12 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ TCS ಕಂಪೆನಿ!

ಬೆಂಗಳೂರು: ದೇಶದ ಅತಿದೊಡ್ಡ ಐ.ಟಿ ಸೇವಾ ಪೂರೈಕೆದಾರ ಕಂಪನಿ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಪ್ರಸಕ್ತ ಆರ್ಥಿಕ ವರ್ಷದಲ್ಲಿ 12 ಸಾವಿರಕ್ಕೂ (ಶೇ 2ರಷ್ಟು) ಹೆಚ್ಚು ಸಿಬ್ಬಂದಿಯನ್ನು ಕೆಲಸದಿಂದ ತೆಗೆಯಲು ನಿರ್ಧರಿಸಿದೆ. ಪ್ರಸಕ್ತ ವರ್ಷದ ಜೂನ್‌ 30ರಂದು ಕಂಪನಿಯು ಜಾಗತಿಕವಾಗಿ 6,13,069 ಉದ್ಯೋಗಿಗಳನ್ನು ಹೊಂದಿದೆ. ಈ ಪೈಕಿ ಅಂದಾಜು 12,261 ಉದ್ಯೋಗಿಗಳನ್ನು ಕಡಿತಗೊಳಿಸಲಿದೆ. ಹಿರಿಯ ಮತ್ತು ಮಧ್ಯಮ ಶ್ರೇಣಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಉದ್ಯೋಗಿಗಳ ಮೇಲೆ ಇದು ಹೆಚ್ಚು ಪರಿಣಾಮ ಬೀರಲಿದೆ ಎಂದು ಟಿಸಿಎಸ್‌ ಭಾನುವಾರ ತಿಳಿಸಿದೆ. ಜೂನ್‌ […]

ಉಡುಪಿ : ಕರವೇ (ಪ್ರವೀಣ್ ಶೆಟ್ಟಿ ಬಣ) ಗೌರವ ಸಲಹೆಗಾರರಾಗಿ ಶೇಖರ್ ಹೆಜಮಾಡಿ ಆಯ್ಕೆ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕದ ಗೌರವ ಸಲಹೆಗಾರರಾಗಿಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ದಲಿತ ಹೋರಾಟಗಾರ ಶೇಖರ್ ಹೆಜಮಾಡಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಗೌರವಾಧ್ಯಕ್ಷರಾದ ಅನ್ಸಾರ್ ಅಹಮದ್ ರವರು ಉಡುಪಿ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಗೌರವ ಸಲಹೆಗಾರರಾಗಿ ಶೇಖರ್ ಹೆಜಮಾಡಿಯವರನ್ನು ದಿನಾಂಕ 23-07-2025 ರಿಂದ ಜಾರಿಗೆ ಬರುವಂತೆ ಆಯ್ಕೆ ಮಾಡಿ ಆದೇಶ ಹೊರಡಿಸಿರುತ್ತಾರೆ.

ಮಣಿಪಾಲ: ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಯತ್ನ; ಆರೋಪಿಯ ಬಂಧನ

ಉಡುಪಿ: ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಯತ್ನಿಸಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕೊಡವೂರು ಗ್ರಾಮದ ಜುಮಾದಿನಗರದ ಸಾಗರ್ (25) ಬಂಧಿತ ಆರೋಪಿ. ಜು.26ರ ಶನಿವಾರ ಬೆಳಿಗ್ಗೆ ಸುಮಾರು 2.30 ಕ್ಕೆ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಸಾಗರ್ ನನ್ನು ಮಹಿಳಾ ಪೊಲೀಸ್ ಅಧಿಕಾರಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಮಹಿಳಾ ಪೊಲೀಸ್ ಅಧಿಕಾರಿಗೆ ಹಲ್ಲೆ ನಡೆಸಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ‌. ಬಂಧಿತನನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, […]

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ: ಜುಲೈ 30 ಮತ್ತು 31 ರಂದು ಉಚಿತವಾಗಿ ಫಲವತ್ತತೆ ಮತ್ತು ಬಂಜೆತನ ತಪಾಸಣಾ ಶಿಬಿರ.

ಮಣಿಪಾಲ: ಬಂಜೆತನ ಮತ್ತು ಸಂತಾನೋತ್ಪತ್ತಿ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಕಳವಳಗಳನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ಮಹತ್ವದ ಉಪಕ್ರಮದಲ್ಲಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಬುಧವಾರ , ಜುಲೈ 30 ಮತ್ತು ಗುರುವಾರ , 31, 2025 ರಂದು ಉಚಿತವಾಗಿ ಫಲವತ್ತತೆ ಮತ್ತು ಬಂಜೆತನ ತಪಾಸಣಾ ಶಿಬಿರವನ್ನು ಆಯೋಜಿಸುತ್ತಿದೆ. ಆಸ್ಪತ್ರೆಯ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಎರಡೂ ದಿನ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12:30 ರವರೆಗೆ ಈ ಶಿಬಿರವ ನಡೆಯಲಿದೆ. ಈ ಶಿಬಿರವು ದಂಪತಿಗಳು ಮತ್ತು ವ್ಯಕ್ತಿಗಳಿಗೆ […]