಿದ್ದು, ಆತ ಕೈಕೊಟ್ಟಿದ್ದರಿಂದ ಕಂಗಾಲಾದ ಯುವತಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ನಂತರ ಆತ ಬಂಧನದ ಭಯದಿಂದ ಎಸ್ಕೇಪ್ ಆಗಿದ್ದ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಕೃಷ್ಣ […]