ಬೈಂದೂರು: ರೈಲಿಗೆ ‘ಮೂಕಾಂಬಿಕಾ ಎಕ್ಸ್‌ಪ್ರೆಸ್‌’ ಮರುನಾಮಕರಣಕ್ಕೆ ಮನವಿ.

ಬೈಂದೂರು: ವಾರಕ್ಕೊಮ್ಮೆ ಇರುವ 10215/10216 ಈ ಸಂಖ್ಯೆಯ ರೈಲಿಗೆ ಮೂಕಾಂಬಿಕಾ ಎಕ್ಸ್‌ಪ್ರೆಸ್‌ ಎಂದು ನಾಮಕರಣ ಮಾಡಿ ಪ್ರತಿದಿನ ಸೇವೆ ನೀಡಬೇಕು ಎಂದು ಒತ್ತಾಯಿಸಿ, ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ವಿನಂತಿಸಿದರು. ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಮೂಲ ಸೌಲಭ್ಯ ಅಭಿವೃದ್ಧಿ, ಬಿಜೂರು ರೈಲು ನಿಲ್ದಾಣ ಹಾಗೂ ಸೇನಾಪುರ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕ ಮೆಮು, ಮತ್ಸ್ಯಗಂಧ ಹಾಗೂ ಪಂಚಗಂಗಾ ಎಕ್ಸ್‌ಪ್ರೆಸ್‌ ರೈಲುಗಳಿಗೆ ನಿಲುಗಡೆ ನೀಡುವಂತೆ ಅವರು ಸಚಿವರನ್ನು […]

CET/NEET – ಸೀಟು ಹಂಚಿಕೆಯ ತಾತ್ಕಾಲಿಕ ಪಟ್ಟಿ ಪ್ರಕಟ.

ಬೆಂಗಳೂರು: ಎಂಜಿನಿಯರಿಂಗ್‌, ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ.ಆಕ್ಷೇಪಣೆಗಳು ಇದ್ದಲ್ಲಿ ಆಗಸ್ಟ್‌ 2ರಂದು ಬೆಳಿಗ್ಗೆ 11 ಗಂಟೆ ಒಳಗೆ ಇ-ಮೇಲ್‌ ಮೂಲಕ ಕೆಇಎಗೆ ಸಲ್ಲಿಸಬಹುದು. ಅದನ್ನು ಪರಿಶೀಲಿಸಿದ ಬಳಿಕ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಂತಿಮ ಪಟ್ಟಿ ಪ್ರಕಟಣೆ ಬಳಿಕ ವೈದ್ಯಕೀಯ ಕೋರ್ಸ್‌ ಹೊರತುಪಡಿಸಿ, ಎಂಜಿನಿಯರಿಂಗ್‌, ಕೃಷಿ ಇತ್ಯಾದಿ ಕೋರ್ಸ್‌ಗಳ […]

ಸಾಮಾಜಿಕ ಜಾಲತಾಣ ಮೇಲೆ ನಿರಂತರ ನಿಗಾ, ಸುಳ್ಳುಸುದ್ದಿ ಹರಡಿದ್ರೆ ಕಠಿಣ ಕ್ರಮ; ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳ ಮೇಲೆ ನಿರಂತರ ನಿಗಾ ಇರಿಸಲಾಗಿದ್ದು, ಸುಳ್ಳುಸುದ್ದಿ ಹರಡಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ ಪರಮೇಶ್ವರ್, ‘ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆಗೆ ಸಂಬಂಧಿಸಿದ ಪೋಸ್ಟ್‌ಗಳಿಗಾಗಿ ಸರ್ಕಾರ ಸಾಮಾಜಿಕ ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ. ಸಮಾಜದಲ್ಲಿ ಭಾವನೆಗಳನ್ನು ಕೆರಳಿಸುವ” ಪೋಸ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಕೊಲೆ, ಅತ್ಯಾಚಾರ […]

ಉಡುಪಿ:ದುಷ್ಚಟಗಳಿಂದ ದೂರವಿದ್ದಾಗ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ : ಡಾ.ಕೆ ಸುರೇಶ್ ಶೆಣೈ

ಉಡುಪಿ: ಜನಸಾಮಾನ್ಯರು ದುಷ್ಚಟಗಳಿಂದ ದೂರವಿದ್ದಾಗ ಮಾತ್ರ ಉತ್ತಮ ಆರೋಗ್ಯ ಹೊಂದಿ, ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಮೂಳೆ ರೋಗ ತಜ್ಞ ಹಾಗೂ ಭಾರತೀಯ ವೈದ್ಯಕೀಯ ಸಂಘ (ಐ.ಎಂ.ಎ) ಉಡುಪಿ ಕರಾವಳಿ ಅಧ್ಯಕ್ಷ ಡಾ.ಕೆ ಸುರೇಶ್ ಶೆಣೈ ಹೇಳಿದರು. ಅವರು ಶುಕ್ರವಾರ ನಗರದ ಐ.ಎಂ.ಎ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಇಲಾಖೆ, ಭಾರತೀಯ ವೈದ್ಯಕೀಯ ಸಂಘ (ಐ.ಎಂ.ಎ) ಉಡುಪಿ ಕರಾವಳಿ, ವಿದ್ಯಾರತ್ನ ನರ್ಸಿಂಗ್ ಕಾಲೇಜು ಉಡುಪಿ ಹಾಗೂ […]

ಉಡುಪಿ ವಾರ್ತಾ ಇಲಾಖೆಯ ಪ್ರೇಮಾನಂದ್ ರಾವ್ ರವರಿಗೆ ಸಿಬ್ಬಂದಿಗಳಿಂದ ಹೃದಯಸ್ಪರ್ಶಿ ಬೀಳ್ಕೊಡುಗೆ

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಕಚೇರಿಯಲ್ಲಿ ಸೇವಕ ಹುದ್ದೆಯಲ್ಲಿ ಕರ್ತವ್ಯನಿರ್ವಹಿಸಿದ ಪ್ರೇಮಾನಂದ್ ರಾವ್ ಇವರಿಗೆ ಬೀಳ್ಕೊಡುಗೆ ಸಮಾರಂಭವನ್ನು ವಾರ್ತಾ ಇಲಾಖೆಯ ಕಚೇರಿ ಸಭಾಂಗಣದಲ್ಲಿಏರ್ಪಡಿಸಲಾಯಿತು. ಸಹಾಯಕ ನಿರ್ದೇಶಕ ಬಿ ಮಂಜುನಾಥ್ ರವರು ಮಾತನಾಡಿ, ಪ್ರೇಮಾನಂದ್ ರಾವ್ ರವರು 1999 ರಿಂದ ಉಡುಪಿ ಕಚೇರಿಯಲ್ಲಿಯೇ 26 ವರ್ಷಗಳ ಕಾಲ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸಿ, ತಮ್ಮ ಕರ್ತವ್ಯವನ್ನುಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಅನ್ಯೋನ್ಯವಾದ ಸ್ನೇಹವನ್ನು ಎಲ್ಲರೊಂದಿಗೆ ಹೊಂದಿದ್ದರು. ಅವರ ನಿವೃತ್ತಿ ಜೀವನಸುಖಕರವಾಗಿರಲಿ. ನಿವೃತ್ತಿ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ, ಉತ್ತಮ […]