ಕಾರುಗಳನ್ನು ವಿಶೇಷ ಕೇರ್ ಮಾಡುವ “ಅಮಿಗೋಸ್ ಕಾರ್ ಇನ್ ಕೇರ್” ಜು.9 ರಂದು ಉಡುಪಿಯಲ್ಲಿ ಅದ್ದೂರಿ ಶುಭಾರಂಭ

ಉಡುಪಿ: ಕಾರುಗಳಿಗೆ ವಾಶಿಂಗ್, ಕ್ಲೀನಿಂಗ್, ಸೆರಾಮಿಕ್, ಗ್ರ್ಯಾಫೀನ್ ಕೋಟಿಂಗ್ ಮತ್ತು ಪಿಪಿಎಫ್ ಸೇರಿದಂತೆ ಇನ್ನೂ ಹತ್ತು ಹಲವಾರು ಸೇವೆಗಳನ್ನು ನೀಡುವ ಮೂಲಕ ಕಾರ್ ಗಳಿಗೆ ವಿಶೇಷ ಕೇರ್ ನೀಡುವ ಅಮಿಗೋಸ್ (AMIGO’S) car in care ಸಂಸ್ಥೆ ಇದೇ ಜುಲೈ 9 ರಂದು ಕಲ್ಸಂಕ-ಅಂಬಾಗಿಲು ರಸ್ತೆಯಲ್ಲಿನ, ಭಾರತ್ ಪೆಟ್ರೋಲ್ ಪಂಪ್ ಎದುರುಗಡೆ ಬೆಳಿಗ್ಗೆ 10.30 ಕ್ಕೆ ಶುಭಾರಂಭಗೊಳ್ಳಲಿದೆ. ಅಮಿಗೋಸ್ ಕಾರ್ ಇನ್ ಕೇರ್ ನಲ್ಲಿ ನಿಮ್ಮ ಕಾರುಗಳಿಗೆ ವಿವಿಧ ರೀತಿಯ ವಾಶಿಂಗ್, ಕ್ಲೀನಿಂಗ್ ಸೇವೆಗಳು ಸೇರಿದಂತೆ, ಪೈಂಟ್ […]

ಮಣಿಪಾಲ: ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಮಣಿಪಾಲ: ಮೂರ್ಛೆರೋಗದಿಂದ ಬಳಲುತ್ತಿದ್ದ ವಿದ್ಯಾರ್ಥಿ ಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ 80 ಬಡಗುಬೆಟ್ಟು ಗ್ರಾಮದ ರಾಜೀವನಗರ ಎಂಬಲ್ಲಿ ಜು.5ರಂದು ಬೆಳಗ್ಗೆ ನಡೆದಿದೆ. ಮೃತರನ್ನು ಬಾಗಲಕೋಟೆ ಮೂಲದ ಮಲ್ಲಮ್ಮ ಗುರುಪ್ಪ ಎಂಬವರ ಮಗ ಸಾಯಿಗಣೇಶ(15) ಎಂದು ಗುರುತಿಸಲಾಗಿದೆ. ಇವರು 10ನೇ ತರಗತಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಈತ ಸುಮಾರು 4 ವರ್ಷಗಳಿಂದ ಮೂರ್ಛೆ ಕಾಯಿಲೆಯಿಂದ ಬಳಲುತ್ತಿದ್ದರು. ಈ ಖಾಯಿಲೆಯಿಂದ ವಿದ್ಯಾಬ್ಯಾಸಕ್ಕೆ ಸಮಸ್ಯೆಯಾಗುತ್ತಿರುವ ಬಗ್ಗೆ ಬೇಸರಗೊಂಡ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ […]

ತುಳು ಸಂಸ್ಕೃತಿಯನ್ನು ಮಕ್ಕಳಿಗೆ ತಿಳಿಸುವ ಕಾರ್ಯವಾಗಬೇಕು- ಪೂರ್ಣಿಮಾ

ಉಡುಪಿ: ಉಡುಪಿ ತುಳುಕೂಟ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಮತ್ತು ತುಳುನಾಡ ಧ್ವನಿ ತುಳು ಅಂತರ್ಜಾಲ ಪತ್ರಿಕೆಯ ವತಿಯಿಂದ ಉಡುಪಿಯ ಜಗನ್ನಾಥ ಸಭಾಭವನದಲ್ಲಿ ‘ಮದರೆಂಗಿದ ರಂಗ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರು, ನಮ್ಮ ಹಿರಿಯರು ಆಚರಿಸಿಕೊಂಡು ಬರುತ್ತಿದ್ದ ತುಳು ಸಂಸ್ಕೃತಿಯನ್ನು ಇಂದಿನ ಮಕ್ಕಳಿಗೆ ತಿಳಿಸುವ ಕಾರ್ಯ ಅಗತ್ಯವಾಗಿ ಮಾಡಬೇಕಾಗಿದೆ ಎಂದರು. ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ತುಳು ಸಂಸ್ಕೃತಿಯನ್ನು […]

ಉಡುಪಿ: ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

ಉಡುಪಿ: ಕುಂಜಾಲು ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ರಿಯಾಝ್ ಕಡಂಬು ಜು.5ರಂದು ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ, ಕುಂಜಾಲುವಿನಲ್ಲಿ ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಸಂಘ ಪರಿವಾರ ಮತ್ತು ಬಿಜೆಪಿ ನಾಯಕರು ಸಮಾಜದ ಸ್ವಾಸ್ಥ ಕೆಡಿಸುವಂತಹ, ಗಲಭೆ ಸೃಷ್ಟಿಸುವಂತಹ ಹುನ್ನಾರವನ್ನು ಮಾಡಿದ್ದಾರೆ ಎಂಬುದಾಗಿ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದಾರೆ. ಇವರು ಆಧಾರರಹಿತವಾಗಿ […]

ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ “ಏಕ್ ಪೇಡ್ ಮಾ ಕೆ ನಾಮ್” ಕಾರ್ಯಕ್ರಮ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಮಾಜಿ ಸಚಿವ ದಿ. ಡಾ. ವಿ.ಎಸ್. ಆಚಾರ್ಯ ಅವರ ಜಯಂತಿಯ ಪ್ರಯುಕ್ತ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ “ಏಕ್ ಪೇಡ್ ಮಾ ಕೆ ನಾಮ್” ಕಾರ್ಯಕ್ರಮವನ್ನು ಮಣಿಪಾಲ ಪ್ರಗತಿ ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ […]