ಆ.1-2: ‘ಆಳ್ವಾಸ್ ಪ್ರಗತಿ-2025’ ಬೃಹತ್ ಉದ್ಯೋಗ ಮೇಳ

ಮಂಗಳೂರು: ಆಳ್ವಾಸ್ ಪ್ರಗತಿ 2025ರ 15ನೇ ಆವೃತ್ತಿಯ ಉದ್ಘಾಟನೆಯು ಆಗಸ್ಟ್ 1 ಮತ್ತು 2ರಂದು ವಿದ್ಯಾಗಿರಿಯಲ್ಲಿ ಬೆಳಿಗ್ಗೆ 9.30 ಕ್ಕೆ ನಡೆಯಲಿದ್ದು, ಸಚಿವ ದಿನೇಶ್ ಗುಂಡುರಾವ್ ಉದ್ಘಾಟನೆ ನೆರವೇರಿಸಲಿದ್ದಾರೆ. ಮಂಗಳೂರು ವಿವಿಯ ಕುಲಪತಿ ಡಾ ಪಿಎಲ್ ಧರ್ಮ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಶಾಸಕ ಉಮಾನಾಥ ಎ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ಎಂ ಮೋಹನ ಆಳ್ವ ಹಾಗೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಹಾಗೂ ವಿಧಾನ ಪರಿಷತ್ತಿನ […]
ಧರ್ಮಸ್ಥಳ ಪ್ರಕರಣ: ಎಸ್ಐಟಿ’ಯಿಂದ ಕಾರ್ಯಾಚರಣೆ ಆರಂಭ

ಮಂಗಳೂರು/ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದ ತನಿಖೆಗೆ ನಿಯೋಜನೆಗೊಂಡಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಕಾರ್ಯಾಚರಣೆ ಆರಂಭಿಸಿದ್ದು ಸತತ ಸಭೆಗಳನ್ನು ನಡೆಸಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದೆ. ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್.ಅನುಚೇತ್ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಸದಸ್ಯರಾಗಿದ್ದಾರೆ. ಅನುಚೇತ್ ಮತ್ತು ದಯಾಮ ಮಾತ್ರ ದಕ್ಷಿಣ ಕನ್ನಡಕ್ಕೆ ಶುಕ್ರವಾರ […]
ಪ್ರಥಮ ಪಿಯುಸಿ ಪ್ರವೇಶ ದಾಖಲಾತಿ ಜುಲೈ 31ರವರೆಗೆ ವಿಸ್ತರಣೆ; ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಪ್ರಥಮ ಪಿಯುಸಿ ತರಗತಿಗಳ ಪ್ರವೇಶಕ್ಕೆ ದಾಖಲಾತಿ ದಿನಾಂಕವನ್ನು ಜುಲೈ 31ರವರೆಗೆ ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆಯು (ಪದವಿ ಪೂರ್ವ) ಆದೇಶಿಸಿದೆ.ಈ ತರಗತಿಗಳ ಪ್ರವೇಶಕ್ಕೆ ಕೊನೆಯ ದಿನಾಂಕವನ್ನು ಹಲವು ಬಾರಿ ವಿಸ್ತರಿಸಲಾಗಿತ್ತು. ಆದರೆ ಪ್ರವೇಶಾತಿ ಬಯಸಿ ವಿದ್ಯಾರ್ಥಿಗಳು ಇನ್ನೂ ಬರುತ್ತಿರುವ ಕಾರಣ, ಕೊನೆಯ ದಿನಾಂಕವನ್ನು ಮತ್ತೆ ವಿಸ್ತರಿಸಲಾಗಿದೆ ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ದಂಡ ಶುಲ್ಕ ₹670 ಮತ್ತು ವಿಶೇಷ ದಂಡ ಶುಲ್ಕ ₹2,220 ಸೇರಿ ಒಟ್ಟು ₹2,890 ಪಾವತಿಸಿ, ಪ್ರವೇಶ ಪಡೆಯಬಹುದು ಎಂದು ಇಲಾಖೆ […]
ಉಡುಪಿ:ಅಡಿಕೆ ಕೊಳೆರೋಗ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಿ

ಉಡುಪಿ: ಮೇ ಮಾಹೆಯಿಂದ ನಿರಂತರವಾಗಿ ಬೀಳುತ್ತಿರುವ ಮಳೆಯಿಂದಾಗಿ ಉಡುಪಿ, ಬ್ರಹ್ಮಾವರ ಮತ್ತು ಕಾಪುತಾಲ್ಲೂಕಿನಾದ್ಯಂತ ಅಡಿಕೆ ತೋಟಗಳಲ್ಲಿ ಅಡಿಕೆ ಕೊಳೆ ರೋಗ ಕಾಣಿಸಿಕೊಳ್ಳುತ್ತಿದೆ. ಮೋಡ ಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಮಳೆ ಹಾಗೂ ಬಿಸಿಲು ಮಿಶ್ರಿತ ವಾತಾವರಣ, ಮಣ್ಣಿನಲ್ಲಿ ಹೆಚ್ಚಿದ ತೇವಾಂಶ ರೋಗ ಉಲ್ಬಣವಾಗಲು ಸಹಕಾರಿಯಾಗುತ್ತದೆ. ಆದ್ದರಿಂದ ರೈತರು ಬೆಳೆ ಸಂರಕ್ಷಣೆ ಉದ್ದೇಶದಿಂದ ಈ ಕೆಳಗಿನ ತುರ್ತು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆಯಿದೆ.ತೋಟದಲ್ಲಿ ಬಿದ್ದ ಕೊಳೆರೋಗ ಭಾದಿತ, ಹಸಿರು ಕಾಯಿಗಳನ್ನು ಹಾಗೂ ಪೂರ್ಣ ಕೊಳೆ ಬಂದು ಒಣಗಿದ […]
ಉಡುಪಿ:ಪ.ಜಾತಿ-ಪ.ಪಂಗಡಗಳ ವಿದ್ಯಾರ್ಥಿಗಳಿಗೆ ಕಲಿಕಾ ತರಬೇತಿ ಕಾರ್ಯಾಗಾರ ಉದ್ಘಾಟನೆ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ “ಕರಗ ಕೋಲಾಟ ಹಾಗೂ ಜಾನಪದ ನೃತ್ಯಗಳ”ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ “ಬುಡಕಟ್ಟು ಜನಾಂಗದ ಸಾಂಪ್ರದಾಯಕ ನೃತ್ಯದ” 6 ತಿಂಗಳ ಕಲಿಕಾ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ಬುಧವಾರ ನಗರದ ಬನ್ನಂಜೆಯ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಮಾಜ ಕಲ್ಯಾಣ ಅಧಿಕಾರಿ […]