ಉಡುಪಿ:ಮಳೆಯಿಂದ ಹಾಳಾದ ರಸ್ತೆಯ ದುರಸ್ಥಿ ಕಾರ್ಯಗಳನ್ನು ತ್ವರಿತವಾಗಿ ಕೈಗೊಂಡು ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಿ : ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ

ಉಡುಪಿ: ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಹಾಳಾದ ರಸ್ತೆಯ ದುರಸ್ಥಿ ಕಾರ್ಯಗಳನ್ನು ತ್ವರಿತವಾಗಿ ಮಾಡುವುದರೊಂದಿಗೆ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಹವಾಮಾನ ಇಲಾಖೆಯಿಂದ ಪ್ರತಿದಿನ ನೀಡುವ ಹವಾಮಾನ […]