ಕುಂದಾಪುರ:ವೆಂಕಟರಮಣ ಪದವಿ ಪೂರ್ವ ಕಾಲೇಜು:ಪ್ರೋತ್ಸಾಹ ಧನ ವಿತರಣೆ

ಕುಂದಾಪುರ : ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ರವರು ಪ್ರತಿ ವರ್ಷ 25,000 ರೂಪಾಯಿಯ ಪ್ರೋತ್ಸಾಹ ಧನವನ್ನು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ PCMB ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗೆ ನೀಡುತ್ತಾ ಬಂದಿದ್ದು, 2024- 2025 ನೇ ಶೈಕ್ಷಣಿಕ ಸಾಲಿನಲ್ಲಿ 597 ಅಂಕ ಗಳಿಸಿ, ರಾಜ್ಯಕ್ಕೆ 4 ನೇ ಸ್ಥಾನಿಯಾಗಿರುವ  ಹರಿಕೃಪಾನಿಗೆ ವೆಂಕಟರಮಣ ಸಂಸ್ಥೆಯ ಸಂಸ್ಥಾಪನಾ ದಿನದಂದು ನಡೆದ ಸಮಾರಂಭದಲ್ಲಿ ಸುಮಾ. ಯು ಪುತ್ರನ್ ಪ್ರೋತ್ಸಾಹ ಧನದ ಚೆಕ್ ಅನ್ನು […]

ಮೂಡುಬಿದಿರೆ:ಆಳ್ವಾಸ್‌ನಲ್ಲಿ ನಡೆದ 10 ದಿನಗಳ ಎನ್‌ಸಿಸಿ ಶಿಬಿರ ಸಂಪನ್ನ

ಮೂಡುಬಿದಿರೆ: ನ್ಯಾಷನಲ್ ಕ್ಯಾಡೆಟ್ ಕಾರ್ಪ್ಸ್ನ (ಎನ್‌ಸಿಸಿ) ೨೧ ಕರ್ನಾಟಕ ಬೆಟಾಲಿಯಾನ್‌ನಿಂದ ಆಳ್ವಾಸ್‌ನ ವಿದ್ಯಾಗಿರಿಯ ಆವರಣದಲ್ಲಿ 10 ದಿನಗಳ ಸಂಯೋಜಿತ ವಾರ್ಷಿಕ ತರಬೇತಿ ಶಿಬಿರ ನಡೆಯಿತು. ಮಂಗಳೂರಿನ ಎನ್‌ಸಿಸಿ ಸಮೂಹದ ಮುಖ್ಯ  ಕಛೇರಿಯ ವ್ಯಾಪ್ತಿಗೊಳಪಟ್ಟ ವಿವಿಧ ಬ್ಯಾಟಾಲಿಯನ್‌ಗಳಿಂದ 598 ಎನ್‌ಸಿಸಿ ಕೆಡೆಟ್‌ಗಳು ಭಾಗವಹಿಸಿದ್ದರು.ಈ ಶಿಬಿರವು ಮೈಸೂರಿನಲ್ಲಿ ನಡೆಯಲಿರುವ ಥಲ್ ಸೇನಾ ಸ್ಪರ್ಧೆಗೆ ಎನ್‌ಸಿಸಿ ಕೆಡೆಟ್‌ಗಳನ್ನು ತರಬೇತಿಗೊಳಿಸುವ ಉದ್ದೇಶವನ್ನು ಹೊಂದಿತ್ತು. ಸುಮಾರು 133 ಕೆಡೆಟ್‌ಗಳಿಗೆ ಫೈರಿಂಗ್, ಬ್ಯಾಟಲ್ ಕ್ರಾಫ್ಟ್, ಡ್ರಿಲ್, ನಕ್ಷೆ ಓದುವಿಕೆ, ರೈಫಲ್‌ನ ನಿರ್ವಹಣೆ, ಫೀಲ್ಡ್ ಕ್ರಾಫ್ಟ್,  ಮತ್ತು ಮಿಲಿಟರಿ […]

ರಾಜ್ಯದ ಕಾಲೇಜುಗಳಲ್ಲಿ ಇನ್ಮುಂದೆ ಸಿಸಿ ಟಿವಿ ಅಳವಡಿಸೋದು ಕಡ್ಡಾಯ: ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಆದೇಶ

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಜುಲೈ 21 ರೊಳಗೆ ಸಿಸಿಟಿವಿ ಅಳವಡಿಸಿ, ಇದರ ವಿವರವನ್ನು ಉನ್ನತ ಶಿಕ್ಷಣ ಇಲಾಖೆಗೆ ಒದಗಿಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚಿಸಿದ್ದಾರೆ. ಇಲ್ಲವಾದಲ್ಲಿ ಕ್ರಮದ ಎಚ್ಚರಿಕೆ ನೀಡಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ, ಅಕ್ರಮ ಚಟುವಟಿಕೆ ತಡೆಯಲು ಸಿಸಿಟಿವಿ:ರಾಜ್ಯದ ಶಾಲಾ-ಕಾಲೇಜುಗಳಲ್ಲಿ ರ‍್ಯಾಗಿಂಗ್, ಡ್ರಗ್ಸ್ ಸೇವನೆ, ಲೈಂಗಿಕ ದೌರ್ಜನ್ಯ ಮತ್ತು ಇತರ ಅನೈತಿಕ ಚಟುವಟಿಕೆಗಳನ್ನು ನಿಯಂತ್ರಿಸಲು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ರಾಜ್ಯದ ಎಲ್ಲಾ ಸಾರ್ವಜನಿಕ, ಖಾಸಗಿ ವಿಶ್ವವಿದ್ಯಾಲಯಗಳು, ಸರ್ಕಾರಿ, ಖಾಸಗಿ […]

ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಬ್ರಹ್ಮಾವರ ತಾಲೂಕಿನ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಉಡುಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಾವಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಕೊಡೆ ವಿತರಣಾ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮವನ್ನು ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ರಮೇಶ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಂಚಾಲಕರಾದ ಪ್ರಸನ್ನ ಕುಮಾರ್ ಶೆಟ್ಟಿರವರು ತುರ್ತು […]

ಬಿಹಾರ: ಆಗಸ್ಟ್ 1ರಿಂದ 125 ಯೂನಿಟ್ ಉಚಿತ ವಿದ್ಯುತ್; ಸಿಎಂ ನಿತೀಶ್ ಕುಮಾರ್ ಘೋಷಣೆ

ಪಟ್ನಾ: ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಎಲ್ಲಾ ಗೃಹಬಳಕೆದಾರರಿಗೆ ಮಾಸಿಕ 125 ಯುನಿಟ್‌ಗಳವರೆಗೆ ಉಚಿತ ವಿದ್ಯುತ್‌ ನೀಡುವುದಾಗಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಗುರುವಾರ ಘೋಷಿಸಿದ್ದಾರೆ.ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಿಎಂ ಈ ಮಾಹಿತಿ ಹಂಚಿಕೊಂಡಿದ್ದು, ಈ ಯೋಜನೆಯಿಂದಾಗಿ 1.67 ಕೋಟಿ ಮನೆಗಳಿಗೆ ಸದುಪಯೋಗವಾಗಲಿದೆ ಎಂದು ಹೇಳಿದ್ದಾರೆ. ಆಗಸ್ಟ್‌ 1ರಿಂದ ಈ ಯೋಜನೆ ಜಾರಿಗೆ ಬರಲಿದೆ. ಅಂದರೆ ಜುಲೈ ತಿಂಗಳಲ್ಲಿ ಬಳಕೆ ಮಾಡಿದ ವಿದ್ಯುತ್‌ಗೆ 125 ಯುನಿಟ್‌ವರೆಗೂ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದಿದ್ದಾರೆ. ಇದೇ ವೇಳೆ, ನಾವು ಈಗಾಗಲೇ ಅಗ್ಗದ […]