ಉಡುಪಿ:ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ :ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಬಾಲಕಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸಾಮಾನ್ಯ ಪದವಿ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಆಗಸ್ಟ್ 14 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ಅಥವಾ ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 […]

ಉಡುಪಿ:ಮುಖ್ಯಮಂತ್ರಿ ಅರೋಗ್ಯ ವಿಮಾ ಕಾರ್ಡ್ ನವೀಕರಣ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕುಟುಂಬದ ಸದಸ್ಯರಿಗೆ ವಿತರಿಸಲಾದ ಮುಖ್ಯಮಂತ್ರಿ ಅರೋಗ್ಯ ವಿಮಾ ಕಾರ್ಡ್ ಅನ್ನು ಪ್ರಸಕ್ತ ಸಾಲಿನಲ್ಲಿನವೀಕರಿಸಲಾಗುತ್ತಿದ್ದು, ಕಾರ್ಡ್ ಹೊಂದಿರುವ ಕುಟುಂಬದ ಯಾವುದಾದರೂ ಸದಸ್ಯರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಬಗ್ಗೆ ಮುಚ್ಚಳಿಕೆ ಪತ್ರ ಹಾಗೂ ಹಳೆಯ ಆರೋಗ್ಯ ಕಾರ್ಡ್ ಪ್ರತಿಯೊಂದಿಗೆ ಜುಲೈ 21 ರ ಒಳಗಾಗಿ ಉಡುಪಿ ನಗರಸಭಾ ಕಚೇರಿಗೆ ಹಾಜರಾಗಿ ದಾಖಲೆಗಳನ್ನು ಸಲ್ಲಿಸಬೇಕು. ದಾಖಲೆ ಸಲ್ಲಿಸಿದವರ ಕಾರ್ಡ್ಗಳನ್ನು ಮಾತ್ರ ನವೀಕರಿಸಲಾಗುವುದು ಎಂದು ನಗರಸಭೆ […]

ಕಾರ್ಕಳ ಪುರಸಭೆ, ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ

ಉಡುಪಿ: ಕಾರ್ಕಳ ಪುರಸಭೆ ಹಾಗೂ ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಇಂದು ದಿಢೀರ್ ಭೇಟಿ ನೀಡಿ, ಕಡತಗಳ ಪರಿಶೀಲನೆ ನಡೆಸಿದರು. ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿದ್ದು, ಬಾಕಿ ಉಳಿದಿರುವ ಕಡತಗಳು ಹಾಗೂ ವಿಳಂಬದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಖಾತಾ ವರ್ಗಾವಣೆ, ಜನನ-ಮರಣ ಪ್ರಮಾಣಪತ್ರ, ಉದ್ದಿಮೆ ಪರವಾನಗಿ ಹಾಗೂ ಇತರೆ ಕಾರ್ಯಗಳಲ್ಲಿ ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿದ್ದವು. ಈ ದೂರುಗಳ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪುರಸಭೆ […]

ಇಂದು (ಜು.19) ಮಂಗಳೂರು, ಬಂಟ್ವಾಳ, ಉಳ್ಳಾಲ ತಾಲೂಕಿನ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ವ್ಯಾಪಕ ಮಳೆಯಾಗುತ್ತಿರುವುದರಿಂದ, ಇಂದು ಶನಿವಾರ ಜು.19ರಂದು ಮಂಗಳೂರು, ಬಂಟ್ವಾಳ, ಉಳ್ಳಾಲ ತಾಲೂಕಿನಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಗಳೂರು, ಬಂಟ್ವಾಳ ಹಾಗೂ ಉಳ್ಳಾಲ ತಾಲೂಕುಗಳ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.