ಉಡುಪಿ ಜಿಲ್ಲೆಯ ಕೋಟ-ಗೋಳಿಯಂಗಡಿ ಮಾರ್ಗದಲ್ಲಿ ಸರ್ಕಾರಿ ಬಸ್ ಸೇವೆ ಒದಗಿಸಿ: ಮಂಜುನಾಥ ಭಂಡಾರಿ

ಉಡುಪಿ: ಜಿಲ್ಲೆಯ ವಡ್ಡರ್ಸೆ, ಗೋಳಿಯಂಗಡಿ ಹಾಗೂ ಶಿರಿಯಾರ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಗ್ರಾಮೀಣ ಪ್ರದೇಶದಿಂದ ಸಾವಿರಾರು ಮಂದಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಉದ್ದೇಶಕ್ಕಾಗಿ ಹಾಗೂ ಮಹಿಳೆಯರು ಉದ್ಯೋಗದ ನಿಮಿತ್ತ ಪಟ್ಟಣಕ್ಕೆ ದಿನನಿತ್ಯ ಬಂದು ಹೋಗಲು ಖಾಸಗೀ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಈ ಭಾಗದಲ್ಲಿ ಖಾಸಗೀ ಬಸ್‌ಗಳ ಕೊರತೆಯ ಜೊತೆಗೆ, ಯಾವುದೇ ಸರ್ಕಾರಿ ಬಸ್‌ಗಳ ಸೇವೆ ಜನರಿಗೆ ಲಭ್ಯವಿಲ್ಲ. ಹಾಗಾಗಿ ಸರಕಾರಿ ಬಸ್ ಸೇವೆ ಆರಂಭಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಸಾರಿಗೆ ಸಚಿವರಿಗೆ ಮನವಿ […]
ಐಟಿ ಕಂಪೆನಿಗಳ ಉದ್ಯೋಗಿಗಳಿಗೆ ಪ್ರತೀ ಬುಧವಾರ ವರ್ಕ್ ಫ್ರಂ ಹೋಂ ಕೊಡಿ:ಕಂಪೆನಿಗಳಿಗೆ ಟ್ರಾಫಿಕ್ ಪೊಲೀಸರ ಸಲಹೆ.!

ಬೆಂಗಳೂರು: ನಗರದಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಹೊಸ ಪ್ಲಾನ್ ಮಾಡಿದೆ. ಬೆಂಗಳೂರು ಟೆಕ್ಕಿಗಳಿಗೆ ಪ್ರತಿ ಬುಧವಾರದಂದು ವರ್ಕ್ ಫ್ರಂ ಹೋಂ ಮಾಡುವಂತೆ ಐಟಿ ಕಂಪನಿಗಳಿಗೆ ಪೊಲೀಸ್ ಇಲಾಖೆ ಸಲಹೆ ನೀಡಿದೆ. ನಗರದಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಹೊಸ ಪ್ಲಾನ್ ಮಾಡಿದೆ. ಪ್ರತಿ ಬುಧವಾರ ವರ್ಕ್ ಫ್ರಂ ಹೋಂ:ಐಟಿ ಕಂಪನಿಗಳು ಇರುವ ಪ್ರದೇಶಗಳು, ಅದರ ಸುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ವಿಪರೀತ ಆಗುತ್ತಿದೆ ಹೀಗಾಗಿ ಬುಧವಾರ ಒಂದು ದಿನ ವರ್ಕ್ ಫ್ರಂ ಹೋಂ […]
ಆಪರೇಷನ್ ಮಹಾದೇವ್; ಪಹಲ್ಗಾಮ್ ದಾಳಿಯ ಮಾಸ್ಟರ್‌ಮೈಂಡ್ ಉಗ್ರ ಸೇರಿ ಮೂವರನ್ನು ಹತ್ಯಗೈದ ಸೇನೆ

ಶ್ರೀನಗರ: ಕಾಶ್ಮೀರದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಪಾಕ್ ಮೂಲದ ಮೂವರು ಭಯೋತ್ಪಾದಕರನ್ನು ಶ್ರೀನಗರ ಬಳಿಯ ಡಚಿಗಾಮ್ ಪಾರ್ಕ್ ಬಳಿಯ ಲಿಡ್ವಾಸ್ ಅರಣ್ಯ ಪ್ರದೇಶದಲ್ಲಿ ಭಾರತೀಯ ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ವರದಿಯಾಗಿದೆ. ಆಪರೇಷನ್ ಮಹಾದೇವ್:ಹರ್ವಾನ್ ಮುಲ್ನರ್ ಪ್ರದೇಶದಲ್ಲಿ ಉಗ್ರರು ತಂಗಿರುವ ಖಚಿತ ಮಾಹಿತಿ ಆಧರಿಸಿ ಸೋಮವಾರ (ಜು.28) ಬೆಳಗ್ಗೆ ಆಪರೇಷನ್ ಮಹಾದೇವ್ ಹೆಸರಿನಲ್ಲಿ ಸೇನೆ, ಸಿಆರ್ಪಿಎಫ್ ಹಾಗೂ ಜಮ್ಮು-ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿದ್ದವು. ಪಹಲ್ಗಾಮ್ ದಾಳಿಯ ಮಾಸ್ಟರ್‌ಮೈಂಡ್ ಸುಲೇಮಾನ್ ಶಾ ಸೇರಿದಂತೆ 3 ಭಯೋತ್ಪಾದಕರು ಹತರಾಗಿದ್ದಾರೆ […]
ಆ.1- 2ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್ ಪ್ರಗತಿ-2025” ಬೃಹತ್ ಉದ್ಯೋಗ ಮೇಳ

ಉಡುಪಿ: ಆಳ್ವಾಸ್ ಶಿಕ್ಷಣ ಪತಿಷ್ಠಾನದ ವತಿಯಿಂದ “ಆಳ್ವಾಸ್ ಪ್ರಗತಿ-2025” ಬೃಹತ್ ಉದ್ಯೋಗ ಮೇಳವನ್ನು ಆ.1 ಮತ್ತು 2ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆಳ್ವಾಸ್ ಪ್ರಗತಿ-2025ರಲ್ಲಿ ವಿವಿಧ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾಮೆಡಿಕಲ್, ಇಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜ್‌ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ […]
ರಮ್ಯಾಗೆ ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಸಂದೇಶ ಆರೋಪ; ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮಹಿಳಾ ಆಯೋಗದ ಪತ್ರ

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನ ಹೇಳಿಕೆಯನ್ನು ಆಧರಿಸಿ, ಸಾಮಾನ್ಯರಿಗೆ ನ್ಯಾಯ ಸಿಗುವಂತಾಗಲಿ ಎಂದು ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ದರ್ಶನ್ ಅಭಿಮಾನಿಗಳು ರಮ್ಯಾರ ಪೋಸ್ಟ್ಗೆ ಅಶ್ಲೀಲವಾಗಿ ಕಮೆಂಟ್ಗಳನ್ನು, ಕೆಲವರು ಬೆದರಿಕೆಗಳನ್ನು ಸಹ ಹಾಕಿದ್ದರು. ಈ ಕುರಿತಾಗಿ ತನಿಖೆ ಆಗಲಿ ಎಂದು ರಾಜ್ಯ ಮಹಿಳಾ ಆಯೋಗ ಪೊಲೀಸ್ ಆಯುಕ್ತರ ಬಳಿ ಮನವಿ ಮಾಡಿದೆ.ರಮ್ಯಾ ವಿರುದ್ಧ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆ ರಾಜ್ಯ ಮಹಿಳಾ ಆಯೋಗ ಪೊಲೀಸ್ ಆಯುಕ್ತರಿಗೆ ಪತ್ರ […]