ಜುಲೈ 20ರಂದು ಕುಂದಾಪುರದಲ್ಲಿ “ಲಗೋರಿ” ಗ್ರಾಮೀಣ ಕ್ರೀಡಾಕೂಟ

ಉಡುಪಿ: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಇದರ ಆಶ್ರಯದಲ್ಲಿ “ಲಗೋರಿ” ಗ್ರಾಮೀಣ ಕ್ರೀಡಾಕೂಟವನ್ನು ಇದೇ ಜುಲೈ 20ರಂದು ಕುಂದಾಪುರ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ನ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನಮ್ಮ ಸಂಸ್ಥೆಯು ಕಳೆದ ಎರಡು ವರ್ಷಗಳಿಂದ ಭಾಷೆಯ ಹೆಸರಿನಲ್ಲಿ ಲಗೋರಿ ಎಂಬ ಕ್ರೀಡಾಕೂಟವನ್ನು ಆಯೋಜಿಸುತ್ತಿದೆ. ಇಂದಿನ ಜನಾಂಗ ನೋಡದ ಮತ್ತು‌ ಆಡದ ಆಟಗಳನ್ನು […]

ಕೋಟ: ಇಸ್ಪೀಟು ಜುಗಾರಿ ಅಡ್ಡೆಗೆ ಪೊಲೀಸರ ದಾಳಿ- 7 ಮಂದಿ ವಶಕ್ಕೆ

ಉಡುಪಿ : ಬ್ರಹ್ಮಾವರ ತಾಲೂಕು ಬಿಲ್ಲಾಡಿ ಗ್ರಾಮದ ಮೆತ್ತಗೊಳಿ ಎಂಬಲ್ಲಿಯ ಕೋಳಿ ಶೆಡ್ ಬಳಿ ಅಂದರ್‌ ಬಾಹ‌ರ್ ಇಸ್ಪೀಟು ಆಟದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಜಯಕರ ಪೂಜಾರಿ(42), ಚಕ್ರಪಾಣಿ(60), ನಿಲೇಶ್ ಕೋಠಾರಿ(43),ಜಗದೀಶ ಆಚಾರ್ಯ(45), ಗೋಪಾಲ, ಸದಾಶಿವ ಶಾಸ್ತ್ರಿ, ಕಾಳಪ್ಪ ನಾಯ್ಕ(59) ಬಂಧಿತರು. ಬಂಧಿತರಿಂದ ಇಸ್ಪೀಟು ಜುಗಾರಿ ಆಟಕ್ಕೆ ಬಳಸಿದ ರೂ. 9,880 ನಗದು, 8 ಮೊಬೈಲ್‌ ಹ್ಯಾಂಡ್ ಸೆಟ್, ಒಂದು ಕಾರು,ಸ್ಕೂಟರ್ ಸಹಿತ ಸುತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ […]

ಬೈಂದೂರು: ದನ ಕಳ್ಳತನ- ಇಬ್ಬರು ಆರೋಪಿಗಳ ಬಂಧನ

ಉಡುಪಿ: ದನ ಕಳ್ಳತನ ಮಾಡಿ ಸಾಗಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೈಂದೂರು ಪೋಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಾಸ್ತಾನ ನಿವಾಸಿ ಮೊಹಮ್ಮದ್ ಕೈಪ್ ಮತ್ತು ಉಚ್ಚಿಲ ಕಾಪು ನಿವಾಸಿ ಮೊಹಮ್ಮದ್ ಸುಹೇಲ್ ಖಾದರ್ ಎಂದು ಗುರುತಿಸಲಾಗಿದೆ. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪದೇ ಪದೇ ದನ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗೆ 3 ತಂಡಗಳನ್ನು ರಚಿಸಲಾಗಿತ್ತು. ಕಾರ್ಯಾಚರಣೆ ಇಳಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ದನಕಳ್ಳತನಕ್ಕೆ ಉಪಯೋಗಿಸಿದ […]

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ವಿಭು ಭಕ್ರು ನೇಮಕ.

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ನ್ಯಾಯಮೂರ್ತಿ ಕಾಮೇಶ್ವರ್ ರಾವ್ ಅವರು ದೆಹಲಿ ಹೈಕೋರ್ಟ್‌ಗೆ ವರ್ಗಾವಣೆಯಾಗಿದ್ದಾರೆ. ನ್ಯಾ. ವಿಭು ಭಕ್ರು ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್ ಜೊತೆಗೆ ಹಲವಾರು ನ್ಯಾಯಮಂಡಳಿಗಳಲ್ಲಿ ಅಭ್ಯಾಸ ಮಾಡಿದ್ದಾರೆ. ಅವರು ಈ ವರ್ಷ ಜ.21 ರವರೆಗೆ ದೆಹಲಿ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಾಧೀಶರಾಗಿಯೂ ಸೇವೆ ಸಲ್ಲಿಸಿದ್ದರು. ಕರ್ನಾಟಕ ಹೈಕೋರ್ಟ್‌ ಮಾತ್ರ ಅಲ್ಲದೆ, ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಹಾಗೂ ಪಾಟ್ನಾ ಹೈಕೋರ್ಟ್‌ಗಳಿಗೂ […]

ಕಾರ್ಕಳ ಪರಶುರಾಮ ಥೀಮ್ ಪಾರ್ಕ್‌ ವಿವಾದ: ಮೂರ್ತಿ ಕಂಚಿನದ್ದಲ್ಲ; ತನಿಖೆಯಿಂದ ಸಾಬೀತು

ಉಡುಪಿ: ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ್ ಥೀಮ್ ಪಾರ್ಕ್‌ನಲ್ಲಿ ಶಿಲ್ಪಿಕೃಷ್ಣ ನಾಯ್ಕ ಹಿತ್ತಾಳೆಯಿಂದ ಪರಶು ರಾಮ ಮೂರ್ತಿ ನಿರ್ಮಿಸಿರುವುದೇ ಹೊರತು ಕಂಚಿನಿಂದ ಅಲ್ಲ ಎಂಬುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದೆ. ಶಿಲ್ಪಿ ಕೃಷ್ಣ ನಾಯಕ್ ಕ್ರಿಶ್ ಆರ್ಟ್ ವರ್ಲ್ಡ್ ಎಂಬ ಸಂಸ್ಥೆಯ ಮೂಲಕ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದು ಕೊಂಡು ಕಾಮಗಾರಿ ನಡೆಸುತ್ತಿದ್ದು, ನಂತರ ಕೃಷ್ಣ ನಾಯ್ಕ ಕಂಚಿನ ಮೂರ್ತಿಯನ್ನು […]