ಎಂಜಿನ್ ವೈಫಲ್ಯ: ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನ ತುರ್ತು ಭೂ ಸ್ಪರ್ಶ.!

ಮುಂಬೈ: ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನವು ಎಂಜಿನ್‌ ವೈಫಲ್ಯದ ಕಾರಣ ಮುಂಬೈನಲ್ಲಿ ಬುಧವಾರ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ.ವಿಮಾನವು ರಾತ್ರಿ 9.52 ಗಂಟೆಗೆ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿ ಒಟ್ಟು ಎಷ್ಟು ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದರು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ದೆಹಲಿಯಿಂದ ಗೋವಾ ಮಾರ್ಗದಲ್ಲಿ ಸಾಗುತ್ತಿದ್ದ ವಿಮಾನದಲ್ಲಿ ಒಂದು ಎಂಜಿನ್‌ ವೈಫಲ್ಯ ಕಂಡುಬಂದ ಕೂಡಲೇ ಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗಂಗೊಳ್ಳಿ ದೋಣಿ ದುರಂತ: ಮೂರನೇ ಮೀನುಗಾರನ ಮೃತದೇಹ ಪತ್ತೆ

ಉಡುಪಿ: ಗಂಗೊಳ್ಳಿ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರ ಸುರೇಶ್ ಖಾರ್ವಿ ಅವರ ಮೃತದೇಹ ಗುರುವಾರ ಬೆಳಿಗ್ಗೆ (ಜು.16) ಕೋಡಿ ಸೀವಾಕ್ ಸಮೀಪ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಇದರೊಂದಿಗೆ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಶವ ಪತ್ತೆಯಾಗಿದೆ. ಗಂಗೊಳ್ಳಿ ಬಂದರಿನಿಂದ ಜು. 15ರಂದು ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ ಶ್ರೀ ಹಕ್ರೇಮಠ ಯಕ್ಷೇಶ್ವರಿ ಎಂಬ ಗಿಲ್‌‌ನೆಟ್‌ ನಾಡ ದೋಣಿ ಸಮುದ್ರದ ಅಲೆಯ ರಭಸಕ್ಕೆ ಸಿಲುಕಿ ಮಗುಚಿದ್ದು, ನಾಲ್ವರ ಪೈಕಿ ಓರ್ವ ಮೀನುಗಾರ ಈಜಿ ದಡ ಸೇರಿದ್ದರು. ಜಗನ್ನಾಥ ಖಾರ್ವಿ, […]

ಮಣಿಪಾಲ: ಸೆಕ್ಯುರಿಟಿ ಗಾರ್ಡ್ ನಿಂದ ವೇಶ್ಯಾವಾಟಿಕೆ ದಂದೆ; ಯುವತಿಯ ರಕ್ಷಣೆ

ಉಡುಪಿ: ಮಣಿಪಾಲ ಪೋಲಿಸ್ ಠಾಣೆಯ ವ್ಯಾಪ್ತಿಯ ಅಪಾರ್ಟ್‌ಮೆಂಟ್ ಒಂದರಲ್ಲಿ ಅಪಾರ್ಟ್​​ಮೆಂಟ್ ಸೆಕ್ಯೂರಿಟಿ ಗಾರ್ಡ್ ವೈಶ್ಯವಾಟಿಕೆ ದಂದೆಗೆ ಕೈ ಹಾಕಿ ಪೋಲಿಸರ ಅತಿಥಿಯಾಗಿದ್ದಾನೆ. ಅಪಾರ್ಟ್​​ಮೆಂಟ್ ಮನೆಯ ಮಾಲೀಕರು ಮನೆಯ ಬೀಗವನ್ನು ಸೆಕ್ಯೂರಿಟಿ ಗಾರ್ಡ್ ಬಳಿ ಕೊಟ್ಟು ಹೊರಗೆ ಹೋದಾಗ , ಚಾಲಾಕಿ ಸೆಕ್ಯೂರಿಟಿ ಗಾರ್ಡ್ ಮನೆಯ ಕೀಯನ್ನ ಬಳಸಿಕೊಂಡು ವೇಶ್ಯಾವಾಟಿಕೆ ವ್ಯವಹಾರಕ್ಕೆ ಬಳಸಿದ್ದಾನೆ. ವೇಶ್ಯಾವಾಟಿಕೆ ದಂದೆಯಲ್ಲಿ ತೊಡಗಿದ್ದ ಮಂದಿಗೆ ಮನೆಯ ಕೀ ಯನ್ನ ಒಂದು ಸಾವಿರ ರೂಪಾಯಿಗಳಿಗೆ ನೀಡ್ತಿದ್ದ ಅನ್ನೋ ಮಾಹಿತಿ ಕೂಡ ಲಭ್ಯವಾಗಿದೆ. ಸದ್ಯ ಓರ್ವ ಯುವತಿಯನ್ನು […]

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕುಪ್ಮಾ ಸಮಿತಿ ರಚನೆ: ಡಾ. ಮೋಹನ್ ಆಳ್ವ

ಮಂಗಳೂರು: ಕರ್ನಾಟಕ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘ (ಕುಪ್ಮಾ)ವು ಜು. 20ರಿಂದ ಸೆಪ್ಟೆಂಬರ್ 12ರವರೆಗೆ ಜಿಲ್ಲಾವಾರು ಖಾಸಗಿ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಸದಸ್ಯತ್ವ ಅಭಿಯಾನ ನಡೆಸಲಿದೆ. ಅಲ್ಲದೆ ರಾಜ್ಯವ್ಯಾಪಿ ಕುಪ್ಮಾ ಜಿಲ್ಲಾ ಸಮಿತಿ ಗಳನ್ನು ರಚಿಸುವ ಮೂಲಕ ಕುಪ್ಮಾ ಸಂಘಟನೆಯನ್ನು ಬಲಪಡಿಸಲಾಗುವುದು ಎಂದು ಕುಪ್ಮಾ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ 3500ಕ್ಕೂ ಅಧಿಕ ಅನುದಾನ ರಹಿತ […]

ಮಂಗಳೂರು: ಡ್ರಗ್ಸ್ ಮಾರಾಟ ಆರೋಪ; 8 ಮಂದಿ ವಿದ್ಯಾರ್ಥಿಗಳ ಬಂಧನ.

ಮಂಗಳೂರು: ನಗರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಎಂಟು ಮಂದಿ ವಿದ್ಯಾರ್ಥಿಗಳನ್ನು ಪಾಂಡೇಶ್ವರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ರಾಹುಲ್, ಸಂಗೀತ್ ಕೃಷ್ಣ, ಸೂರಜ್, ಸಂಜಯ್, ಅಶ್ವಂತ್, ಅಬ್ದುಲ್ ಜಬ್ಬಾರ್ , ರಿಚರ್ಡ್, ಅನುರಾಗ್ ಎಂದು ಗುರುತಿಸಲಾಗಿದೆ. ಆರೋಪಿಗಳು ನಗರದ ಬಂದರ್ ದಕ್ಕೆಯಲ್ಲಿ ಎಂಡಿಎಂಎ ಮಾರಾಟದಲ್ಲಿ ನಿರತರಾಗಿದ್ದಾಗ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ನಗರದ ಕಾಲೇಜೊಂದರ ವಿದ್ಯಾರ್ಥಿಗಳಾಗಿರುವ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, […]