ಕಾರ್ಕಳ: ಶಾಸಕ ಸುನಿಲ್ ಕುಮಾರ್ ಅವರಿಗೆ ಪಿತೃವಿಯೋಗ

ಕಾರ್ಕಳ: ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವ ವಿ.ಸುನಿಲ್ ಕುಮಾರ್ ಅವರ ತಂದೆಯವರಾದ ವಾಸುದೇವ (87) ಅವರು ಗುರುವಾರ ಮುಂಜಾನೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗಷ್ಟೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ, ಪುತ್ರರಾದ ಶಾಸಕ ಸುನಿಲ್ ಕುಮಾರ್ ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ವರ್ಗವನ್ನು ಅಗಲಿದ್ದಾರೆ. ಮೃತರ ಪಾರ್ಥೀವಶರೀರ ಇಂದು ಮಧ್ಯಾಹ್ನ 1 ಗಂಟೆಗೆ ಕಾರ್ಕಳದ ಕಲಂಬಾಡಿಪದವಿನ ಶಾಸಕರ ನಿವಾಸಕ್ಕೆ ಆಗಮಿಸಲಿದ್ದು ಸಾರ್ವಜನಿಕರ […]
ಮೀನುಗಾರರ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ

ಬೆಂಗಳೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಮೀನುಗಾರಿಕೆಗೆ ತೆರಳಿ ದೋಣಿ ಮುಗುಚಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಂತಾಪ ಸೂಚಿಸಿದ್ದಾರೆ. ಕಳೆದ ಮಂಗಳವಾರ (ಜುಲೈ 15) ಮೀನುಗಾರರು ನಾಪತ್ತೆಯಾದ ಕ್ಷಣದಿಂದಲೂ ಜಿಲ್ಲಾಡಳಿತದೊಂದಿಗೆ ಸತತ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣಕ್ಕೂ ಮಾಹಿತಿ ಪಡೆಯುತ್ತಿದ್ದೆ. ಇಂದು ಮೀನುಗಾರರು ಜೀವಂತವಾಗಿ ವಾಪಸ್ ಬರದ ವಿಷಯ ಕೇಳಿ ತೀವ್ರ ದುಃಖವಾಯಿತು. ಮೃತರಾದ ರೋಹಿತ್ […]
ಉಡುಪಿ: ಯುವತಿಗೆ ಜಾತಿನಿಂದನೆ: ಪೋಕ್ಸೊ ವಿಶೇಷ ಪಿಪಿ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

ಉಡುಪಿ: ಉಡುಪಿ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಸಹಿತ ಮೂವರು ಆರೋಪಿಗಳ ವಿರುದ್ದ ಅತ್ಯಾಚಾರ ಪ್ರಕರಣವೊಂದರ ಸಂತ್ರಸ್ತೆ ನೀಡಿದ ದೂರಿನಂತೆ ಉಡುಪಿ ಮಹಿಳಾ ಠಾಣೆಯಲ್ಲಿ ಜಾತಿನಿಂದನೆ ಪ್ರಕರಣ ದಾಖಲಾಗಿದೆ. ಬ್ರಹ್ಮಾವರದ ಹಾವಂಜೆ ಗ್ರಾಮದ ಸಂತ್ರಸ್ತ ಯುವತಿ ಹಾಗೂ ಸಂಜಯ್ ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಈ ಅವಧಿಯಲ್ಲಿ 2024ರ ಜು.11 ಹಾಗು ನ.17ರಂದು ಯುವತಿಯನ್ನು ತಿರುಗಾಡಲೆಂದು ಕರೆದುಕೊಂಡು ಹೋಗಿ, ಖಾಸಗಿ ಹೊಟೇಲಿನಲ್ಲಿ ರೂಮ್ ಮಾಡಿ, ದೈಹಿಕ ಸಂಪರ್ಕ ಬೆಳೆಸಿದ್ದನು. ಮದುವೆಯಾಗುವುದಾಗಿ ನಂಬಿಸಿ ಆತ ತನ್ನ […]
ಉಡುಪಿಯ ಹೀರೋಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಉಡುಪಿಯ ಹೀರೋಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 🔹ಸೇಲ್ಸ್ (Male/Female)- 4 post🔹ಸ್ಪೇರ್ಸ್ ಮ್ಯಾನೇಜರ್ – 1 post🔹ಅಸಿಸ್ಟೆಂಟ್ PDI -1 post🔹PDI ಮ್ಯಾನೇಜರ್ -1 post🔹ಮೆಕಾನಿಕ್ -3 post ಆಸಕ್ತ ಅಭ್ಯರ್ಥಿಗಳು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ನಂಬರ್ ಗೆ ವಾಟ್ಸಪ್ ಅಥವಾ ಇಮೇಲ್ ಮಾಡಿ.+91 [email protected]
ಸಾಹೇಬರಕಟ್ಟೆ ಜೈ ಗಣೇಶ್ ಸೌಹಾರ್ದ ಸಹಕಾರಿ ಸಂಘ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಕೋಟ: ಸಾಹೇಬರಕಟ್ಟೆ ಜೈ ಗಣೇಶ್ ಸೌಹಾರ್ದ ಸಂಸ್ಥೆಯ ನೂತನ ಕಟ್ಟಡ ಸೌಹಾರ್ದ ಸಿರಿ ಇತ್ತೀಚೆಗೆ ಉದ್ಘಾಟನೆಗೊಂಡಿದ್ದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಜು.16ರಂದು ಇಲ್ಲಿಗೆ ಭೇಟಿ ನೀಡಿದರು. ಈ ಸಂದರ್ಭ ಸಂಘದ ಅಧ್ಯಕ್ಷ ಅಶೋಕ್ ಪ್ರಭು ಸಾಹೇಬರಕಟ್ಟೆ ಅವರು ಸಂಸದರನ್ನು ಸಮ್ಮಾನಿಸಿದರು. ಶಿರಿಯಾರ ಗ್ರಾ.ಪಂ. ಅಧ್ಯಕ್ಷ ಸುಧೀಂದ್ರ ಶೆಟ್ಟಿ, ಶಿರಿಯಾರ ವಿ.ಎಸ್.ಎಸ್. ಅಧ್ಯಕ್ಷ ಪ್ರದೀಪ್ ಬಲ್ಲಾಳ್, ಜೈ ಗಣೇಶ್ ಸಂಘದ ಸಾಪಕಾಧ್ಯಕ್ಷಶಿರಿಯಾರ ಪ್ರಭಾಕರ ನಾಯಕ್, ಸಂಘದ ಉಪಾಧ್ಯಕ್ಷ ಎಚ್. ನಾರಾಯಣ ಶೆಣೈ ಗಾವಳಿ, ನಿರ್ದೇಶಕರಾದ ರಾಘವೇಂದ ಹೆಗ್ಡೆ […]