ಮಾವು ಬೆಳೆಗಾರರ ನೆರವಿಗೆ ನಿಂತ ಸರಕಾರ: ಮಾವು ಖರೀದಿ ಮಿತಿಯಲ್ಲಿ 200 ಕ್ವಿಂಟಾಲ್ ಹೆಚ್ಚಳಕ್ಕೆ ಆದೇಶ.!

ಬೆಂಗಳೂರು : ಬೆಲೆ ಕುಸಿತದಿಂದ ಕಂಗೆಟ್ಟಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸಿರುವ ಸರಕಾರ ಈ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಿ ಬೆಂಬಲ ಬೆಲೆಯೊಂದಿಗೆ ಪ್ರತಿ ಎಕರೆಗೆ 40 ಕ್ವಿಂಟಾಲ್‍ನಂತೆ ಗರಿಷ್ಠ 5 ಎಕರೆಗೆ 200 ಕ್ವಿಂಟಾಲ್‍ವರೆಗೆ ಮಿತಿಗೊಳಿಸಿ ಖರೀದಿಸಲು ಆದೇಶ ಹೊರಡಿಸಿದೆ. ಈ ಆದೇಶವು ಸದರಿ ಯೋಜನೆಯಡಿ ಈಗಾಗಲೇ ನೋಂದಾಯಿಸಿರುವ ರೈತರಿಗೂ ಸಹ ಅನ್ವಯವಾಗಲಿದೆ. ಪ್ರತಿ ಕೆ.ಜಿ.ಗೆ ರಾಜ್ಯ ಹಾಗೂ ಕೇಂದ್ರ ಸರಕಾರಗಳು ತಲಾ 2 ರೂಪಾಯಿಗಳಂತೆ ಒಟ್ಟು 4 ರೂಪಾಯಿ ಬೆಂಬಲ ಬೆಲೆಯೊಂದಿಗೆ ಮಾವು […]
ಮಂಗಳೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಕೊರತೆ ನಿವಾರಣೆಗೆ ಮಂಜುನಾಥ ಭಂಡಾರಿ ಮನವಿ

ಮಂಗಳೂರು: ಮಂಗಳೂರು ರೈಲ್ವೇ ಪೊಲೀಸ್ ವಿಭಾಗದಲ್ಲಿ ಸಿಬ್ಬಂದಿ ಕೊರತೆ ಹಲವು ವರ್ಷಗಳಿಂದ ಇದ್ದು ಕೂಡಲೇ ಸಿಬ್ಬಂದಿಯ ನೇಮಕಕ್ಕೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಪತ್ರ ಮುಖೇನ ಮನವಿ ಮಾಡಿದ್ದಾರೆ. ರೈಲುಗಳ ಸಂಖ್ಯೆ ಹೆಚ್ಚಾದರೂ ರೈಲು ನಿಲ್ದಾಣಗಳು ಮೇಲ್ದರ್ಜೆಗೇರಿದರೂ ರೈಲ್ವೇ ಪೊಲೀಸ್ ಮಾತ್ರ ತುಂಬಾ ಹಳೆಯ ವ್ಯವಸ್ಥೆಯನ್ನೇ ಹೊಂದಿದೆ. ಮಂಗಳೂರು ಕೇಂದ್ರ ರೈಲು ನಿಲ್ದಾಣದ ಬಳಿ ಠಾಣೆಯನ್ನು ಹೊಂದಿರುವ ಮಂಗಳೂರು ರೈಲ್ವೇ ಪೊಲೀಸ್ ತಲಪಾಡಿ, […]
ಕಾರ್ಕಳದಲ್ಲಿ ಜುಲೈ 25 ರಂದು A1 ಸೂಪರ್ ಮಾರ್ಕೆಟ್ ಅದ್ದೂರಿ ಉದ್ಘಾಟನೆ

ಕಾರ್ಕಳ: ಕಾರ್ಕಳದ ಮುಖ್ಯ ಪೇಟೆಯ ಮಾರಿಗುಡಿ ದೇವಸ್ಥಾನದ ಪಕ್ಕದಲ್ಲಿರುವ ಪ್ರೈಮ್ ಸಿಟಿ ಸೆಂಟರ್ ನಲ್ಲಿ A1 ಸೂಪರ್ ಮಾರ್ಕೆಟ್ ನ 2 ನೇ ಸ್ಟೋರ್ ಜುಲೈ. 25 ಶುಕ್ರವಾರದಂದು ಬೆಳಿಗ್ಗೆ 11 ಗಂಟೆಗೆ ಅದ್ದೂರಿ ಉದ್ಘಾಟನೆಗೊಳ್ಳಲಿದೆ. A1 ಸೂಪರ್ ಮಾರ್ಕೆಟ್ ನಲ್ಲಿ ಗೃಹ ಬಳಕೆಯ ಅತ್ಯುತ್ತಮ ಗುಣಮಟ್ಟದ ವಸ್ತುಗಳು ಒಂದೇ ಸೂರಿನಡಿ ಲಭ್ಯವಾಗಲಿದೆ.ಸಾರ್ಜನಿಕರು A1 ಸೂಪರ್ ಮಾರ್ಕೆಟ್ ಗೆ ಭೇಟಿ ನೀಡಿ ವಿವಿಧ ಉತ್ಪನ್ನಗಳನ್ನು ಖರೀದಿಸಿ ಒಂದೊಳ್ಳೆ ಶಾಪಿಂಗ್ ಅನುಭವವನ್ನು ಪಡೆದುಕೊಳ್ಳಬಹುದು.
ಪ್ರಸಾದ್ ಕಾಂಚನ್ ತಾಕತ್ತಿದ್ದರೆ ಶಾಸಕರ ಮನೆಗೆ ಮುತ್ತಿಗೆ ಹಾಕಲಿ : ಹಿಂದೂ ಯುವ ಸೇನೆ

ಕಾಂಗ್ರೆಸ್ ಪಕ್ಷದಲ್ಲಿ ಬಾಲಿಶ ಹೇಳಿಕೆಗಳಿಂದಲೇ ಕುಖ್ಯಾತನಾದ ಪ್ರಸಾದ್ ಕಾಂಚನ್ ಶಾಸಕರನ್ನು ಟೀಕಿಸುವ ಭರದಲ್ಲಿ ಶಾಸಕರ ಮನೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದು, ಅವನಿಗೆ ತಾಕತ್ ಇದ್ದರೆ ಶಾಸಕರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಲಿ ಅದಕ್ಕೆ ತಕ್ಕ ಉತ್ತರ ನೀಡಲು ಜಿಲ್ಲೆಯ ಹಿಂದೂ ಕಾರ್ಯಕರ್ತರು ಸಿದ್ಧ ಎಂದು ಹಿಂದೂ ಯುವ ಸೇನೆ ಉಡುಪಿ ಜಿಲ್ಲಾ ಘಟಕ ಎಚ್ಚರಿಕೆ ನೀಡಿದೆ. ಸದಾ ಹಿಂದೂ ಧಾರ್ಮಿಕ ಭಾವನೆಗಳನ್ನು ಅವಹೇಳನ ಮಾಡುತ್ತಾ ಬಂದಿರುವ ಪ್ರಸಾದ್ ಕಾಂಚನ್ ಕರಾವಳಿ ಜಿಲ್ಲೆಯಲ್ಲಿ ಹಿಂದುತ್ವದ ವಿಚಾರದಲ್ಲಿ ಸದಾ […]
ಮೂರು ವರ್ಷದ ಬಾಕಿ ತೆರಿಗೆ ವಸೂಲಿ ಇಲ್ಲ: ಸಣ್ಣ ವರ್ತಕರಿಗೆ ಸಿಎಂ ಸಿದ್ಧರಾಮಯ್ಯ ಅಭಯ

ಬೆಂಗಳೂರು: ಜಿಎಸ್‌ಟಿ ನೋಟಿಸ್ ಪಡೆದ ವರ್ತಕರಿಂದ 3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 40 ಲಕ್ಷ ರೂ. ವ್ಯವಹಾರ ನಡೆಸಿದ್ದಕ್ಕೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ ವರ್ತಕರಿಗೆ ನೋಟಿಸ್ ಜಾರಿ ಮಾಡಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಸಿದ್ದರಾಮಯ್ಯ ಇಂದು ತೆರಿಗೆ ಇಲಾಖೆಯ ಅಧಿಕಾರಿಗಳು, ವರ್ತಕ ಸಂಘದ ಪ್ರತಿನಿಧಿಗಳ ಜೊತೆ ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿ, ನೋಟಿಸ್ ನೀಡಿದ ವರ್ತಕರಿಂದ ಬಾಕಿ ತೆರಿಗೆಯನ್ನು ವಸೂಲಿ ಮಾಡುವುದಿಲ್ಲ. […]