ಧರ್ಮಸ್ಥಳ ಪ್ರಕರಣ ಎಸ್‌ಐಟಿಗೆ ಹಸ್ತಾಂತರ: ರಾಜ್ಯ ಸರಕಾರದ ನಿಲುವು ಉತ್ತಮವಾಗಿದೆ; ಕ್ಷೇತ್ರದ ವಕ್ತಾರ ಪಾರ್ಶ್ವನಾಥ್ ಜೈನ್

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ಹಸ್ತಾಂತರಿಸಿರುವ ರಾಜ್ಯ ಸರಕಾರದ ನಿಲುವು ಉತ್ತಮವಾಗಿದೆ ಎಂದು ಕ್ಷೇತ್ರ ಧರ್ಮಸ್ಥಳದ ವಕ್ತಾರರಾದ ಕೆ. ಪಾರ್ಶ್ವನಾಥ್ ಜೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಈ ವಿಚಾರ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕ ವಾರ್ತೆಗಳು, ಊಹಾ ಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿವೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು […]
ಉಡುಪಿ: ಲೋಕೋಪಯೋಗಿ ಕ್ವಾಟ್ರಸ್ ನಲ್ಲಿ ಮತ್ತೆ ಕಳ್ಳತನ.

ಉಡುಪಿ: ಪೊಲೀಸ್ ಜ್ಯಾಕೆಟ್ ನಲ್ಲಿ ಬಂದಿದ್ದ ಕಳ್ಳರ ಗ್ಯಾಂಗ್ ವೊಂದು ಮೂರು ಮನೆಯ ಬೀಗ ಒಡೆದು ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದೋಚಿಕೊಂಡು ಪರಾರಿಯಾದ ಘಟನೆ ಉಡುಪಿ ಮಿಷನ್ ಕಂಪೌಂಡ್ ಜಂಕ್ಷನ್ ನಲ್ಲಿರುವ ಲೋಕೋಪಯೋಗಿ ಕ್ವಾಟ್ರಸ್ ನಲ್ಲಿ ಜುಲೈ 19ರಂದು ರಾತ್ರಿ ನಡೆದಿದೆ.ಇದೇ ವಸತಿ ಸಮುಚ್ಚಯದ ಆರು ಮನೆಗಳಿಗೆ ಕಳೆದ ವರ್ಷದ ಸೆ.29ರಂದು ಕಳ್ಳರು ನುಗ್ಗಿ ಲಕ್ಷಾಂತರ ರೂ. ವೌಲ್ಯದ ನಗ-ನಗದು ಕಳವು ಮಾಡಿ ಪರಾರಿಯಾಗಿದ್ದರು. ಉಡುಪಿ ನಗರ ಠಾಣೆಯಿಂದ ಅನತಿ ದೂರದಲ್ಲಿರುವ ಈ ವಸತಿ ಸಮುಚ್ಚಯದಲ್ಲಿ ಒಂಭತ್ತು […]
ತೆಂಕುತಿಟ್ಟು ಯಕ್ಷಗಾನದ ಖ್ಯಾತ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ನಿಧನ.

ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಗ್ರಾಮದ ಮಂಚಕಲ್ಲು ನಿವಾಸಿ, ಹನುಮಗಿರಿ ಮೇಳದ ಹಿರಿ ಕಲಾವಿದ, ಬಣ್ಣದ ವೇಷಧಾರಿ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ (60) ಅವರು ಜು.20 ರಂದು ಮಧ್ಯಾಹ್ನ ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕಟೀಲು 2ನೇ ಮೇಳದಲ್ಲಿ 2 ವರ್ಷ ನೇಪಥ್ಯ ಕಲಾವಿದರಾಗಿ ತಿರುಗಾಟ ಆರಂಭಿಸಿದ ಅವರು ಧರ್ಮಸ್ಥಳ ಮೇಳದಲ್ಲಿ 13 ವರ್ಷ ಹಾಗೂ ಕಟೀಲು 1ನೇ ಮೇಳದಲ್ಲಿ 8 ವರ್ಷ ಬಣ್ಣದ ವೇಷಧಾರಿಯಾಗಿ […]
ಧರ್ಮಸ್ಥಳ: ಪ್ರಕರಣವನ್ನು ವಿಶೇಷ ತನಿಖಾ ತಂಡ(SIT)ಕ್ಕೆ ವರ್ಗಾಯಿಸಿ ರಾಜ್ಯ ಸರಕಾರ ಆದೇಶ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವಿನ ಕುರಿತ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ. ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಾಂತಿ ಅವರ ನೇತೃತ್ವದ ತಂಡದಲ್ಲಿ ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರ್ದೇಶಕ ಎಂ.ಎನ್.ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ […]
ಉಡುಪಿಯ ಪ್ರಸಿದ್ಧ ಮೆರೈನ್ ಮತ್ತು ಪಿವಿಸಿ ಕಂಪೆನಿಯಲ್ಲಿ ಉದ್ಯೋಗವಕಾಶ!
