ಕೃಷಿ ಅಭಿವೃದ್ಧಿಗೆ ರೂ.24 ಸಾವಿರ ಕೋಟಿ ಯೋಜನೆ; ಕೇಂದ್ರ ಸಚಿವ ಸಂಪುಟ ಅನುಮೋದನೆ.

ನವದೆಹಲಿ: ಕೃಷಿ ಹಾಗೂ ಸಂಬಂಧಿತ ಕ್ಷೇತ್ರಗಳ ಅಭಿವೃದ್ಧಿಗೆ ಇನ್ನಷ್ಟು ಉತ್ತೇಜನ ನೀಡಲು ‘ಪ್ರಧಾನಮಂತ್ರಿ ಧನ–ಧಾನ್ಯ ಯೋಜನೆ’ಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಈ ಯೋಜನೆಯು ದೇಶದ 100 ಜಿಲ್ಲೆಗಳಲ್ಲಿ ಅನುಷ್ಠಾನಗೊಳ್ಳಲಿದೆ. ಈ ಯೋಜನೆಯ ಅವಧಿ ಆರು ವರ್ಷಗಳು. ವಾರ್ಷಿಕ ₹24 ಸಾವಿರ ಕೋಟಿ ವೆಚ್ಚ ಒಳಗೊಂಡಿದೆ. ಈ ಯೋಜನೆಯಿಂದ 1.7 ಕೋಟಿ ರೈತರಿಗೆ ಅನುಕೂಲವಾಗಲಿದೆ. ಈ ಯೋಜನೆ ಬಗ್ಗೆ 2025–26ರ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಕೃಷಿ ಉತ್ಪಾದಕತೆ ಹೆಚ್ಚಳ, ಬೆಳೆಗಳಲ್ಲಿ ವೈವಿಧ್ಯ, ಸುಸ್ಥಿರ ಕೃಷಿ […]

ಉಡುಪಿ:ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಸಾಮಾನ್ಯ ಪದವಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 14 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ […]

ಉಡುಪಿ:ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 24 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

ಉಡುಪಿ:ಬಾಲಕಿ ನಾಪತ್ತೆ

ಉಡುಪಿ: ಮಳವಳ್ಳಿ ತಾಲೂಕು ಹಡ್ಲಿ ಗ್ರಾಮದಲ್ಲಿ ವಾಸವಿದ್ದ ಸೌಜನ್ಯ ಗೌಡ (15) ಎಂಬ ಬಾಲಕಿಯು ಕಾಣೆಯಾಗಿರುವ ಬಗ್ಗೆ ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 4 ಅಡಿ 9 ಇಂಚು ಎತ್ತರ, ಎಣ್ಣೆ ಕೆಂಪು ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾದ ಬಾಲಕಿಯ ಮಾಹಿತಿ ದೊರೆತಲ್ಲಿ ಯಸಳೂರು ಪೊಲೀಸ್ ಠಾಣೆಯ ದೂ.ಸಂಖ್ಯೆ: 0817-3278212, ಪಿ.ಎಸ್.ಐ ಮೊ.ನಂ: 9480804762, ಸಕಲೇಶಪುರ ಗ್ರಾಮಾಂತರ ವೃತ್ತದ ಸಿಪಿಐ ಮೊ.ನಂ: 9480804733 ಹಾಗೂ ಸಕಲೇಶಪುರ ಉಪವಿಭಾಗದ ಡಿ.ವೈ.ಎಸ್.ಪಿ ಮೊ.ನಂ:9480804723 ಅನ್ನು […]