ವಿವಿಧ ಔಷಧಗಳ ಖರೀದಿಗೆ ರೂ.880 ಕೋಟಿ: ಸಚಿವ ಎಚ್ ಕೆ ಪಾಟೀಲ

ಬೆಂಗಳೂರು: 2025–26ರ ಸಾಲಿಗೆ ರೂ.880.68 ಕೋಟಿ ವೆಚ್ಚದಲ್ಲಿ 890 ಔಷಧಗಳು, ಮಾತ್ರೆಗಳು, ರಾಸಾಯನಿಕ ಗಳನ್ನು ಖರೀದಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಭೆ ಬಳಿಕ ಗುರುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಕಾನೂನು ಸಚಿವ ಎಚ್.ಕೆ. ಪಾಟೀಲ, ‘ಔಷಧಗಳ ದರ ಪರಿಗಣನೆಗಾಗಿ ಪ್ರಸಕ್ತ ಔಷಧಿಗಳಿಗೆ ಅನ್ವಯಿಸುವ ಹಿಂದಿನ ದರ, ಅಂದಾಜು ದರವನ್ನು ಆಧಾರವಾಗಿಟ್ಟುಕೊಂಡು ಹೊಸ ದರ ನಿರ್ಧರಿಸಲಾಗಿದೆ. ಹೊಸ ಔಷಧಗಳಿಗೆ ಅನ್ವಯಿಸುವ ಇತರೆ ರಾಜ್ಯಗಳ ವೈದ್ಯಕೀಯ ಸರಬರಾಜು ನಿಗಮಗಳಲ್ಲಿ ಖರೀದಿಸಿದ ಕನಿಷ್ಠ ದರ ಗಳು ಅಥವಾ ಮಾರುಕಟ್ಟೆಯ […]
ಉಡುಪಿ:ಜಿಲ್ಲೆಯಲ್ಲಿ ಯೂರಿಯಾ ಸೇರಿದಂತೆ ವಿವಿಧ ರಸಗೊಬ್ಬರಗಳು ಲಭ್ಯ

ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಭತ್ತದ ಬಿತ್ತನೆ ಗುರಿ 35,000 ಹೆಕ್ಟೇರ್ ಇದ್ದು, ಈವರೆಗೆ 26,050ಹೆಕ್ಟೇರ್ ಬಿತ್ತನೆಯಾಗಿರುತ್ತದೆ. ಜೂನ್ ಮಾಹೆಯ 2ನೇ ವಾರದಿಂದ ಬಿತ್ತನೆ ಪ್ರಾರಂಭಗೊಂಡಿದ್ದು, ಪ್ರಸ್ತುತ ಭರದಿಂದ ಸಾಗುತ್ತಿದ್ದು, ಆಗಸ್ಟ್ 2ನೇ ವಾರದಲ್ಲಿ ಬಿತ್ತನೆ ಪೂರ್ಣಗೊಳ್ಳುವ ನಿರೀಕ್ಷೆಯಿರುತ್ತದೆ. ಜಿಲ್ಲೆಯ ಮುಂಗಾರು ಹಂಗಾಮಿನ ರಸಗೊಬ್ಬರ ಬೇಡಿಕೆ 8,404 ಮೆ.ಟನ್ ಇದ್ದು, ಜುಲೈ ಅಂತ್ಯದವರೆಗಿನ ಬೇಡಿಕೆ 5,470 ಮೆ.ಟನ್ ಆಗಿರುತ್ತದೆ. ಈವರೆಗೆ 6,809 ಮೆ.ಟನ್ ಸರಬರಾಜಾಗಿ 2,568 ಮೆ.ಟನ್ ವಿತರಣೆಯಾಗಿ, 4,240 ಮೆ.ಟನ್ ದಾಸ್ತಾನು ಲಭ್ಯವಿರುತ್ತವೆ. ಯೂರಿಯಾ ರಸಗೊಬ್ಬರದ […]
ಉಡುಪಿ:ಮೀನುಗಾರರಿಗೆ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ವಲಯ ಯೋಜನೆಯಡಿ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟು ವಿತರಣೆ ಯೋಜನೆ, ಮತ್ಸ್ಯವಾಹಿನಿ ಯೋಜನೆಯಡಿ ಮೀನು ಮಾರಾಟಕ್ಕೆ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನ ಖರೀದಿಗೆ ಸಹಾಯ ಹಾಗೂ ರಾಜ್ಯ ವಲಯ ಯೋಜನೆಯಡಿ ಕರಾವಳಿ ತಾಲೂಕುಗಳ ಅರ್ಹ ಫಲಾನುಭವಿಗಳಿಗೆ ಜೀವರಕ್ಷಕ ಸಾಧನಗಳನ್ನು, ಹೆಬ್ರಿ ಮತ್ತು ಕಾರ್ಕಳ ತಾಲೂಕುಗಳ ಫಲಾನುಭವಿಗಳಿಗೆ ಮೀನುಗಾರಿಕೆ/ ಮೀನು ಮಾರಾಟ ಸಾಮಗ್ರಿಗಳನ್ನು ಉಚಿತವಾಗಿ […]
ಉಡುಪಿ:ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಕಷ್ಟಕಾರ್ಪಣ್ಯಗಳು ದೂರ : ಅಶೋಕ್ ಕೊಡವೂರು

ಉಡುಪಿ: ಪಂಚ ಗ್ಯಾರಂಟಿ ಯೋಜನೆಯಿಂದ ಜನಸಾಮಾನ್ಯರ ಕಷ್ಟಕಾರ್ಪಣ್ಯಗಳನ್ನು ತಗ್ಗಿಸುವುದರೊಂದಿಗೆ ನೆಮ್ಮದಿಯ ಬದುಕಿಗೆ ಆಸರೆಯಾಗಿದೆ. ಸಮಾಜದಲ್ಲಿ ಈ ಯೋಜನೆಯ ಫಲಾನುಭವಿಯಾಗಲು ಅರ್ಹತೆ ಇದ್ದ ಪ್ರತಿಯೊಬ್ಬರಿಗೂಇವುಗಳನ್ನು ತಲುಪಿಸಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕೊಡವೂರು ತಿಳಿಸಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪಂಚ ಗ್ಯಾರಂಟಿ ಯೋಜನೆಗಳನ್ನು ಸರಕಾರ […]
ಉಡುಪಿ : ಕರವೇ (ಪ್ರವೀಣ್ ಶೆಟ್ಟಿ ಬಣ) ಗೌರವ ಸಲಹೆಗಾರರಾಗಿ ಶೇಖರ್ ಹೆಜಮಾಡಿ ಆಯ್ಕೆ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕದ ಗೌರವ ಸಲಹೆಗಾರರಾಗಿಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ದಲಿತ ಹೋರಾಟಗಾರ ಶೇಖರ್ ಹೆಜಮಾಡಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಗೌರವಾಧ್ಯಕ್ಷರಾದ ಅನ್ಸಾರ್ ಅಹಮದ್ ರವರು ಉಡುಪಿ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಗೌರವ ಸಲಹೆಗಾರರಾಗಿ ಶೇಖರ್ ಹೆಜಮಾಡಿಯವರನ್ನು ದಿನಾಂಕ 23-07-2025 ರಿಂದ ಜಾರಿಗೆ ಬರುವಂತೆ ಆಯ್ಕೆ ಮಾಡಿ ಆದೇಶ ಹೊರಡಿಸಿರುತ್ತಾರೆ.