ಧರ್ಮಸ್ಥಳ ಪ್ರಕರಣ: ದೂರುದಾರ ತೋರಿಸಿದ ಪಾಯಿಂಟ್ ನಂ. 6ನೇ ಸ್ಥಳದಲ್ಲಿ ಕಳೇಬರ ಪತ್ತೆ.

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಮೃತದೇಹಗಳ ಪತ್ತೆಗಾಗಿ ನಡೆಯುತ್ತಿರುವ 3ನೇ ದಿನದ ಶೋಧ ಕಾರ್ಯದ ವೇಳೆ ಕೆಲವು ಅವಶೇಷಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗುತ್ತಿದೆ. ಆದರೆ ಈ ವಿಚಾರವನ್ನು ಎಸ್ಐಟಿ ಇನ್ನೂ ಖಚಿತಪಡಿಸಿಲ್ಲ. ದೂರುದಾರ ಗುರುತಿಸಿರುವ ನೇತ್ರಾವತಿ ಸ್ನಾನ ಘಟ್ಟದ ಸಮೀಪವಿರುವ ಆರನೇ ಸ್ಥಳದಲ್ಲಿ ಅಗೆಯುವ ವೇಳೆ ಕೆಲವು ಎಲುಬಿನ ಚೂರುಗಳು ಲಭಿಸಿರುವ ಬಗ್ಗೆ ಮಾಹಿತಿಗಳು ಹೊರಬರುತ್ತಿವೆ. ಈ ಬಗ್ಗೆ ಎಸ್ಐಟಿ ಅಧಿಕಾರಿಗಳಿಂದ […]
ವಿದ್ಯಾರ್ಥಿಗಳ ಕನಸುಗಳನ್ನು ಹೆಮ್ಮರವಾಗಿಸುವ ಹೇರಾಡಿ ಬಾರ್ಕೂರು ನೇಶನಲ್ ಐಟಿಐ ತಾಂತ್ರಿಕ ಶಿಕ್ಷಣ ಸಂಸ್ಥೆ

ಉಡುಪಿ: ದಿ ಬಾರ್ಕೂರು ಎಜ್ಯುಕೇಶನಲ್ ಸೊಸೈಟಿಯ ಆಡಳಿತಕ್ಕೊಳಪಟ್ಟ ನೇಶನಲ್ ಐಟಿಐ ಯು ಉಡುಪಿ ಜಿಲ್ಲೆಯ ಪ್ರಥಮ ಐಟಿಐ ಎಂಬ ಗರಿಮೆಯೊಂದಿಗೆ 1/8/1984 ರಲ್ಲಿ ಪ್ರಾರಂಭವಾಯಿತು. ಅಂದಿನ ಆಡಳಿತ ಮಂಡಳಿಯ ದೂರದರ್ಶಿತ್ವದಿಂದ ಊರ ಮಹನೀಯರ ಸಹಕಾರದೊಂದಿಗೆ ಗ್ರಾಮೀಣ ಪ್ರದೇಶದಲ್ಲಿ ಪ್ರಾರಂಭವಾಗಿರುವ ನಮ್ಮ ಸಂಸ್ಥೆ ಬೆಳೆದು ಹೆಮ್ಮರವಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ನೀಡುವಲ್ಲಿ ಸಫಲತೆಯನ್ನು ಪಡೆದಿದೆ. ಸಂಸ್ಥೆಗೆ “ಗ್ರೇಡಿಂಗ್ ಮೆಥಡಾಲಜಿ”ಯಲ್ಲಿ ಉಡುಪಿ ಜಿಲ್ಲೆಯಲ್ಲೇ ಪ್ರಥಮ:ಭಾರತ ದೇಶದಲ್ಲಿನ ಐಟಿಐ ಕಾಲೇಜ್ ಗಳ ಫಲಿತಾಂಶ, ವಿದ್ಯಾರ್ಥಿಗಳ ದಾಖಲಾತಿ, ಶೈಕ್ಷಣಿಕ ಗುಣಮಟ್ಟ ಹಾಗೂ […]
ಉಡುಪಿ: ಕೊಳಲಗಿರಿಯಲ್ಲಿರುವ ಫರ್ನಿಚರ್ ಶೋರೂಮ್’ ನಲ್ಲಿ ಉದ್ಯೋಗಾವಕಾಶ

ಉಡುಪಿ: ಉಡುಪಿಯ ಕೊಳಲಗಿರಿಯಲ್ಲಿರುವ ಹೆಸರಾಂತ ಫರ್ನಿಚರ್ ಶೋರೂಮಿಗೆ ಸೇಲ್ಸ್ ಮ್ಯಾನ್ ಹುದ್ದೆಗೆ ಹುಡುಗರು ಬೇಕಾಗಿದ್ದಾರೆ. ಉತ್ತಮ ಸಂಬಳದೊಂದಿಗೆ PF, ESI ಸೌಲಭ್ಯವಿದೆ.ಆಸಕ್ತರು ಮಾಹಿತಿಗಾಗಿ ಸಂಪರ್ಕಿಸಿ:📞9880080253, 📞9964142100
ರಾಜ್ಯದಲ್ಲಿ ಓಲಾ, ಊಬರ್ ರೀತಿ ಆ್ಯಂಬುಲೆನ್ಸ್ ಸೇವೆ ಆರಂಭ.!

ಕಾರವಾರ: ಓಲಾ, ಊಬರ್ ಆ್ಯಪ್ ಬಳಸಿ ಟ್ಯಾಕ್ಸಿ ಹಾಗೂ ಆಟೋ ಬುಕ್ ಮಾಡುವಂತೆ ಇನ್ನು ಮುಂದೆ ರಾಜ್ಯದಲ್ಲಿ ಆ್ಯಂಬುಲೆನ್ಸ್‌ಗಳನ್ನು ಕೂಡ ಕರೆಸಬಹುದು. ಈಗಾಗಲೇ ಗುರುಗ್ರಾಮದಲ್ಲಿ ಖಾಸಗಿ ಕಂಪನಿಯೊಂದು ಇಂತಹ ಸೇವೆ ಆರಂಭಿಸಿದ್ದು, ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ಆ್ಯಂಬುಲೆನ್ಸ್ ಸೇವೆ ಕಲ್ಪಿಸಲು ಮುಂದಾಗಿದೆ. ಈ ಆ್ಯಂಬುಲೆನ್ಸ್‌ಗಳಿಗೆ ಸರ್ಕಾರವೇ ದರ ನಿಗದಿ ಮಾಡಲಿದೆ. ಅಗತ್ಯ ಇರುವವರು ಮೊಬೈಲ್ ಆ್ಯಪ್ ಬಳಸಿ ಅವುಗಳ ಸೇವೆ ಪಡೆಯಬಹುದಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇದಕ್ಕಾಗಿ ರಾಜ್ಯದಲ್ಲಿನ ವೈದ್ಯಕೀಯ […]
ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರ ಬಂಧನ: ಉಡುಪಿ ಧರ್ಮಪ್ರಾಂತ್ಯ ಖಂಡನೆ

ಉಡುಪಿ: ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪದ ಮೇಲೆ ಬಂಧಿಸಿರುವ ಕ್ರಮವನ್ನು ಉಡುಪಿ ಕ್ರೈಸ್ತ ಧರ್ಮ ಪ್ರಾಂತ್ಯ ತೀವ್ರವಾಗಿ ಖಂಡಿಸಿದೆ. 2025ರ ಜುಲೈ 25ರಂದು ಛತ್ತೀಸ್ಗಢದ ದುರ್ಗ್ ರೈಲು ನಿಲ್ದಾಣದಲ್ಲಿ ಇಬ್ಬರು ಕಥೊಲಿಕ ಕ್ರೈಸ್ತ ಧರ್ಮ ಭಗಿನಿಯರನ್ನು ಬಂಧಿಸಿರುವುದಲ್ಲದೆ ಕೆಲವೊಂದು ಬಲಪಂಥೀಯ ಸಂಘಟನೆಗಳಿಂದ ದೈಹಿಕ ಹಿಂಸೆ ನಡೆಸಿರುವ ಘಟನೆ ಅತೀವ ನೋವನ್ನುಂಟುಮಾಡಿದೆ ಎಂದು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಬೊ ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಇಬ್ಬರು ಧರ್ಮಭಗನಿಯರು […]