ಮಣಿಪಾಲ: ಪೊಲೀಸರಿಗೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಪೋಕ್ಸೊ ಆರೋಪಿ

ಉಡುಪಿ: ಅಪ್ರಾಪ್ತ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಆರೋಪಿಯೋರ್ವ ಸ್ಥಳ ಮಹಜರು ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯ ಎರಡು ಕಾಲುಗಳಿಗೆ ಲಾಠಿಯಿಂದ ಏಟು ಕೊಟ್ಟು ಆತನನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.ಹಲ್ಲೆಗೆ ಒಳಗಾಗಿರುವ ಮಹಿಳಾ ಠಾಣೆಯ ಪೊಲೀಸ್ ಸಿಬ್ಬಂದಿ ರಿತೇಶ್ ಹಾಗೂ ಪೊಲೀಸರ ಲಾಠಿ ಏಟಿನಿಂದ ಗಾಯಗೊಂಡಿರುವ ಪೊಕ್ಸೋ ಆರೋಪಿ ಉತ್ತರ ಪ್ರದೇಶ ಮೂಲದ ಮಣಿಪಾಲ ವಿ.ಪಿ.ನಗರದ ನಿವಾಸಿ ಮುಹಮ್ಮದ್ ದಾನಿಶ್(29)ನನ್ನು […]
ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ವಿಧಿವಶ

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ (87) ಅವರು ಇಂದು (ಜುಲೈ14) ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು. ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು. ಪದ್ಮಶ್ರೀ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ ಗೌರವ:ಸರೋಜಾದೇವಿ ಅವರು 1969ರಲ್ಲಿ […]
ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ವಿಚ್ಛೇದನ ಘೋಷಣೆ

ನವದೆಹಲಿ: ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ದಂಪತಿ ಪರಸ್ಪರ ಬೇರ್ಪಡುವ ನಿರ್ಧಾರವನ್ನು ಭಾನುವಾರ ಪ್ರಕಟಿಸಿದ್ದಾರೆ.35 ವರ್ಷ ವಯಸ್ಸಿನ ಸೈನಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. 2018ರಲ್ಲಿ ಸೈನಾ ಅವರು ಬ್ಯಾಡ್ಮಿಂಟನ್ ಆಟಗಾರನಾಗಿದ್ದ ಕಶ್ಯಪ್ ಅವರನ್ನು ವರಿಸಿದ್ದರು. ‘ಜೀವನವು ಕೆಲವೊಮ್ಮೆ ನಮ್ಮನ್ನು ವಿಭಿನ್ನ ದಿಕ್ಕುಗಳಲ್ಲಿ ಕರೆದೊಯ್ಯುತ್ತದೆ. ಸಾಕಷ್ಟು ಯೋಚಿಸಿ ಕಶ್ಯಪ್ ಮತ್ತು ನಾನು ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ಭಾವಿಸುವೆ’ ಎಂದು ಸೈನಾ ಬರೆದುಕೊಂಡಿದ್ದಾರೆ.
ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸಲು ರೈಲ್ವೆ ಬೋಗಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಆದೇಶ.

ನವದೆಹಲಿ: ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ರೈಲ್ವೆಯ ಎಲ್ಲ 74,000 ಬೋಗಿಗಳು ಮತ್ತು ಎಂಜಿನ್‌ನಲ್ಲಿ ಲೋಕೋಪೈಲಟ್‌ಗಳು ಇರುವಂತಹ 15,000 ಸ್ಥಳಗಳಲ್ಲಿ (ಲೋಕೋಮೋಟಿವ್) ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಆದೇಶಿಸಿದ್ದಾರೆ. ರೈಲ್ವೆ ಪ್ರಯಾಣಿಕರ ಗೋಪ್ಯತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಬೋಗಿಗಳ ಬಾಗಿಲು ಬಳಿಯ ಸಾಮಾನ್ಯ ಸಂಚಾರ ಪ್ರದೇಶದಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ. ಪ್ರತಿ ರೈಲ್ವೆ ಕೋಚ್‌ನಲ್ಲಿ ನಾಲ್ಕು ಉತ್ತಮ ಗುಣಮಟ್ಟದ ಸಿ.ಸಿ.ಟಿ.ವಿ ಕ್ಯಾಮೆರಾಗಳು (ಪ್ರತಿ ಪ್ರವೇಶ ದ್ವಾರದ ಬಳಿ ಎರಡು) […]
ಉಡುಪಿ:ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಪಂಚಮುಖಿ ಗಾಯತ್ರಿ ದೇವಿಯ ದೃಢ ಕಲಾಶೋತ್ಸವ ಸಂಪನ್ನ

ಉಡುಪಿ:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಗಾಯತ್ರಿ ಧ್ಯಾನಪೀಠದಲ್ಲಿರುವ ಶ್ರೀ ಪಂಚಮುಖಿ ಗಾಯತ್ರಿ ದೇವಿಯ ಪ್ರತಿಷ್ಠಾ ದೃಢಕಲಶ ಮಹೋತ್ಸವ ವು ಕ್ಷೇತ್ರದ ಧರ್ಮದರ್ಶಿ, ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಿತು. ದೃಢ ಕಲಶೋತ್ಸವದ ಪೂರ್ವಭಾವಿ ಧಾರ್ಮಿಕ ಕಾರ್ಯಕ್ರಮವಾಗಿ ವಾಸ್ತು, ರಾಕ್ಷೋಗ್ನದಿ ಪ್ರಕ್ರಿಯೆಗಳು ಸಪ್ತ ಶುದ್ಧಿ ಪ್ರಾಸಾದ ಶುದ್ಧಿ, ಕಲಶಾದಿವಾಸ ಪ್ರಕ್ರಿಯೆಗಳು ನೆರವೇರಿತು. ಶುಕ್ರವಾರ ಪ್ರಾತಃಕಾಲ ತ್ರಿ ನಾಳಿಕೇರ ಗಣ ಯಾಗ, ಪ್ರಧಾನಯಾಗ, ಹಾಗೂ ಒದಗಿದ […]