ಧರ್ಮಸ್ಥಳ ಅಪರಾಧ ಕೃತ್ಯ ಆರೋಪ: ಕಾನೂನು ಕ್ರಮ ಕೈಗೊಳ್ಳಲಾಗುವುದು; ಎಸ್ ಪಿ

ಮಂಗಳೂರು: ‘ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಅಪರಾಧ ಕೃತ್ಯಗಳು ನಡೆದಿವೆ’ ಎಂದು ವಕೀಲರ ಮೂಲಕ ಪೊಲೀಸರಿಗೆ ದೂರು ನೀಡಿದ್ದ ವ್ಯಕ್ತಿ, ಶುಕ್ರವಾರ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್ ಕೆ. ಅವರ ಮುಂದೆ ಹಾಜರಾಗಿದ್ದಾರೆ. ‘ಪ್ರಕರಣಕ್ಕೆ ಸಂಬಂಧಿಸಿ ದೂರು ದಾರರ ರಕ್ಷಣೆಯ ಉದ್ದೇಶದಿಂದ ಅವರ ಗುರುತು ಬಹಿರಂಗಪಡಿಸದಿರಲು ನಿರ್ಧರಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಡಿವೈಎಸ್‌ಪಿ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ’ ಎಂದು ಜಿಲ್ಲಾ ಎಸ್‌ಪಿ ತಿಳಿಸಿದ್ದಾರೆ. ‘ದೂರುದಾರರು ಸ್ವತಃ ಹೊರ […]
ವಿದೇಶಿ ಉದ್ಯೋಗ ವಂಚನೆ ಪ್ರಕರಣ: ಆರೋಪಿಗಳ ವಿರುದ್ಧ KCOCA ಪ್ರಕರಣ ದಾಖಲಿಸಲು ಸಿದ್ದತೆ; ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ಆಮಿಷವೊಡ್ಡಿ ಮಂಗಳೂರಿ ನಲ್ಲಿ 300 ಮಂದಿ ಉದ್ಯೋಗ ಆಕಾಂಕ್ಷಿಗಳಿಂದ ಕೋಟ್ಯಂತರ ರೂ. ಪಡೆದು ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ವಿರುದ್ಧ ಕೆ-ಕೋಕಾ (ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಸ್ಡ್ ಆ್ಯಕ್ಟ್) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ನಗರದ ಬೆಂದೂರ್‌ವೆಲ್‌ನಲ್ಲಿ ಹೈರ್‌ಗ್ಲೋ ಎಲಿಗೆಂಟ್ ಓವರ್‌ಸೀಸ್ ಇಂಟರ್‌ನ್ಯಾಷನಲ್ ಪ್ರೈ.ಲಿ. ಎಂಬ ಹೆಸರಿನ ಕಚೇರಿಯನ್ನು ತೆರದು ವಿದೇಶದಲ್ಲಿ ಉದ್ಯೋಗ ವೀಸಾ ಕೊಡಿಸುವುದಾಗಿ ಜಾಹೀರಾತುಗಳನ್ನು ನೀಡಿ […]
ಅಹಮದಾಬಾದ್ ವಿಮಾನ ಅಪಘಾತ: ಇಂಧನ ಪೂರೈಕೆ ಕಡಿತ ವಿಮಾನ ಪತನಕ್ಕೆ ಕಾರಣ.!

ನವದೆಹಲಿ: ಅಹಮದಾಬಾದ್ ವಿಮಾನ ದುರಂತಕ್ಕೆ ಸಂಬಂಧಪಟ್ಟಂತೆ ವಿಮಾನ ಅಪಘಾತ ತನಿಖಾ ಸಂಸ್ಥೆ (ಎಎಐಬಿ) ಪ್ರಾಥಮಿಕ ತನಿಖಾ ವರದಿಯನ್ನು ಶುಕ್ರವಾರ ತಡರಾತ್ರಿ ಬಿಡುಗಡೆ ಮಾಡಿದೆ. 15 ಪುಟಗಳ ಈ ವರದಿಯಲ್ಲಿ ಹಲವು ಅಂಶಗಳು ಬಹಿರಂಗಗೊಂಡಿವೆ.ವಿಮಾನದ ಎಂಜಿನ್‌ಗಳಿಗೆ ಇಂಧನ ಪೂರೈಕೆಯಾಗದೆ ಸ್ಥಗಿತಗೊಂಡಿರುವುದೇ ಪತನಕ್ಕೆ ಪ್ರಮುಖ ಕಾರಣವೆಂದು ವರದಿಯಿಂದ ತಿಳಿದುಬಂದಿದೆ. ವಿಮಾನ ಟೇಕ್ ಆಫ್ ಆಗುವ ಸಮಯದಲ್ಲಿ ಸಹ ಪೈಲಟ್ ವಿಮಾನ ಚಲಾಯಿಸುತ್ತಿದ್ದು, ಕ್ಯಾಪ್ಟನ್ ಮೇಲ್ವಿಚಾರಣೆ ಮಾಡುತ್ತಿದ್ದರು. ಟೇಕಾಫ್ ಆದ ಕೆಲವೇ ಕ್ಷಣಗಳಿಗೆ ವಿಮಾನದ ಎರಡು ಎಂಜಿನ್‌ಗಳಿಗೆ ಇಂಧನ ಪೂರೈಕೆಯಾಗುವುದು ನಿಂತಿದೆ. […]
ಪುತ್ತೂರು: ಬಿಜೆಪಿ ಮುಖಂಡನ ಪುತ್ರನಿಂದ ಅತ್ಯಾಚಾರ, ವಂಚನೆ ಪ್ರಕರಣ: ಮದುವೆ ಮಾಡಿಸದಿದ್ದರೆ ಯುವಕನಿಗೆ ಗುಂಡು ಹೊಡೆಯುತ್ತೇನೆ: ಭೂಗತ ಆರೋಪಿ ಕಲಿ ಯೋಗೀಶ್‌ನಿಂದ ಬೆದರಿಕೆ ಕರೆ

ಉಡುಪಿ: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಪುತ್ರ ಆರೋಪಿ ಶ್ರೀಕೃಷ್ಣ ಜೆ ರಾವ್ ಅನ್ಯಾಯಕ್ಕೆ ಒಳಗಾದ ಯುವತಿಯನ್ನು ಮದುವೆಯಾಗದಿದ್ದರೆ ನಾವೇ ಆತನಿಗೆ ಗುಂಡು ಹೊಡೆಯುತ್ತೇವೆ ಎಂದು ಭೂಗತ ಆರೋಪಿ ಕಲಿ ಯೋಗೀಶ್ ಎಂದು ಹೇಳಿಕೊಂಡು ಉಡುಪಿಯ ಖಾಸಗಿ ಸುದ್ದಿವಾಹಿನಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಬೆದರಿಕೆಯೊಡ್ಡಿರುವ ಬಗ್ಗೆ ವರದಿಯಾಗಿದೆ. ವಿದೇಶದಿಂದ ಇಂಟರ್‌ನೆಟ್ ಕರೆ ಮಾಡಿದ ಆತ, ಬಿಜೆಪಿ ಮುಖಂಡನ ಮಗ ವಿಶ್ವಕರ್ಮ ಸಮುದಾಯದ ಯುವತಿಯನ್ನು ಗರ್ಭವತಿಯನ್ನಾಗಿಸಿ ಅನ್ಯಾಯ ಮಾಡಿರುವ ಬಗ್ಗೆ ನನಗೆ ದೂರು ಬಂದಿದೆ. ಈಗ ಆತ […]
ಉಡುಪಿ:ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರಕಲಂ 25 ರನ್ವಯ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಸಭೆಯ ನಿರ್ಣಯದಂತೆ ಜಿಲ್ಲೆಯಲ್ಲಿರುವ ಪ್ರವರ್ಗ ಬಿ ಗೆ ಸೇರಿದ 01 ಹಾಗೂ ಸಿ ಗೆ ಸೇರಿದ 22 ಒಟ್ಟು 23 ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ ಬಿ ದೇವಸ್ಥಾನದ ವಿವರ: ಬ್ರಹ್ಮಾವರ ತಾಲೂಕು ಆರೂರು ಶ್ರೀ ವಿಷ್ಣುಮೂರ್ತಿ […]