ಬಂಟಕಲ್ ಇಂಜಿನಿಯರಿಂಗ್‌ ಕಾಲೇಜಿನ ಮೆಕ್ಯಾನಿಕಲ್ ವಿಭಾಗಕ್ಕೆ ಎನ್ ಬಿ ಎ ಮಾನ್ಯತೆ

ಉಡುಪಿ, ಬಂಟಕಲ್: ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ಮೂರು ವರ್ಷಗಳ ಅವಧಿಗೆ ರಾಷ್ರೀಯ ಮಾನ್ಯತಾ ಮಂಡಳಿಯಿಂದ ಮಾನ್ಯತೆ ಪಡೆದಿದ್ದು, ಇಂಜಿನಿಯರಿಂಗ್ ಶಿಕ್ಷಣದಲ್ಲಿ ಶ್ರೇಷ್ಠತೆ ಮತ್ತು ನಿರಂತರ ಗುಣಮಟ್ಟ ಸುಧಾರಣೆಗೆ ಅದರ ಬದ್ಧತೆಯನ್ನು ಗುರುತಿಸಿದೆ. ಭಾರತ ಸರ್ಕಾರದ ಅಡಿಯಲ್ಲಿ ರಾಷ್ರೀಯ ಮಾನ್ಯತಾ ಮಂಡಳಿ (NBA) ಅತ್ಯುನ್ನತ ಸ್ವಾಯತ್ತ ಸಂಸ್ಥೆಯಾಗಿದ್ದು, ಇದು ಭಾರತದಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳು ನೀಡುವ ಪದವಿಗಳ ಗುಣಾತ್ಮಕ ಸಾಮರ್ಥ್ಯವನ್ನು ನಿರ್ಣಯಿಸುತ್ತದೆ. 2025-26 ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವ ಈ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ “ಐಒಟಿ ಅಪ್ಲಿಕೇಶನ್‌” ಗಳ ಬಗ್ಗೆ ಮಾರ್ಗದರ್ಶನ

ಉಡುಪಿ, ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಅನ್ನಪೂರ್ಣ ಶೆಣೈ, ಪೂರ್ಣಿತಾ, ದಿವ್ಯಾಂತ್, ಶರಣ್ಯ, ಚಂದನ್ ಮತ್ತು ಕಾರ್ತಿಕ್ ಇವರು ದಿನಾಂಕ 26 ಜುಲೈ 2025 ರಂದು ಹಿರಿಯಡ್ಕ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಐಒಟಿ ಅಪ್ಲಿಕೇಶನ್ ಬಗ್ಗೆಮಾರ್ಗದರ್ಶನ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮ ಮುಖ್ಯ ಉದ್ದೇಶ ವಿದ್ಯಾರ್ಥಿಗಳಲ್ಲಿ ನಾವೀನ್ಯತೆ ಮತ್ತು ಡಿಜಿಟಲ್ ಸಾಕ್ಷರತೆಯ ಬಗ್ಗೆ ಮಾಹಿತಿ ನೀಡುವುದಾಗಿದೆ. ಹಿರಿಯಡ್ಕ ಕರ್ನಾಟಕ ಪಬ್ಲಿಕ್ ಶಾಲೆಯ ೮ನೇ ತರಗತಿಯ ಸುಮಾರು 30 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇವರಿಗೆ ಎಲೆಕ್ಟ್ರಾನಿಕ್ಸ್ […]

ಬೆಂಗಳೂರು: ಟ್ಯೂಷನ್ ಮುಗಿಸಿ ಬರುತ್ತಿದ್ದ ಬಾಲಕನನ್ನು ಅಪಹರಿಸಿ ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ.

ಬೆಂಗಳೂರು: ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬಾಲಕ ನಿಶ್ಚಿತ್‌ನನ್ನು (13) ಅಪಹರಿಸಿ ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹುಳಿಮಾವು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಬಂಧಿತ ಆರೋಪಿಗಳು. ಇಬ್ಬರು ಆರೋಪಿಗಳು ಕಗ್ಗಲಿಪುರ ಅರಣ್ಯದಲ್ಲಿ ಅಡಗಿ ಕುಳಿತ್ತಿದ್ದರು.‌ ಖಚಿತ ಮಾಹಿತಿ ಆಧರಿಸಿ ಗುರುವಾರ ತಡರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಕಾರ್ಯಾಚರಣೆ ವೇಳೆ ಪೊಲೀಸರ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿ […]

ಉಡುಪಿ: ಆತ್ರಾಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭ

ಉಡುಪಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ “ದ್ವಿ ಭಾಷಾ ಕಲಿಕಾ ಆಂಗ್ಲ ಮಾಧ್ಯಮ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಪರೀಕ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಮೊಕ್ತೇಸರರಾದ ಉದಯರಾಜ್ ಹೆಗ್ಡೆಯವರ ಅದ್ಯಕ್ಷತೆಯಲ್ಲಿ ಜರಗಿತು. ಕಾರ್ಯಕ್ರಮ ಉದ್ಘಾಟನೆಯನ್ನು ವೇದಿಕೆಯಲ್ಲಿ ಉಪಸ್ಥಿತ ಅತಿಥಿ ಗಣ್ಯರು ನಡೆಸಿದರು. ವೇದಿಕೆಯಲ್ಲಿ ಆದಾಯ ತೆರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಕೃಷ್ಣ ಮೂರ್ತಿ ಪ್ರಭು, ಪಂಚಾಯತ್ ಅಧ್ಯಕ್ಷರಾದ ಹರೀಶ್ ಶೆಟ್ಟಿ, ಎಸ್ ಡಿಎಂಸಿ ಅಧ್ಯಕ್ಷೆ ಶ್ರೀಮತಿ ಸಬೀನಾ, ಲಯನ್ಸ್ ಸಂಪುಟ ಸದಸ್ಯ ಹರೀಶ್ ಹೆಗ್ಡೆ, ಜಿಲ್ಲಾ ಆಂಗ್ಲ […]

ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪಾಲಿಟೆಕ್ನಿಕ್’ಗಳಲ್ಲಿ ಪ್ರವೇಶ ಅವಧಿಯನ್ನು ವಿಸ್ತರಣೆ: ಆಗಸ್ಟ್ 11 ಲಾಸ್ಟ್ ಡೇಟ್.

ಬೆಂಗಳೂರು: ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪಾಲಿಟೆಕ್ನಿಕ್ಗಳಲ್ಲಿ ಪ್ರವೇಶ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು ಆಗಸ್ಟ್ 11 ರವರೆಗೆ ವಿಸ್ತರಿಸಲಾಗಿದೆ. 2025-26ನೇ ಶೈಕ್ಷಣಿಕ ಸಾಲಿನ ಪ್ರಥಮ ಸೆಮಿಸ್ಟರ್ ಹಾಗೂ ಲ್ಯಾಟರಲ್ ಎಂಟ್ರಿ 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿ ಸಂಬಂಧ ದ್ವಿತೀಯ ಪಿಯುಸಿ/ 02 ವರ್ಷಗಳ ಐಟಿಐ ಟ್ರೇಡ್ನಲ್ಲಿ ಉತ್ತೀರ್ಣರಾಗಿರುವ ಮತ್ತು ಎಸ್. ಎಸ್.ಎಲ್. ಸಿ ಪರೀಕ್ಷೆ-3ರಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಹಾಗೂ ಒಂದು ವರ್ಷ ಸೇವಾನುಭವುಳ್ಳ ವೃತ್ತಿಪರ ಅಭ್ಯರ್ಥಿಗಳಿಗೂ ಸಹ ಅನ್ವಯವಾಗುವಂತೆ ಪ್ರವೇಶಾವಧಿಯನ್ನು ವಿಸ್ತರಿಸಬೇಕೆಂದು ಕೋರಿರುವುದನ್ನು ಪರಿಗಣಿಸಿ ಒಟ್ಟಾರೆ […]