ಉಡುಪಿ: ಆ.4ರಂದು ವಿಶೇಷ ಜಿಎಸ್ ಟಿ ಜಾಗೃತಿ ಕಾರ್ಯಕ್ರಮ

ಉಡುಪಿ: ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣ ವೇದಿಕೆ ಹಾಗೂ ದಿ ಇನ್ ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಉಡುಪಿ ಶಾಖೆಯ ಜಂಟಿ ಆಶ್ರಯದಲ್ಲಿ ವಿಶೇಷ (ಜಿಎಸ್ ಟಿ) ಜಾಗೃತಿ ಕಾರ್ಯಕ್ರಮವನ್ನು ಇದೇ ಆ.4ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ಅಜ್ಜರಕಾಡಿನ ಟೌನ್‌ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣ ವೇದಿಕೆಯ ಅಧ್ಯಕ್ಷ ಆನಂದ್ ಕಾರ್ನಾಡ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ‌ ಮಾಹಿತಿ ನೀಡಿದ ಅವರು, ಇತ್ತೀಚೆಗೆ ರಾಜ್ಯ ಸರ್ಕಾರದ GST ನೋಂದಣಿ ಹಾಗೂ […]

ಉಡುಪಿ: ಆ.2ರಂದು 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಮತ್ತು ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ್ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಅನುದಾನಿತಾ ಶಾಲೆಗಳ ಸಂಘದ ಸಹಯೋಗದಲ್ಲಿ ಉಡುಪಿ ಜಿಲ್ಲೆಯಲ್ಲಿ 200 ಅನುದಾನಿತ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ್ ಪ್ರಶಸ್ತಿ ಪ್ರದಾನ ಸಮಾರಂಭವು ನಾಳೆ (ಆ. 2ರಂದು) ಬೆಳಿಗ್ಗೆ 10:30ಕ್ಕೆ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಉಪಾಧ್ಯಕ್ಷ ನಾಗರಾಜ ಶೆಟ್ಟಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ […]

ಒಮ್ಮೆ ಉಪಯೋಗಿಸಿದ ಅಡುಗೆ ಎಣ್ಣೆಯನ್ನು ಮತ್ತೆ ಮರುಬಳಕೆ ಮಾಡದಂತೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಅಡುಗೆ ಎಣ್ಣೆ ಮರುಬಳಕೆ ಮಾಡುತ್ತಿರುವ ಮಾಹಿತಿ ಬೆನ್ನಲ್ಲೇ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಎಣ್ಣೆ ಉದ್ದಿಮೆದಾರರು ಹಾಗೂ ಬೇಕರಿ, ಹೋಟೆಲ್‌ನವರಿಗೆ ಖಡಕ್ ನಿರ್ದೇಶನ ಹೊರಡಿಸಿದ್ದು, ಈ ಮೂಲಕ ಅಡುಗೆ ಎಣ್ಣೆ ತಯಾರಿಕಾ ಘಟಕದವರು ಕಡ್ಡಾಯವಾಗಿ ಆರು ತಿಂಗಳಿಗೊಮ್ಮೆ ಗುಣಮಟ್ಟ ವಿಶ್ಲೇಷಣೆ ತಪಾಸಣೆ ಮಾಡಿಸಬೇಕು ಎಂದು ಸೂಚಿಸಿದೆ. ರಾಜ್ಯದಲ್ಲಿ ಹೆಚ್ಚಾದ ಹೃದಯಘಾತ ಪ್ರಕರಣ; ಎಚ್ಚೆತ್ತೆ ಆರೋಗ್ಯ ಇಲಾಖೆ:ರಾಜ್ಯದಲ್ಲಿ ಹೆಚ್ಚಾದ ಹೃದಯಘಾತ ಪ್ರಕರಣದ ಬಳಿಕ ಆರೋಗ್ಯ ಇಲಾಖೆ ಎಚ್ಚೆತ್ತಿದೆ. ಕೆಲ ಅಡುಗೆ ಎಣ್ಣೆಗಳಿಂದ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಳವಾಗಿ […]

ಬಂಟಕಲ್: ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಯು ಶೈಕ್ಷಣಿಕ ಮತ್ತು ಸಂಶೋಧನಾ ಶ್ರೇಷ್ಠತೆಯನ್ನು ಹೆಚ್ಚಿಸಲು ನಿಟ್ಟೆ ವಿಶ್ವವಿದ್ಯಾಲಯದೊಂದಿಗೆ ಒಡಂಬಡಿಕೆ

ಉಡುಪಿ, ಬಂಟಕಲ್: ಶ್ರೀ ಸೋದೆ ವಾದಿರಾಜ ಮಠ ಸಮೂಹ ಶಿಕ್ಷಣ ಸಂಸ್ಥೆಗಳು (SSVMEI) ಮತ್ತು ಮಂಗಳೂರು ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯದ ಜೊತೆ ದಿನಾಂಕ 29 ಜುಲೈ 2025 ರಂದು ಒಡಂಬಡಿಕೆಗೆ ಸಹಿ ಹಾಕಿತು. ಈ ಒಪ್ಪಂದವು ಶೈಕ್ಷಣಿಕ ಕ್ಷೇತ್ರದಲ್ಲಿ ನವೀನತೆ,ಸಂಶೋಧನೆಯಲ್ಲಿ ಉತ್ಕೃಷ್ಟತೆ ಮತ್ತು ಉದ್ಯಮಶೀಲತೆಯ ಕ್ಷೇತ್ರದಲ್ಲಿ ಅಭಿವೃದ್ಧಿ, ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ವಿವಿಧ ಕ್ಷೇತ್ರಗಳಲ್ಲಿ ತಂತ್ರಜ್ಞಾನ ಮತ್ತು ಜ್ಞಾನವನ್ನು ಹಂಚಿಕೊಳ್ಳಲು ವೇದಿಕೆಯನ್ನು ಒದಗಿಸುತ್ತದೆ. ಇದು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹ್ಯಾಕಥಾನ್, ಇಂಟರ್ನ್ಶಿಪ್ ಮತ್ತು ಸಣ್ಣ ಪ್ರಾಜೆಕ್ಟ್ಗಳ ಮೂಲಕ […]

ಬರ್ತಿದೆಯಂತೆ “ಧರ್ಮಸ್ಥಳ ಫೈಲ್ಸ್” ಸಿನಿಮಾ: ರಿಜಿಸ್ಟರ್ ಆಯ್ತು ಟೈಟಲ್, ಚಿತ್ರರಂಗದಲ್ಲೂ ಸದ್ದು ಮಾಡುತ್ತ ಧರ್ಮಸ್ಥಳದ ಪ್ರಕರಣ!

ಎಲ್ಲರ ಕಣ್ಣು ಈಗ ಧರ್ಮಸ್ಥಳದತ್ತ ನೆಟ್ಟಿದೆ. ನಿನ್ನೆಯಷ್ಟೇ ಧರ್ಮಸ್ಥಳದ 6 ನೇ ಗುಂಡಿಯಲ್ಲಿ ಮೂಳೆಗಳು ಸಿಕ್ಕಿವೆ. ಎಸ್ ಐಟಿ  ಮತ್ತು ಅನಾಮಿಕ ವ್ಯಕ್ತಿ ಇನ್ನಷ್ಟು ಶೋಧನೆಗಿಳಿದಿದ್ದಾರೆ. ಈ ಬೆನ್ನಲ್ಲೇ ಜನರು ಧರ್ಮಸ್ಥಳ ಪ್ರಕರಣದ ಕುರಿತು ಚರ್ಚಿಸೋದು ಜಾಸ್ತಿಯಾಗಿದೆ. ಎಲ್ಲರ ಬಾಯಲ್ಲೂ ಮಣ್ಣಿನಲ್ಲಿ ಹೂತುಹೋದ ಆ ಮೂಳೆಗಳು ಮತ್ತು ಇನ್ನೂ ಸಿಗಬಹುದಾದ ಅಸ್ಥಿಪಂಜರದತ್ತ ನೆಟ್ಟಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಕರ್ನಾಟಕ ಸಿನಿಮಾ ವಾಣಿಜ್ಯ ಮಂಡಳಿಯಲ್ಲಿ ಧರ್ಮಸ್ಥಳ ಫೈಲ್ಸ್ ಎನ್ನುವ ಸಿನಿಮಾ ಟೈಟಲ್ ರಿಜಿಸ್ಟರ್ ಆಗಿದ್ದು ಚಿತ್ರರಂಗದಲ್ಲೂ ಸದ್ದು […]