ರಾಜ್ಯದಲ್ಲಿ ಗೃಹ ಇಲಾಖೆಯ ದಕ್ಷತೆ ಪಾತಾಳಕ್ಕೆ ಕುಸಿದಿದೆ: ರಾಜ್ಯ ಸರಕಾರದ ವಿರುದ್ಧ ಕಾರ್ಕಳ ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

ಕಾರ್ಕಳ: ಹದೆಗೆಟ್ಟ ಕಾನೂನು ವ್ಯವಸ್ಥೆ ಒಂದು ರಾಜ್ಯ ಅನಭಿವೃದ್ಧಿಯ ಕೂಪದಲ್ಲಿ ಮುಳುಗುತ್ತಿರುವುದರ ಸಂಕೇತ. ರಾಜ್ಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಎನ್‌ಐಎ ದಾಳಿ ಕಾನೂನು ಸುವ್ಯವಸ್ಥೆ ಹಾಗೂ ಗೃಹ ಇಲಾಖೆಯ ದಕ್ಷತೆ ಪಾತಾಳ ತಲುಪಿರುವುದನ್ನು ಬೆತ್ತಲೆಗೊಳಿಸಿದೆ ಎಂದು ಶಾಸಕ ವಿ. ಸುನೀಲ್ ಕುಮಾರ್ ಟೀಕಿಸಿದ್ದಾರೆ. ರಾಜ್ಯದಲ್ಲಿ ನಡೆದ ಎನ್ಐಎ ದಾಳಿ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರಿ ನೌಕರರೇ ಅದರಲ್ಲೂ ವಿಶೇಷವಾಗಿ ಪೊಲೀಸ್ ಇಲಾಖೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಹಾಗೂ ಕಾರಾಗೃಹದ ಸಿಬ್ಬಂದಿಗಳು ಅಂತಾರಾಷ್ಟ್ರೀಯ ಭಯೋತ್ಪಾದಕರ ಜತೆ ಕೈ […]

ರೋಟರಿ ಕ್ಲಬ್ ಮಣಿಪಾಲ ಟೌನ್ ಅಧ್ಯಕ್ಷರಾಗಿ ರೋ. ಡಾ.ದೀಪಕ್ ರಾಮ್ ಬಾಯಿರಿ ಆಯ್ಕೆ

ಮಣಿಪಾಲ: ರೋಟರಿ ಕ್ಲಬ್ ಮಣಿಪಾಲ ಟೌನ್ ಇದರ ವಾರ್ಷಿಕ ಪದಗ್ರಹಣ ಸಮಾರಂಭವು ದಿನಾಂಕ 5-7-2025 ರಂದು ಮಣಿಪಾಲದ ಮಾಹೆ ಶಾರದ ಸಭಾಂಗಣದಲ್ಲಿ ಜರುಗಿತು. ಈ ಸಂದರ್ಭದಲ್ಲಿ, ಕ್ಲಬ್‌ನ 11ನೇ ಅಧ್ಯಕ್ಷರಾಗಿ ರೋ. ಡಾ. ದೀಪಕ್ ರಾಮ್ ಬಾಯಿರಿ ಹಾಗೂ ಕಾರ್ಯದರ್ಶಿಯಾಗಿ ರೋ. ಮೋಹನ್ ನಾಯಕ್ ಅವರು ಅಧಿಕೃತವಾಗಿ ಪದಗ್ರಹಣ ಸ್ವೀಕರಿಸಿದರು. ಪದಗ್ರಹಣ ಅಧಿಕಾರಿಯಾಗಿ ಪಿಡಿಜಿ ರೋ. ಅಭಿನಂದನ್ ಶೆಟ್ಟಿ ಭಾಗವಹಿಸಿದ್ದರು. ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಕೆಎಂಸಿ ಮಣಿಪಾಲದ ಡೀನ್ ಡಾ. ಅನಿಲ್ ಭಟ್ ಉಪಸ್ಥಿತರಿದ್ದರು. ರೋಟರಿ ಸಹಾಯಕ […]

ಕೇಂದ್ರ ಸರಕಾರ ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿ ಮಾಡದಂತೆ ಆಗ್ರಹಿಸಿ ಉಡುಪಿಯಲ್ಲಿ ಮುಷ್ಕರ

ಉಡುಪಿ: ಕೇಂದ್ರ ಸರಕಾರ ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿ ಮಾಡದಂತೆ ಆಗ್ರಹಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಹಿನ್ನೆಲೆಯಲ್ಲಿ” ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ( ಜೆಸಿಟಿಯು) ಉಡುಪಿ ಜಿಲ್ಲೆ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ವಿವಿಧ ಕಾರ್ಮಿಕರು ಬುಧವಾರ ಮುಷ್ಕರ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರಕಾರದ ನೀತಿಗಳನ್ನು ವಿರೋಧಿಸಿ ಕಟ್ಟಡ, ಅಂಗನವಾಡಿ, ಬಿಸಿಯೂಟ, ಹೆಂಚು, ಬೀಡಿ, ಕೆಲವು ಫ್ಯಾಕ್ಟರಿಗಳ ಕಾರ್ಮಿಕರು, ಬ್ಯಾಂಕ್, ವಿಮಾ ಹಾಗೂ ಅಂಚೆ ನೌಕರರು ಕೆಲಸಕ್ಕೆ ಹೋಗದ ಮುಷ್ಕರ ನಡೆಸಿ, ಜೆಸಿಟಿಯ ನೇತೃತ್ವದಲ್ಲಿ ಉಡುಪಿ, […]

ಉಡುಪಿ:ಜಿಲ್ಲೆಯಲ್ಲಿ ಏಕವಿನ್ಯಾಸ ನಕ್ಷೆ ಹಾಗೂ ನಮೂನೆ 9/11 ರ ಹೊಸ ಅಧಿಸೂಚನೆಯಲ್ಲಿ ಕೆಲವು ವಿನಾಯಿತಿ ಅಗತ್ಯವಿದೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಜಿಲ್ಲೆಯಲ್ಲಿ ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ9/11 ರನ್ನು ಹೊಸ ಅಧಿಸೂಚನೆಯ ಪ್ರಕಾರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆಯಲು ಸಮಸ್ಯೆ ಉಂಟಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಕೆಲವೊಂದು ವಿನಾಯಿತಿ ನೀಡಲು ಸರಕಾರದೊಂದಿಗೆ ಚರ್ಚಿಸಲಾಗುವುದು ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಏಕ ನಿವೇಶನ ನಕ್ಷೆ ಹಾಗೂ ನಮೂನೆ 9/11 ರಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ […]

ಉಡುಪಿ:ಜು.11 ರಂದು ನೇರ ಸಂದರ್ಶನ

ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿಜುಲೈ 11 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ,ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ:8105618291, 9945856670, 8105774936 ಹಾಗೂ 9901472710 ಅನ್ನು ಕಛೇರಿ […]