‘ಬನ್ನಂಜೆ 90 ಉಡುಪಿ ನಮನ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ.

ಉಡುಪಿ: ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಅಪೂರ್ವವಾದ ವಿಧ್ವತ್ ನಿಂದ ಹೆಸರು ಮಾಡಿದ ವಿದ್ಯಾವಾಚಸ್ಪತಿ ಪದ್ಮಶ್ರೀ ಬನ್ನಂಜೆ ಗೋವಿಂದಾಚಾರ್ಯ ಅವರ 90ನೇ ಜನ್ಮ ದಿನಾಚರಣೆ ಅಂಗವಾಗಿ ಉಡುಪಿ ಅಭಿಮಾನಿಗಳ ವತಿಯಿಂದ ಅಗಸ್ಟ್ 3ರಂದು ಎಂಜಿಎಂ ಕಾಲೇಜಿನಲ್ಲಿ ನಡೆಯಲಿರುವ “ಬನ್ನಂಜೆ 90 ಉಡುಪಿ ನಮನ ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಭಾನುವಾರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿ, ನಮ್ಮ ಪರ್ಯಾಯದ ಅವಧಿಯಲ್ಲಿ ನಡೆಯುತ್ತಿರುವ ಮಂಡಲೋತ್ಸವ ಸಂದರ್ಭದಲ್ಲಿ ಬನ್ನಂಜೆ […]
ಮಕ್ಕಳು, ಮಹಿಳೆಯರು ಕಲಿತರಷ್ಟೇ ಯಕ್ಷಗಾನ ಉಳಿವು: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ಯಕ್ಷಗಾನ ಉಳಿದು ಬೆಳೆಯಬೇಕಾದರೆ ಮಕ್ಕಳಿಗೆ ಹಾಗೂ ಕಲಾ ಸಂಘಟನೆ ಆಗಬೇಕಾದರೆ ಮಹಿಳೆಯರಿಗೆ ಯಕ್ಷಗಾನ ಕಲಿಸುವಿಕೆಗೆ ಒತ್ತು ನೀಡುವ ಅಗತ್ಯವಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಕಾರದಲ್ಲಿ ಬೆಂಗಳೂರಿನ ರಂಗಸ್ಥಳ ಯಕ್ಷಮಿತ್ರ ಕೂಟದ ಬೆಳ್ಳಿ ಹಬ್ಬ ಸಂಭ್ರಮಾಚರಣೆ ‘ರಜತಪರ್ವ -2025 ‘ ಕಾಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನ ಅಕಾಡೆಮಿ ಪ್ರಸ್ತುತ ಮಕ್ಕಳು ಮತ್ತು ಮಹಿಳಾ ಯಕ್ಷಗಾನ ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಒಬ್ಬ ಮಹಿಳೆ […]