ವಿದ್ಯಾ ಅಕಾಡೆಮಿ: ಚೈಲ್ಡ್ ಸೈಕಾಲಜಿ ಬಗ್ಗೆ ಪೋಷಕರಿಗೆ ತಜ್ಞರಿಂದ ಮನವರಿಕೆ.

ಕುಂದಾಪುರ: ಮೂಡ್ಲಕಟ್ಟೆ ಐಎಂಜೆ ಸಮೂಹ ವಿದ್ಯಾಸಂಸ್ಥೆಗಳ ಅಡಿಯಲ್ಲಿ ಬರುವ ವಿದ್ಯಾ ಅಕಾಡೆಮಿ ಶಾಲೆಯಲ್ಲಿ ಪೋಷಕರಿಗಾಗಿ ಓರಿಯಂಟೇಷನ್ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವು ಪೋಷಕರಿಗೆ ಮಕ್ಕಳ ಬೆಳೆವಣಿಗೆ, ಭಾವನಾತ್ಮಕ ಚಟುವಟಿಕೆಗಳು ಹಾಗೂ ಶೈಕ್ಷಣಿಕ ಪ್ರಗತಿಯ ಬಗ್ಗೆ ಸ್ಪಷ್ಟ ಅರಿವನ್ನು ನೀಡುವ ಗುರಿಯನ್ನು ಹೊಂದಿತ್ತು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಮಾನಸಿಕ ಆರೋಗ್ಯ ಸಲಹೆಗಾರರಾಗಿ ಸೇವೆ ನೀಡುತ್ತಿರುವ ಗಿರೀಶ್ ಎಂ ಎನ್ ಅವರು ಭಾಗವಹಿಸಿದ್ದರು. ಅವರು ಮಕ್ಕಳಲ್ಲಿ ಕಂಡುಬರುವ ಆತ್ಮವಿಶ್ವಾಸದ ಕೊರತೆ, ಒತ್ತಡ, ತಂತ್ರಜ್ಞಾನದ ಇತಿಮಿತಿಯ ಬಳಕೆ ಮುಂತಾದ ಸಮಸ್ಯೆಗಳ […]

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣ.

ಮಂಗಳೂರು: ಧರ್ಮಸ್ಥಳದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣದ ಬಗ್ಗೆ ಅವರ ಹೆತ್ತವರು ದೂರು ನೀಡಿದ್ದಾರೆ. ದೂರಿನ ಬಗ್ಗೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ತಿಳಿಸಿದ್ದಾರೆ. 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಅನನ್ಯ ಭಟ್ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಜುಲೈ 15ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಆಗಮಿಸಿ ದೂರು ನೀಡಿದ್ದಾರೆ. ಈ ದೂರಿನ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು […]

ಉಡುಪಿ: ಭಾರೀ ಬಿರುಗಾಳಿ ಬೀಸುವ ಸಾಧ್ಯತೆ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ.

ಉಡುಪಿ: ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಸಾಧ್ಯತೆಯಿರುವ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆ, ಜುಲೈ 18 ರ ವರೆಗೆ ಜಿಲ್ಲೆಯ ಎಲ್ಲಾ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ತಿಳಿಸಲಾಗಿದೆ. ಸಾಂಪ್ರದಾಯಿಕ ಮೀನುಗಾರರು ಸಮುದ್ರ ದಡದಲ್ಲಿ ನಿಲ್ಲಿಸಿಟ್ಟಿರುವ ದೋಣಿ ಮತ್ತು ಬಲೆಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು. ಸಣ್ಣ ಮತ್ತು ಮಧ್ಯಮ ದೋಣಿಗಳು ಮೀನುಗಾರಿಕೆಗೆ ತೆರಳದಂತೆ ಹಾಗೂ ಮುಂದಿನ ದಿನಗಳಲ್ಲಿ ಮೀನುಗಾರಿಕೆಗೆ […]