ಉಡುಪಿ: ನಾಳೆ (ಜುಲೈ 24) ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ (ಜುಲೈ 24) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ, ಐಟಿಐಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಘೋಷಿಸಿರುವುದಿಲ್ಲ.

ಪ್ರಸಾದ್ ಕಾಂಚನ್’ಗೆ ಉಡುಪಿ ಶಾಸಕರನ್ನು ಟೀಕಿಸುವ ಯಾವುದೇ ನೈತಿಕತೆ ಇಲ್ಲ: ಪ್ರಭಾಕರ ಪೂಜಾರಿ

ಉಡುಪಿ: ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಭೆಯಲ್ಲಿ ಉಡುಪಿ ಶಾಸಕರ ವಿರುದ್ಧ ಅಸಂಬದ್ಧ ಹೇಳಿಕೆ ನೀಡುತ್ತಾ ಶಾಸಕರ ಮನೆಗೆ, ಕಛೇರಿಗೆ ಮುತ್ತಿಗೆ ಹಾಕುತ್ತೇನೆ ಎಂಬ ಬಾಲಿಶ ಹೇಳಿಕೆ ನೀಡುತ್ತಿರುವ, ತನ್ನದೇ ಕಾಂಗ್ರೆಸ್ ಪಕ್ಷದಲ್ಲಿ ಮೊಲೆಗುಂಪಾಗಿರುವ ಪ್ರಸಾದ್ ಕಾಂಚನ್ ಗೆ ಸದಾ ಕ್ಷೇತ್ರದ ಅಭಿವೃದ್ಧಿಯ ಕನಸನ್ನು ಹೊತ್ತು ಸಾರ್ಥಕ ಸೇವೆಗೈಯುತ್ತಿರುವ ಉಡುಪಿ ಶಾಸಕರನ್ನು ಟೀಕಿಸುವ ಯಾವುದೇ ನೈತಿಕತೆ ಇಲ್ಲ ಎಂದು ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಸಾದ್ ಕಾಂಚನ್ ರನ್ನು ಉಡುಪಿಯ ಜನತೆ […]

ಧರ್ಮಸ್ಥಳ: ಮಾಧ್ಯಮ ನಿರ್ಬಂಧ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ನವದೆಹಲಿ: ಧರ್ಮಸ್ಥಳ ಪ್ರಕರಣಗಳಿಗೆ ಸಂಬಂಧಿಸಿದ ಮಾಧ್ಯಮ ವರದಿಗಳನ್ನು ನಿಷೇಧಿಸುವ ಬೆಂಗಳೂರು ನಗರ ಸೆಷನ್ಸ್ ನ್ಯಾಯಾಲಯದ ಆದೇಶದ ವಿರುದ್ಧ ಯೂಟ್ಯೂಬ್ ಚಾನೆಲ್ ‘ಥರ್ಡ್ ಐ’ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಚಾರಣೆಗೆ ನಿರಾಕರಿಸಿದೆ. ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಸಹೋದರ ಹರ್ಷೇಂದ್ರ ಕುಮಾರ್ ಡಿ. ಅವರ ಮಾನಹಾನಿ ಮಾಡಲಾಗುತ್ತಿದೆ ಎಂದು ಸೆಷನ್ಸ್ ನ್ಯಾಯಾಲಯವು ಸುದ್ದಿ ಪ್ರಸಾರ ಮಾಡದಂತೆ ಆದೇಶ ನೀಡಲಾಗಿತ್ತು. ಸುಮಾರು 9,000 ಆನ್ ಲೈನ್ ಲಿಂಕ್ಗಳು ಹಾಗೂ ವರದಿಗಳನ್ನು ತೆಗೆದುಹಾಕಲು 390 ಮಾಧ್ಯಮ ಸಂಸ್ಥೆಗಳಿಗೆ […]

‘ಕುಸುಮ್‌ ಬಿ’ ಯೋಜನೆಯಡಿ 40 ಸಾವಿರ ಪಂಪ್‌ಸೆಟ್‌ಗಳಿಗೆ ಅನುಮೋದನೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: 40 ಸಾವಿರ ಪಂಪ್‌ಸೆಟ್‌ಗಳಿಗೆ ‘ಕುಸುಮ್‌ ಬಿ’ ಯೋಜನೆಯಡಿ ಅನುಮೋದನೆ ನೀಡಲಾಗಿದ್ದು, ತ್ವರಿತಗತಿಯಲ್ಲಿ ಯೋಜನೆ ಅನುಷ್ಠಾನಗೊಳಿಸಲು ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮಂಗಳವಾರ ನಗರದ ಶಕ್ತಿ ಭವನದಲ್ಲಿ ನಡೆದ ‘ಕುಸುಮ್‌ ಬಿ’ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಈ ಯೋಜನೆಗೆ ರೂ.752 ಕೋಟಿ ವೆಚ್ಚ ಮಾಡಲಿದ್ದು, ಸುಮಾರು 25 ಸಾವಿರ ರೈತರು ಹೆಚ್ಚುವರಿಯಾಗಿ ಕುಸುಮ್‌ ಬಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರದಿಂದ ಸಹಾಯಧನ:ಕುಸುಮ್‌ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್‌ಸೆಟ್‌ […]

ಹೆಬ್ರಿ: ಹೋಟೆಲ್‌ನಲ್ಲಿ ಹಲ್ಲೆ ಪ್ರಕರಣ; ನಾಲ್ವರು ರೌಡಿಶೀಟರ್‌ಗಳ ಬಂಧನ

ಹೆಬ್ರಿ: ಹೆಬ್ರಿ ಠಾಣೆ ವ್ಯಾಪ್ತಿಯ 38ನೇ ಕಳ್ತೂರು ಗ್ರಾಮದ ಕಳ್ತೂರು ಸಂತೆಕಟ್ಟೆಯಲ್ಲಿರುವ ಹೋಟೆಲ್‌ನಲ್ಲಿ ಜುಲೈ 20ರಂದು ನಡೆದ ಪತ್ಯೇಕ ಘಟನೆಗೆ ಸಂಬಂಧಿಸಿ ನಾಲ್ವರು ರೌಡಿಶೀಟರ್‌ಗಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ರೌಡಿ ಶೀಟರ್‌ಗಳಾದ ಶ್ರೀಕಾಂತ್‌ ಕುಲಾಲ್‌, ಸದಾನಂದ ಪೂಜಾರಿ, ಸಂತೋಷ ನಾಯ್ಕ, ರಾಜ (ರಾಜೇಶ ನಾಯ್ಕ) ಬಂಧಿತರು. ಶ್ರೀಕಾಂತ್‌ ಕುಲಾಲ್‌, ಸದಾನಂದ ಪೂಜಾರಿ, ಸಂತೋಷ ನಾಯ್ಕ ಅವರೊಂದಿಗೆ ಸೇರಿ ಹಳೇ ರೌಡಿಶೀಟರ್‌ ರಾಜ ಯಾನೆ ರಾಜೇಶ ನಾಯ್ಕ ಎಂಬುವನಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದರು. ಈ ಸಂಬಂಧ […]