ಉಡುಪಿ: ಲೋಕೋಪಯೋಗಿ ಕ್ವಾಟ್ರಸ್‌ನಲ್ಲಿ ಕಳ್ಳತನ ಪ್ರಕರಣ; ಇಬ್ಬರು ಕುಖ್ಯಾತ ಕಳ್ಳರ ಬಂಧನ.

ಉಡುಪಿ: ಉಡುಪಿಯ ಮಿಷನ್ ಕಂಪೌಂಡ್‌ನಲ್ಲಿರುವ ಲೋಕೋಪಯೋಗಿ ವಸತಿ ಸಮುಚ್ಚಯದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.ಬಂಗಡ ರಮೇಶ್ ಜವಾನ್ ಸಿಂಗ್(37), ಕಾಲಿಯಾ ಕಾಲು (25) ಬಂಧಿತ ಕಳ್ಳರು. ಇವರು ಮಧ್ಯಪ್ರದೇಶ ಮೂಲದವರಾಗಿದ್ದಾರೆ. ಆರೋಪಿಗಳಿಂದ ಬೆಳ್ಳಿಯ ಆಭರಣಗಳಾದ ಕಾಲು ಗೆಜ್ಜೆ, ಸೊಂಟದ ನೇವಳ, ಕೈಬಳೆ, ಕಾಲುಂಗುರ, ಸೊಂಟದ ಪಟ್ಟಿ, ಬಟ್ಟಲು, ಕಡಗ ಮತ್ತು ಬ್ರಾಸ್‌ಲೈಟ್ ಸೇರಿ ಒಟ್ಟು 80,970 ರೂಪಾಯಿ ಮೌಲ್ಯದ 681.830 ಮಿಲಿ ಗ್ರಾಂನ ಬೆಳ್ಳಿಯ ಸೊತ್ತು, 470 […]
ಉಡುಪಿ: ಅತ್ರಾಡಿಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

ಉಡುಪಿ: ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಉಡುಪಿ – ಪ್ರಗತಿ ಬಂಧು ಸ್ವಸಹಾಯ ಸಂಘ – ಶೌರ್ಯ ವಿಪತ್ತು ಘಟಕ ಮಣಿಪಾಲ ವಲಯದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿ ಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸರಸ್ವತಿ ಯವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ತಾಲೂಕು ಜನಜಾಗ್ರತಿ ವೇದಿಕೆ ಅಧ್ಯಕ್ಷರಾದ ಸತ್ಯಾನಂದ ನಾಯಕ್ ಆತ್ರಾಡಿ ಇವರು ಮಾಡಿದರು. ಸಂಪನ್ಮೂಲ ವ್ಯಕ್ತಿ ಮಣಿಪಾಲ […]
ಬ್ರಹ್ಮಾವರ: ಬಿಜೆಪಿಯ ಅಪಪ್ರಚಾರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಪಂ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರ ಜನಪರವಾದ ಆಡಳಿತವನ್ನು ನೀಡುತ್ತಿದೆ. ಆದರೆ ಬಿಜೆಪಿ ಕಾಂಗ್ರೆಸ್ ಸರಕಾರದ ಬಗ್ಗೆ ಅಪಪ್ರಚಾರ ಮಾಡುತ್ತಾ, ಸುಳ್ಳು ಹೇಳಿಕೊಂಡು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ದೂರಿದರು. […]
ದಲಿತರ ಬೇಡಿಕೆ ಈಡೇರಿಸುವಲ್ಲಿ ಸರಕಾರದ ನಿರಾಸಕ್ತಿ: ಸಂಜೀವ ಬಳ್ಕೂರು ಆಕ್ರೋಶ

ಉಡುಪಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಸರಕಾರ ವಿತರಿಸಲೇಬೇಕಾದ ಅವರ ಹಕ್ಕಿನ ಭೂಮಿಯನ್ನು ವಿತರಿಸದೆ ಅನ್ಯಾಯವೆಸಗುತ್ತಿದೆ. ದಲಿತರ ಬೇಡಿಕೆ ಕೇವಲ ಬೇಡಿಕೆಯಾಗಿಯೇ ಉಳಿದಿದೆ. ಈ ನಿಟ್ಟಿನಲ್ಲಿ ದಲಿತರು ಒಗ್ಗಟ್ಟಿನಿಂದ ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದು ದಲಿತ ಹಕ್ಕುಗಳ ಸಮಿತಿ (ಡಿ ಎಚ್ ಎಸ್) ಉಡುಪಿ ಜಿಲ್ಲಾ ಸಂಚಾಲಕರಾದ ಸಂಜೀವ ಬಳ್ಕೂರು ಅವರು ಹೇಳಿದರು. ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಡಿ ಎಚ್ ಎಸ್ ವತಿಯಿಂದ ನಡೆದ ಜನಜಾಗೃತಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.ದಲಿತರಿಗಾಗಿ ಮೀಸಲಿರಿಸಿದ ಅನುದಾನಗಳನ್ನು ಅನ್ಯ ಉದ್ಧೇಶಕ್ಕೆ […]
ಉಡುಪಿ: ಕುಡಿಯುವ ನೀರು ಸರಬರಾಜಿಗೆ ಅಡಚಣೆ ಆಗದಂತೆ ಹೆದ್ದಾರಿ ಕಾಮಗಾರಿ ನಡೆಸಿ- ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಉಡುಪಿ ನಗರದಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಹಾಗೂ ಪಾರ್ಕಿಂಗ್ ಸಮಸ್ಯೆ ಹಾಗೂ ರಾಷ್ಟೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ರಸ್ತೆ ಬದಿ ಹಾದು ಹೋಗುವ ಉಡುಪಿ ನಗರಸಭೆಯ ಕುಡಿಯವ ನೀರು ಪೈಪ್ ಲೈನ್ ಸ್ಥಳಾಂತರ ಪ್ರಕ್ರಿಯೆ ಬಗ್ಗೆ ಅಧಿಕಾರಿಗಳ ಜೊತೆ ಶಾಸಕ ಯಶ್ ಪಾಲ್ ಸುವರ್ಣ ಸಭೆ ನಡೆಸಿದರು. ನಗರದ ಪಾರ್ಕಿಂಗ್ ಹಾಗೂ ಟ್ರಾಫಿಕ್ ನಿರ್ವಹಣೆಯ ಬಗ್ಗೆ ಪೊಲೀಸ್ ಉಪ ಅಧೀಕ್ಷಕರಾದ ಶ್ರೀ ಡಿ. ಟಿ. ಪ್ರಭು ಅವರ ಜೊತೆ ಸಮಾಲೋಚನೆ ನಡೆಸಿದ ಶಾಸಕರು ನಗರದಲ್ಲಿ ವಾಹನಗಳನ್ನು ರಸ್ತೆಯ […]