ಬೆಳ್ತಂಗಡಿ: ಶಾಲಾ ಶಿಕ್ಷಕಿ ನೇಣು ಬಿಗಿದು ಆತ್ಮಹತ್ಯೆ.

ಬೆಳ್ತಂಗಡಿ: ತಾಲೂಕಿನ ಕೊಯ್ಯೂರು ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ತಮ್ಮ ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಯ್ಯೂರಿನ ದರ್ಖಾಸ್‌ನ ದೇವಪ್ಪ ಬಂಗೇರ ಅವರ ಪುತ್ರಿ ರಮ್ಯಾ (32) ಮೃತಪಟ್ಟವರು. ಜುಲೈ 13 ರಂದು ಮಧ್ಯಾಹ್ನ ಮನೆಯ ಒಂದು ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ. ರಮ್ಯಾ ಎರಡು ವರ್ಷಗಳ ಹಿಂದೆ ಕೊಯ್ಯೂರಿನ ಪದಡ್ಕ ನಿವಾಸಿ ಲತೀಶ್ ಅವರನ್ನು ವಿವಾಹವಾಗಿದ್ದರು. ಅವರು ಬೆಳ್ತಂಗಡಿಯ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. […]

ಎಐ ಚಿತ್ರ ಬಳಸಿ ವಿಡಿಯೊ ಪ್ರಸಾರ; ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು.

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರ ಹೆಚ್ಚಿನ ಮಾಹಿತಿಯಿರುವ ಕಾಲ್ಪನಿಕವಾಗಿ […]

MSDC ಓರೇನ್ ಇಂಟರ್ನ್ಯಾಷನಲ್ ನಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಮೆಹಂದಿ ಬಿಡಿಸುವ ಕಾರ್ಯಕ್ರಮ.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಓರೇನ್ ಇಂಟರ್ನ್ಯಾಷನಲ್ ನಲ್ಲಿ ವಿಶ್ವ ಯುವ ಕೌಶಲ್ಯ ದಿನದ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಉಚಿತ ಮೆಹಂದಿ ಬಿಡಿಸುವ ಕಾರ್ಯಕ್ರಮ ಇಂದು (ಜು.12) ನಡೆಯಿತು. ಈ ಸಂದರ್ಭದಲ್ಲಿ ಭಾಗವಹಿಸಿದ ಮಹಿಳೆಯರು, ವಿದ್ಯಾರ್ಥಿಗಳು, ಓರೇನ್ ಇಂಟರ್ನ್ಯಾಷನಲ್ ಸೆಂಟರ್ ಹೆಡ್ ನೀತಾ ಶೆಟ್ಟಿ, ಶೃತಿ ಹಾಗೂ ಇನ್ನಿತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಕೌಶಲ್ಯ ತರಬೇತಿಯ ಮೂಲಕ ಆವೃತ್ತಿಪರಾಗಲು ‘ಡಿಪ್ಲೋಮಾ ಇನ್ ಪ್ರೊಫೆಷನಲ್ ಮೆಹೆಂದಿ’ ಕೋರ್ಸ್‌ ಆರಂಭಗೊಂಡಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸ್ಥಳ: ಓರೇನ್ […]