ಉಡುಪಿ:ಜಿಲ್ಲೆಯ ಅಡಳಿತದಲ್ಲಿ ಕನ್ನಡ ಭಾಷೆಯು ಪ್ರತಿಶತಃ ನೂರರಷ್ಟು ಅನುಷ್ಠಾನವಾಗಬೇಕು : ಡಾ.ಪುರುಷೋತ್ತಮ ಬಿಳಿಮಲೆ

ಉಡುಪಿ: ಜಿಲ್ಲೆಯ ಅಡಳಿತದಲ್ಲಿ ಕನ್ನಡ ಭಾಷೆಯು ಪ್ರತಿಶತಃ ನೂರರಷ್ಟು ಅನುಷ್ಠಾನವಾಗಬೇಕು. ಕನ್ನಡ ಭಾಷೆಯ ಬಳಕೆ ನಿರಂತರವಾಗಿರಲು ಕನ್ನಡ ಭಾಷೆ ಪರಿಣಾಮಕಾರಿ ಪ್ರಚಲಿತದಲ್ಲಿರಲು ಒತ್ತು ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಕರೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕನ್ನಡ ಭಾಷೆಗೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಇಂತಹ ಭಾಷೆ ಉಳಿವಿಗಾಗಿ ಹೆಚ್ಚು ಸಂವೇದನಾಶೀಲತೆಯಿಂದ […]

ಉಡುಪಿಯ ಹೀರೋ ಶಕ್ತಿ ಮೋಟರ್ಸ್ ನಲ್ಲಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಉಡುಪಿಯ ಹೀರೋ ಶಕ್ತಿ ಮೋಟರ್ಸ್ ನಲ್ಲಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 🔸ಸೇಲ್ಸ್ (Male/ Female)-post -4🔸ಸ್ಪೇರ್ಸ್ ಮ್ಯಾನೇಜರ್ – post -1🔸ಅಸಿಸ್ಟೆಂಟ್ ಪಿ.ಡಿ.ಐ – post -1🔸ಪಿ.ಡಿ.ಐ ಮ್ಯಾನೇಜರ್ -post -1🔸ಮೆಕ್ಯಾನಿಕ್ -post- 3 ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಇಮೇಲ್ ಐಡಿ ಅಥವಾ ನಂಬರ್ ಗೆ ವಾಟ್ಸಪ್ ಮಾಡಿ[email protected]📞+91 7996210666

ರಾಜ್ಯಾದ್ಯಂತ ಮಳೆ; ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌.!

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು, ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ತಿಂಗಳಾಂತ್ಯದವರೆಗೆ ಮುಂದುವರೆಯಲಿದೆ. ಕರಾವಳಿಯ ಮೂರು ಜಿಲ್ಲೆ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್‌, ಕಲಬುರಗಿ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಮುನ್ಸೂಚನೆ ನೀಡಲಾಗಿದೆ. ಭಾರಿ ಗಾಳಿ, ಮಳೆ ಬೀಸುವ ಸಾಧ್ಯತೆ:ಭಾರತೀಯ ಹವಾಮಾನ ಇಲಾಖೆ ಜು. 27ರ ವರೆಗೆ ಕರಾವಳಿಯಲ್ಲಿ […]

ಕೊಂಕಣ ರೈಲು ಮಾರ್ಗದಲ್ಲಿ ಕಾಮಗಾರಿ: ಜು.24ರಂದು ರೈಲುಗಳ ಸಂಚಾರದಲ್ಲಿ ವ್ಯತ್ಯಯ; ಕೊಂಕಣ ರೈಲ್ವೆ ಪ್ರಕಟಣೆ.

ಉಡುಪಿ: ಕೊಂಕಣ ರೈಲು ಮಾರ್ಗದ ಲೋಲಿಮ್ ಹಾಗೂ ಅಸ್ನೋಟಿ ನಿಲ್ದಾಣಗಳ ನಡುವೆ ಬರುವ ಜುಲೈ 24ರ ಗುರುವಾರ ಬೆಳಗ್ಗೆ 10:20ರಿಂದ ಅಪರಾಹ್ನ 1:50ರವರೆಗೆ ಹಳಿ ಅಭಿವೃದ್ಧಿ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಮೂರೂವರೆ ಗಂಟೆಗಳ ಕಾಲ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ. ಜು.24 ರಂದು ಅಂದು ಸಂಚರಿಸುವ ರೈಲು ನಂ.56616 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ಪ್ಯಾಸೆಂಜರ್ ರೈಲನ್ನು ಕುಮಟ ಮತ್ತು ಕಾರವಾರ ನಿಲ್ದಾಣಗಳ ಮಧ್ಯೆ 90 […]

ಅರಣ್ಯ ಪ್ರದೇಶದಲ್ಲಿ ದನಕರುಗಳನ್ನು ಮೇಯಿಸುವುದು ನಿಷೇಧ: ಸಚಿವ ಈಶ್ವರ್ ಖಂಡ್ರೆ ಕಟ್ಟುನಿಟ್ಟಿನ ಆದೇಶ.

ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಅರಣ್ಯ ಪ್ರದೇಶಗಳಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಅರಣ್ಯ ಸಂವರ್ಧನೆಗೆ ಅಡ್ಡಿ:ಈ ಕುರಿತು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ […]