ಸಿಬಿಎಸ್‌ಇ ಶಾಲೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯ; ಇಲ್ಲಿದೆ ಹೊಸ ನಿಯಮಗಳ ವಿವರ.!

ನವದೆಹಲಿ: ಸಿಬಿಎಸ್‌ಇ ಶಾಲೆಗಳಲ್ಲಿ ಧ್ವನಿ ಸಮೇತ ದೃಶ್ಯ ದಾಖಲಿಸುವ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆಯನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಕಡ್ಡಾಯಗೊಳಿಸಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶೌಚಾಲಯಗಳನ್ನು ಹೊರತುಪಡಿಸಿ ಇತರ ಎಲ್ಲಾ ಕಡೆಗಳಲ್ಲೂ ಸಿಸಿಟಿವಿ ಅಳವಡಿಸುವ ಸಂಬಂಧ ನಿಯಮಗಳಿಗೆ ಬದಲಾವಣೆ ತರಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಭದ್ರತೆ:ವಿದ್ಯಾರ್ಥಿಗಳ ಸುರಕ್ಷತೆಯು ಶಾಲೆಗಳ ಪ್ರಮುಖ ಹೊಣೆಗಾರಿಕೆ. ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ತಡೆ ಹಾಗೂ ಗರಿಷ್ಠ ಪ್ರಮಾಣದ ಭದ್ರತೆ ಒದಗಿಸುವ ಉದ್ದೇಶದಿಂದ ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಆದೇಶಿಸಲಾಗಿದೆ’ ಎಂದು […]
ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ರಾಜೀನಾಮೆ

ಹೊಸದಿಲ್ಲಿ: ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದಾರೆ. ಧನ್ಕರ್ ಅವರು ರಾಜೀನಾಮೆ ಪತ್ರದಲ್ಲಿ ತಮ್ಮ ಆರೋಗ್ಯಕ್ಕೆ ಆದ್ಯತೆ ನೀಡಲು ಹಾಗೂ ವೈದ್ಯಕೀಯ ಸಲಹೆಯನ್ನು ಪಾಲಿಸಬೇಕಿರುವುದರಿಂದ ಈ ತೀರ್ಮಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. “ಸಂವಿಧಾನದ ವಿಧಿ 67(ಎ) ಅಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ನನ್ನ ರಾಜೀನಾಮೆಯನ್ನು ಸಲ್ಲಿಸುತ್ತೇನೆ,” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ತಮ್ಮ ಅಧಿಕಾರಾವಧಿಯಲ್ಲಿ ಬೆಂಬಲ ನೀಡಿದ […]
ಗಣ್ಯ ವ್ಯಕ್ತಿಗಳ ಸಂಚಾರದ ವೇಳೆ ವಾಹನಗಳು ಸೈರನ್ ಬಳಸದಂತೆ ಆದೇಶ.!

ಬೆಂಗಳೂರು: ಅತಿ ಗಣ್ಯ ವ್ಯಕ್ತಿಗಳ (ವಿಐಪಿ) ಸಂಚಾರದ ವೇಳೆ ವಾಹನಗಳು ಸೈರನ್ ಬಳಸದಂತೆ ಆದೇಶ ಹೊರಡಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ಹೊರಡಿಸಲಾಗಿರುವ ಈ ಆದೇಶವನ್ನು ಎಲ್ಲಾ ಘಟಕಾಧಿಕಾರಿ ಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರು ಸೂಚಿಸಿದ್ದಾರೆ. ಗಣ್ಯ ವ್ಯಕ್ತಿಗಳ ಸಂಚಾರದ ಸಮಯದಲ್ಲಿ ಅನವಶ್ಯಕವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯರು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗಲಿದೆ. ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ […]
ಧರ್ಮಸ್ಥಳ: ಕ್ಷೇತ್ರಕ್ಕೆ ಧಕ್ಕೆ ತರುವ ಕೆಲಸ ಆಗಬಾರದು, ಸಮರ್ಪಕವಾದ ತನಿಖೆ ಆಗಲಿ: ಯು.ಟಿ.ಖಾದರ್

ಮಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತನಿಖೆಯಾಗಿ ಅದರ ಸತ್ಯಾಸತ್ಯತೆ ಬಯಲಾಗಲಿ. ಸಮರ್ಪಕ ತನಿಖೆಯ ಮೂಲಕ ಎಲ್ಲಾ ವಿಷಯಗಳು ಗೊತ್ತಾಗುತ್ತದೆ. ಯಾವ ಕಾನೂನು ಕ್ರಮ ಆಗಬೇಕು ಅದು ಆಗುತ್ತದೆ. ತನಿಖೆಯ ಮೊದಲೇ ನಾವೇ ಪೂರ್ವಾಧಾರಿತ ತೀರ್ಪು ಕೊಡುವುದು ಬೇಡ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಮಾತನಾಡಿ, ಅದೇ ರೀತಿ ಪಾವಿತ್ರ್ಯತೆಯ ಕ್ಷೇತ್ರಕ್ಕೆ ಧಕ್ಕೆ ತರುವ ಕೆಲಸ ಆಗಬಾರದು. ಒಂದು ಸಂಸ್ಥೆ ಕಟ್ಟಲು ಬಹಳ ಕಷ್ಟವಿದೆ. ಸಂಸ್ಥೆಯಿಂದ ಎಷ್ಟೋ ಜನರಿಗೆ ಇವತ್ತು ಪ್ರಯೋಜನ ಆಗಿದೆ. […]
ಉಡುಪಿ:ಭಾರೀ ಗಾಳಿ-ಮಳೆ ಸಾಧ್ಯತೆ: ಎಚ್ಚರಿಕೆ

ಉಡುಪಿ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಜು.21 ಜುಲೈ 27 ರ ವರೆಗೆ ಜಿಲ್ಲೆಯಲ್ಲಿ ಹೆಚ್ಚಿನ ಗಾಳಿ (ಸುಮಾರು 50 ಕೆ.ಎಂ.ಪಿ.ಹೆಚ್) ಯಿಂದ ಕೂಡಿದ ಮಳೆಯಾಗಲಿದ್ದು, ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆಯಿದ್ದು, ಸಮುದ್ರದ ಅಲೆಗಳ ಎತ್ತರವು ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಹಿನ್ನಲೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ […]