ಸಣ್ಣ ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್‌ ಕೊಟ್ಟಿದ್ದು ರಾಜ್ಯ ಸರ್ಕಾರ, ಕೇಂದ್ರ ಸರಕಾರವಲ್ಲ; ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್‌ ನೀಡುವ ಮೂಲಕ ಡಿಜಿಟಲ್‌, ಯುಪಿಐ ವಹಿವಾಟು ಹದಗೆಡಿಸುವ ದುಸ್ಸಾಹಸಕ್ಕೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಕೈ ಹಾಕಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಸಣ್ಣ ವ್ಯಾಪಾರಸ್ಥರಿಗೆ ಜಿಎಸ್ ಟಿ ನೋಟಿಸ್ ಕೇಂದ್ರದ್ದಲ್ಲ, ಇದಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಜೋಶಿ ಸ್ಪಷ್ಟನೆ ನೀಡಿದ್ದಾರೆ.