ಆ.1ರಿಂದ ಸೆ. 17ರವರೆಗೆ ಉಡುಪಿ ಕೃಷ್ಣಮಠದಲ್ಲಿ ‘ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ’

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪರ್ಯಾಯ ಶ್ರೀಪುತ್ತಿಗೆ ಮಠದ ವತಿಯಿಂದ ಆಗಸ್ಟ್ 1ರಿಂದ ಸೆಪ್ಟೆಂಬರ್ 17ರವರೆಗೆ 48 ದಿನಗಳ ಕಾಲ ‘ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ’ವನ್ನು ಹಮ್ಮಿಕೊಳ್ಳಲಾಗಿದ್ದು, ಜು.25ರಂದು ಸಂಜೆ 4.30ಕ್ಕೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಡಲೋತ್ಸವವನ್ನು ಉದ್ಘಾಟಿಸಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥರು ತಿಳಿಸಿದ್ದಾರೆ. ಕೃಷ್ಣ ಮಠದ ಗೀತಾಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡಲೋತ್ಸವದ ಸಮಾರೋಪ ಸಮಾರಂಭ ಸೆಪ್ಟೆಂಬರ್ 14ರಂದು ಸೌರ ಕೃಷ್ಣ ಜನ್ಮಾಷ್ಟಮಿಯ ದಿನದಂದು ನಡೆಯಲಿದ್ದು, ಇದರಲ್ಲಿ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ […]
ಜು.26 -27ರಂದು ಸಂತೆಕಟ್ಟೆಯಲ್ಲಿ ಹಲಸು ಮೇಳ

ಉಡುಪಿ: ಸಂತೆಕಟ್ಟೆಯಲ್ಲಿ ಪ್ರಥಮ ಬಾರಿಗೆ ಎಂಬಂತೆ ಹಲಸು ಮತ್ತು ಹಣ್ಣು ಮೇಳವನ್ನು ಕೆಮ್ಮಣ್ಣು ಲಿಟ್ಲ್ ಫ್ಲವರ್ ಹಾಲ್‌ನಲ್ಲಿ ಜು.26 ಮತ್ತು 27ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕ ಮುಹಮ್ಮದ್ ಮುಖ್ತಾರ್ ಹುಸೇನ್ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಳದಲ್ಲಿ ಮುಖ್ಯವಾಗಿ ಆಂಧ್ರದಿಂದ ತರಿಸಲಾದ ಏಕದಶಿ, ರುದ್ರಾಕ್ಷಿ, ಕೇಸರ್, ಚಂದ್ರ ಹಲಸು ವಿಶೇಷವಾಗಿದೆ. ರಾಜ್ಯದ ವಿವಿಧ ಮೂಲೆಗಳಿಂದ ರುಚಿಯಾದ ಮಾವು ಮತ್ತು ಹಲಸಿನ ಹಾಗೂ ಇತರ ಉತ್ಪನ್ನಗಳ ಖಾದ್ಯಗಳ ನೂರಾರು ಮಳಿಗೆಗಳಿದ್ದು, ಬಟರ್‌ಫ್ರೂಟ್, ನೇರಳೆ ಸೇರಿದಂತೆ ವಿವಿಧ […]
ಉಡುಪಿ ಜಿಲ್ಲೆಯಲ್ಲಿ ಡ್ರಗ್ಸ್ ಕೇಸ್ ಹೆಚ್ಚುತ್ತಿರುವುದು ಆತಂಕದ ವಿಚಾರ- ಎಸ್ಪಿ ಹರಿರಾಮ್ ಶಂಕರ್

ಉಡುಪಿ: ಕರ್ನಾಟಕ ರಾಜ್ಯದಲ್ಲಿ ಬೆಂಗಳೂರು ಸಿಟಿಯಲ್ಲಿ ಅತೀ ಹೆಚ್ಚು ಡ್ರಗ್ಸ್ ಕೇಸ್ ಪತ್ತೆಯಾಗುತ್ತಿದೆ. ನಂತರದ ಸ್ಥಾನದಲ್ಲಿ ಮಂಗಳೂರು ಸಿಟಿ ಇದೆ. ಮೂರನೇ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ. ಇದು ನಿಜಕ್ಕೂ ಆತಂಕದ ವಿಚಾರ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಕಳವಳ ವ್ಯಕ್ತಪಡಿಸಿದರು. ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ಗುರುವಾರ ನಡೆದ ಶಾಲಾ ಕಾಲೇಜುಗಳಲ್ಲಿ ಮಾದಕದ್ರವ್ಯ ವಿರೋಧಿ ಮತ್ತು ಜಾಗೃತಿ ಸಮಿತಿ ರಚನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ […]
ಉಡುಪಿ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿ ಮೃತ್ಯು

ಉಡುಪಿ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.ಹೆಜಮಾಡಿ ಎನ್.ಎಸ್. ರೋಡ್ ಬೇಂಗಲೆಯ ಕಲಂದರ್ ಹಾಗು ಮುಮ್ತಾಜ್ ದಂಪತಿಯ ಪುತ್ರಿ ಫಾತಿಮಾ ಮಾಹಿರಾ ಮೃತ ಬಾಲಕಿ.ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಮಗುವನ್ನು ಬೆಂಗಳೂರಿನ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಈಕೆ ಹೆಜಮಾಡಿಯ ವಿದ್ಯಾ ಪ್ರಸಾರ ಶಾಲೆಯಲ್ಲಿ ಎಲ್ ಕೆಜಿ ವಿದ್ಯಾರ್ಥಿನಿಯಾಗಿದ್ದಳು.
ಸಾಲ ವಂಚನೆ ಆರೋಪ: ಅನಿಲ್ ಅಂಬಾನಿಗೆ ಸೇರಿದ 50 ಕಂಪನಿಗಳ ಮೇಲೆ ಇಡಿ ದಾಳಿ.!

ನವದೆಹಲಿ: ದೊಡ್ಡ ಪ್ರಮಾಣದ ಆರ್ಥಿಕ ಅಕ್ರಮಗಳ ಆರೋಪದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ ಎರಡು ಎಫ್‌ಐಆರ್‌ಗಳ ನಂತರ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ದೆಹಲಿ ಮತ್ತು ಮುಂಬೈನಲ್ಲಿರುವ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಕಾರ್ಯಾಚರಣೆಯ ಭಾಗವಾಗಿ, ಇಡಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ 50 ಕ್ಕೂ ಹೆಚ್ಚು ಸಂಸ್ಥೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು. 25 ಕ್ಕೂ […]