“ದೃಶ್ಯಂ” ಸಿನಿಮಾ ಮಾದರಿಯಲ್ಲಿ ಪತಿಯನ್ನು ಕೊಂದು ಮನೆಯಲ್ಲೇ ಹೂತು ಹಾಕಿದ ಪತ್ನಿ.!

ಮುಂಬೈ: ಪ್ರಿಯಕರನ ಸಹಾಯದಿಂದ ಮಹಿಳೆಯೊಬ್ಬಳು ತನ್ನ ಗಂಡನನ್ನು ಕೊಂದು ಮನೆಯೊಳಗೆ ಗುಂಡಿ ತೋಡಿ ಹೂತು ಹಾಕಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪಾಲ್ಘರ್‌ ಜಿಲ್ಲೆಯ ನಲಸೋಪರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ವಿಜಯ್‌ ಚವಾಣ್‌(40) . ಆತನ ಪತ್ನಿ ಚಮನ್‌ ಚವಾಣ್‌ ಮತ್ತು ಪ್ರಿಯಕರ ಮೋನು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರ ಹೇಳಿಕೆ ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಟೈಲ್ಸ್ ಒಳಗೆ ಮೃತ ದೇಹ ಪತ್ತೆ:ಕಳೆದ 15 ದಿನಗಳಿಂದ ವಿಜಯ್‌ ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದ ಅವರ ಸಹೋದರ, ಸೋಮವಾರ ಬೆಳಿಗ್ಗೆ ನೇರವಾಗಿ […]

ಭ್ರಷ್ಟಾಚಾರ ಆರೋಪ: ಉಡುಪಿ ಡಿಹೆಚ್ ಒ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ; ಯಶ್ಪಾಲ್ ಸುವರ್ಣ

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಕಳೆದ 4 ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿರುವ ಬಸವರಾಜ ಜಿ. ಹುಬ್ಬಳ್ಳಿ ಯವರ ಕಾರ್ಯ ವೈಖರಿಯ ಬಗ್ಗೆ ಹಲವಾರು ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಅಧಿಕಾರಿಯ ವಿರುದ್ಧ ತನಿಖೆ ನಡೆಸಿ ಶಿಸ್ತು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಅಧೀನ ವೈದ್ಯರು, ವೈದ್ಯಾಧಿಕಾರಿಗಳು, ಶುಶ್ರೂಷಕರು ಹಾಗೂ ಸಿಬ್ಬಂದಿಗಳ ಸೇವಾ ವಿಷಯದಲ್ಲಿ ವ್ಯಾಪಕ ಭ್ರಷ್ಟಾಚಾರವೆಸಗುತ್ತಿರುವ ಬಗ್ಗೆ ಮೌಖಿಕ ದೂರುಗಳು ಬರುತ್ತಿವೆ. ಬಿಲ್ […]

ಉಡುಪಿ: ಜುಲೈ 26, 27 ರಂದು ಸಂತೆಕಟ್ಟೆಯಲ್ಲಿ ‘ಹಲಸು ಮತ್ತು ಹಣ್ಣು ಮೇಳ’; ನೀವು ಮಿಸ್ ಮಾಡ್ಕೋಬೇಡಿ.!

ಉಡುಪಿ: ಸಂತೆಕಟ್ಟೆ ಕೆಮ್ಮಣ್ಣು, ಲಿಟ್ಲ್ ಫ್ಲವರ್ ಹಾಲ್’ನಲ್ಲಿ ಜು.26, 27 ರಂದು ಹಲಸು ಮತ್ತು ಹಣ್ಣು ಮೇಳ ನಡೆಯಲಿದೆ. ರಾಜ್ಯದ ವಿವಿಧ ಮೂಲೆಗಳಿಂದ ರುಚಿಯಾದ ಮಾವು ಮತ್ತು ಹಲಸಿನ ಹಾಗೂ ಇತರ ಉತ್ಪನ್ನಗಳ ಹಾಗೂ ಶುಚಿ ರುಚಿಯಾದ ಹಣ್ಣಿನ ಖಾದ್ಯಗಳ ನೂರಾರು ಸ್ಟಾಲ್ ಗಳು ಇರಲಿವೆ. ವಿಶೇಷವಾಗಿ ಹಲಸಿನ ಬೆಣ್ಣೆ ದೋಸೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8762113078, 9620428158

ಉಡುಪಿ: ಡಾ. ಬಾಲಕೃಷ್ಣ ಎಸ್. ಮದ್ದೋಡಿ ಅವರಿಗೆ ಪ್ರತಿಷ್ಠಿತ ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ.

ಉಡುಪಿ: ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT), ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಗೌರವಾನ್ವಿತ ಅಸೋಸಿಯೇಟ್ ಪ್ರೊಫೆಸರ್ ಆಗಿರುವ ಡಾ.ಬಾಲಕೃಷ್ಣ ಎಸ್. ಮದ್ದೋಡಿ ಅವರಿಗೆ ಪ್ರತಿಷ್ಠಿತ ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಮನ್ನಣೆಯು ಪರಿಸರ ಉಸ್ತುವಾರಿ, ಶೈಕ್ಷಣಿಕ ಶ್ರೇಷ್ಠತೆ ಮತ್ತು ಸಾಮಾಜಿಕ ಸೇವೆಗೆ, ವಿಶೇಷವಾಗಿ ಆರೋಗ್ಯ ಕ್ಷೇತ್ರದಲ್ಲಿ ಅವರ ಅವಿಶ್ರಾಂತ ಸಮರ್ಪಣೆಗೆ ಸಾಕ್ಷಿಯಾಗಿದೆ. MIT ಯಲ್ಲಿ ಪ್ರೊಫೆಸರ್ಆಗಿ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿಯಾಗಿ, […]

ಉಡುಪಿ: ಲೋಕೋಪಯೋಗಿ ಕ್ವಾಟ್ರಸ್‌ನಲ್ಲಿ ಕಳ್ಳತನ ಪ್ರಕರಣ; ಇಬ್ಬರು ಕುಖ್ಯಾತ ಕಳ್ಳರ ಬಂಧನ

ಉಡುಪಿ: ಉಡುಪಿಯ ಮಿಷನ್ ಕಂಪೌಂಡ್‌ನಲ್ಲಿರುವ ಲೋಕೋಪಯೋಗಿ ವಸತಿ ಸಮುಚ್ಚಯದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತ‌ರ್ ರಾಜ್ಯ ಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಗಡ ರಮೇಶ್ ಜವಾನ್ ಸಿಂಗ್(37), ಕಾಲಿಯಾ ಕಾಲು (25) ಬಂಧಿತ ಕಳ್ಳರು. ಇವರು ಮಧ್ಯಪ್ರದೇಶ ಮೂಲದವರಾಗಿದ್ದಾರೆ. ಆರೋಪಿಗಳಿಂದ ಬೆಳ್ಳಿಯ ಆಭರಣಗಳಾದ ಕಾಲು ಗೆಜ್ಜೆ, ಸೊಂಟದ ನೇವಳ, ಕೈಬಳೆ, ಕಾಲುಂಗುರ, ಸೊಂಟದ ಪಟ್ಟಿ, ಬಟ್ಟಲು, ಕಡಗ ಮತ್ತು ಬ್ರಾಸ್‌ಲೈಟ್ ಸೇರಿ ಒಟ್ಟು 80,970 ರೂಪಾಯಿ ಮೌಲ್ಯದ 681.830 ಮಿಲಿ ಗ್ರಾಂನ ಬೆಳ್ಳಿಯ ಸೊತ್ತು, […]