ಹಿರಿಯಡಕ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಹಿರಿಯಡಕ: ಮಹಿಳೆಯೊಬ್ಬರು ಅನಾರೋಗ್ಯದಿಂದ ಬಳಲುತಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಜು.16 ರಂದು ರಾತ್ರಿ ಅಂಜಾರು ಗ್ರಾಮದ ತನ್ನ ಮನೆಯ ಮಲಗುವ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬಾಲಕೃಷ್ಣ ಎಂಬವರ ಪತ್ನಿ ರೇಖಾ (44) ಎಂದು ಗುರುತಿಸ ಲಾಗಿದೆ. ಅನಾರೋಗ್ಯಕ್ಕೆ ಮಣಿಪಾಲ ಹಾಗೂ ಉಡುಪಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದ ಇವರು ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರೀ ಮಳೆಗೆ ಭೂಕುಸಿತ; ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತವಾಗುತ್ತಿದೆ. ಇದರಿಂದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಬಾಲ್ಟಾಲ್ ಮಾರ್ಗದಲ್ಲಿ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬಳು ಸಿಲುಕಿ ಮೃತಪಟ್ಟಿದ್ದಾರೆ. ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಲ್ಟಾಲ್ ಮಾರ್ಗದಲ್ಲಿ ಭೂಕುಸಿತವಾಗಿದೆ. ಭೂಕುಸಿತದಲ್ಲಿ ಸಿಲುಕಿದ ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸ್ಥಳದಲ್ಲಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿರುವ ಯಾತ್ರಿಗಳ […]
15 ಗಂಟೆಯಲ್ಲೇ ಪೋಕ್ಸೊ ವಿಶೇಷ ಪಿಪಿ ವಿರುದ್ಧದ ಪ್ರಕರಣಕ್ಕೆ ತಡೆಯಾಜ್ಞೆ..!

ಉಡುಪಿ: ಜಿಲ್ಲೆಯ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈಟಿ.ರಾಘವೇಂದ್ರ ಸೇರಿದಂತೆ ಮನೋಜ್ ಹಾಗು ಸಂಜಯ್ ವಿರುದ್ದ ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದ ಜಾತಿನಿಂದನೆ ಪ್ರಕರಣಕ್ಕೆ 15 ಗಂಟೆಯ ಅವಧಿಯಲ್ಲೇ ಕರ್ನಾಟಕ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿ ಆದೇಶಿಸಿದೆ.ಉಡುಪಿ ಮಹಿಳಾ ಠಾಣೆಯಲ್ಲಿ ಜು.15 ರಂದು ದಾಖಲಾಗಿದ್ದ ಜಾತಿನಿಂದನೆ ಪ್ರಕರಣವನ್ನು ಪ್ರಶ್ನಿಸಿ ವೈ.ಟಿ ರಾಘವೇಂದ್ರ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ತುರ್ತು ವಿಚಾರಣೆ ನಡೆಸಿದ್ದ ನ್ಯಾ. ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ಪೀಠವು, ತಾತ್ಕಾಲಿಕ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ. ವೈ.ಟಿ ರಾಘವೇಂದ್ರ ಅವರ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ “ಐಒಟಿ ಅಪ್ಲಿಕೇಶನ್‌ಗಳ”ಬಗ್ಗೆ ಮಾರ್ಗದರ್ಶನ

ಉಡುಪಿ, ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಅತುಲ್ ಭಟ್, ಆದಿತ್ಯಾ, ಬಲರಾಮ್ ಭಾರದ್ವಜ್, ರಾಖಿ, ಅಲಕ ಮತ್ತು ರಜನಿ ಇವರು ದಿನಾಂಕ 15 ಜುಲೈ ರಂದು “ಕ್ಯಾನ್ವಾ ಬೇಸಿಕ್ಸ್ಮತ್ತು ಐಒಟಿ ಅಪ್ಲಿಕೇಶನ್‌ಗಳ” ಬಗ್ಗೆ ಅನಂತೇಶ್ವರ ಆಂಗ್ಲ ಮಾಧ್ಯಮ ಫ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮ ಮುಖ್ಯ ಉದ್ದೇಶ ವಿದ್ಯಾರ್ಥಿಗಳಲ್ಲಿ ನಾವೀನ್ಯತೆ ಮತ್ತು ಡಿಜಿಟಲ್ ಸಾಕ್ಷರತೆಯ ಬಗ್ಗೆ ಮಾಹಿತಿ ನೀಡುವುದಾಗಿದೆ. ಈ ಕಾರ್ಯಕ್ರಮದಲ್ಲಿ ಅನಂತೇಶ್ವರ ಆಂಗ್ಲ ಮಾಧ್ಯಮ ಫ್ರೌಢ ಶಾಲೆಯ […]
4ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

ಜೈಪುರ: ರಾಜಸ್ಥಾನದ ಸಿಕಾರ್‌ನ ಶಾಲೆಯೊಂದರಲ್ಲಿ 4ನೇ ತರಗತಿ ವಿದ್ಯಾರ್ಥಿನಿ ಒಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಆದರ್ಶ ವಿದ್ಯಾ ಮಂದಿರ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಪ್ರಾಚಿ ಕುಮಾವತ್ (9). ಈ ಕುರಿತು ಪ್ರತಿಕ್ರಿಯಿಸಿದ ಶಾಲೆಯ ಪ್ರಾಂಶುಪಾಲ ನಂದಕಿಶೋರ್, ಎಲ್ಲಾ ವಿದ್ಯಾರ್ಥಿಗಳು ಮಧ್ಯಾಹ್ನ ಊಟ ಮಾಡುತ್ತಿದ್ದರು. 4ನೇ ತರಗತಿಯ ವಿದ್ಯಾರ್ಥಿನಿ ಟಿಫಿನ್ ಬಾಕ್ಸ್ ತೆರೆಯುವಾಗ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿದ್ದಾಳೆ. ಶಾಲಾ ಸಿಬ್ಬಂದಿ ತಕ್ಷಣ ಪ್ರಜ್ಞಾಹೀನ ಮಗುವನ್ನು ದಂತಾರಾಮ್‌ಗಢ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ವೈದ್ಯರು […]