ಉಡುಪಿ: 21 ವರ್ಷಗಳಿಂದ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ.

ಉಡುಪಿ: ಶಂಕರನಾರಾಯಣ ಠಾಣಾ(ಈಗಿನ ಅಮಾಸೆಬೈಲು ಠಾಣೆ) ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 21ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಪುತ್ತೂರು ಮೆಗ್ರಾಲು ನಿವಾಸಿ ಫಾರೂಕ್ ಬಂಧಿತ ಆರೋಪಿ. ಈತ ವಿರುದ್ಧ 2004ರ ಡಿ.25ರಂದು ಪ್ರಕರಣ ದಾಖ ಲಾಗಿದ್ದು, ಅಂದಿನಿಂದ ಈತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಆ ಹಿನ್ನೆಲೆಯಲ್ಲಿ ಆತನ ವಿರುದ್ದ ಎಲ್.ಪಿ.ಸಿ ವಾರಂಟು ಹೊರಡಿಸಲಾಗಿತ್ತು. ಈತನ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದ್ದು, ತಂಡವು ಹಲವು ಆಯಾಮಗಳ ಮೂಲಕ […]
ಎಲ್ಲರ ಗಮನ ಸೆಳೆಯುತ್ತಿದೆ ‘ಸೈಯಾರಾ’ ಸಿನಿಮಾ: ಬಾಕ್ಸ್ ಆಫೀಸ್‌ನಲ್ಲಿ ಒಟ್ಟು 250 ಕೋಟಿ ರೂ. ಕಲೆಕ್ಷನ್.!

`ಸೈಯಾರಾ’ ಸಿನಿಮಾ ಜು.18ರಂದು ತೆರೆಕಂಡು, ಎಲ್ಲೆಡೆ ಯಶಸ್ವಿಯಾಗಿ ಪ್ರದರ್ಶನಗೊಂಡಿದೆ. ಮೋಹಿತ್ ಸೂರಿ ನಿರ್ದೇಶನದ ಈ ಸಿನೆಮಾ, ಬಿಡುಗಡೆಯಾಗಿ ಕೇವಲ ಎರಡೇ ವಾರದಲ್ಲಿ ತನ್ನ ಬಾಕ್ಸ್ ಆಫೀಸ್‌ನಲ್ಲಿ ಒಟ್ಟು 250 ಕೋಟಿ ರೂ. ಬಾಚಿಕೊಂಡಿದೆ. `ಸೈಯಾರಾ’ ಸಿನಿಮಾ ಮೊದಲ ದಿನವೇ 21.5 ಕೋಟಿ ರೂ. ಗಳಿಸಿತು. ದಿನಗಳೆದಂತೆ ಸಿನಿಮಾ ಕ್ರೇಜ್ ಹೆಚ್ಚುತ್ತಲೇ ಇದೆ. ಸಾಮಾನ್ಯವಾಗಿ ವಾರದ ದಿನಗಳಲ್ಲಿ ಕಡಿಮೆ ಕಲೆಕ್ಷನ್ ಆದರೂ ಕೂಡ ಈವರೆಗೂ ಎರಡಂಕಿಗಿಂತ ಕೆಳಗಿಳಿದಿಲ್ಲ. ಆದರೆ ವೀಕೆಂಡ್‌ನಲ್ಲಿ ಮಾತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಸೈಯಾರಾ ಮೂಲಕ […]
ದರ್ಶನ್ ಅಭಿಮಾನಿಗಳಿಂದ ಜೀವ ಬೆದರಿಕೆ; ಎಸ್‌ಪಿ ಕಚೇರಿಗೆ ದೂರು ನೀಡಿದ ಪ್ರಥಮ್

ಬೆಂಗಳೂರು: ನಟ ದರ್ಶನ್ ಅವರ ಅಭಿಮಾನಿಗಳು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟ ಪ್ರಥಮ್ ಸಹ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‌ಪಿ ಸಿ.ಕೆ.ಬಾಬಾ ಅವರಿಗೆ ಮಂಗಳವಾರ ಲಿಖಿತ ದೂರು ನೀಡಿದರು.ದೂರು ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಪ್ರಥಮ್, ‘ನನಗೆ ದರ್ಶನ್ ಅಭಿಮಾನಿಗಳು ಬೆದರಿಕೆ ಹಾಕುತ್ತಿದ್ದಾರೆ. ನನಗೆ ಏನಾದರೂ ಆದರೆ ದರ್ಶನ್ ಅವರೇ ಕಾರಣ. ದರ್ಶನ್ ಅವರಿಗೆ ಸಾಮಾನ್ಯ ಜ್ಞಾನ ಇಲ್ವಾ? ಅವರು ತಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಬೇಕು’ ಎಂದು ಕೋರಿದರು. ‘ಸಾಕಷ್ಟು ಬಾರಿ ಬೆದರಿಕೆ […]
ಉಡುಪಿಯ ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ: ಉಡುಪಿಯ ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: ▪ ಸೇಲ್ಸ್ (Male/Female)- 2 ▪ ಸ್ಪೇರ್ಸ್ ಮ್ಯಾನೇಜರ್ -1▪ ಅಸಿಸ್ಟೆಂಟ್ ಪಿ ಡಿ ಐ-2▪ ಸರ್ವಿಸ್ ಅಡ್ವೈಸರ್-3▪ಸಿ ಆರ್ ಇ-2▪ ಹೆಲ್ಪರ್ಸ್-2▪ ಮೆಕಾನಿಕ್-3 ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಮೇಲ್ ಐಡಿಗೆ ಕಳುಹಿಸಿ.📩[email protected]📞+91 7996210666
ಉಡುಪಿ:ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ

ಉಡುಪಿ:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ನಾಗರಾಜ ನಾಗರಾಣಿಯರ ಸನ್ನಿಧಾನವಾದ ನಾಗಾಲಯದಲ್ಲಿ ನಾಗರ ಪಂಚಮಿ ಆಚರಣೆ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಿತು. ಆ ಪ್ರಯುಕ್ತ ಕ್ಷೇತ್ರದಲ್ಲಿ ನಾಗ ತನು ತಂಬಿಲ ಸೇವೆ ಪಂಚಾಮೃತ ಅಭಿಷೇಕದಿಗಳು, ಪ್ರಸನ್ನ ಪೂಜೆ ಮಹಾ ಅನ್ನಸಂತರ್ಪಣೆ ನೆರವೇರಿತು. ಕಾರಣಿಕ ಮೆರೆವ ವಲ್ಲಿ ದೇವಯಾನಿ ಸಹಿತವಾಗಿ ಷಟ್ಶಿರಾ ಸುಬ್ರಹ್ಮಣ್ಯ ಸ್ವಾಮಿಯ ಸನ್ನಿಧಾನವನ್ನು ಹೊಂದಿರುವ ಶ್ರೀ ಕ್ಷೇತ್ರದ ನಾಗಾಲಯದಲ್ಲಿ ಪ್ರಾತಃಕಾಲದಿo ದಲೇ […]