“ಸ್ವರ್ಗದಲ್ಲಿ ನಾನು ಖುಷಿಯಾಗಿದ್ದೇನೆ, ಅಳಬೇಡಿ” ಡೆತ್ ನೋಟ್ ಬರೆದಿಟ್ಟು 7ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆ.!

ಆತ್ಮಹತ್ಯೆಗೆ ಶರಣಾದ ಬಾಲಕ 7ನೇ ತರಗತಿ ವಿದ್ಯಾರ್ಥಿ ಗಾಂಧಾರ್(13). ಮೃತದೇಹವನ್ನ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬೆಂಗಳೂರಿನ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಂಧಾರ್​ನ ತಂದೆ ಮ್ಯೂಸಿಕ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಸವಿತಾ ಖ್ಯಾತ ಜಾನಪದ ಗಾಯಕಿಯಾಗಿದ್ದಾರೆ. ಸವಿತಾ ಅವರು ಕಳೆದ ಶುಕ್ರವಾರ ಜಾನಪದ ಕಾರ್ಯಕ್ರಮದ ಹಿನ್ನಲೆ ಆಸ್ಟ್ರೇಲಿಯಾಗೆ ಹೋಗಿದ್ದರು. ಇದೀಗ ತಾಯಿ ವಾಪಸ್​​ ಆಗಬೇಕಿದೆ. ಇನ್ನೂ ತಾಯಿ ಬೆಂಗಳೂರಿಗೆ ಬರುವ ತನಕ ಮರಣೋತ್ತರ ಪರೀಕ್ಷೆ ನಡೆಸದೇ ಇರುವಂತೆ ತೀರ್ಮಾನ ಕೈಗೊಳ್ಳಲಾಗಿದೆ. […]

ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

ಉಡುಪಿ: ತನ್ನ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ, ಎಂ.ಸಿ.ಸಿ. ಬ್ಯಾಂಕ್ ತನ್ನ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’ನ ನೆಲ ಮಹಡಿಯಲ್ಲಿ ಆಗಸ್ಟ್ 3 ರಂದು ಉದ್ಘಾಟನೆಗೊಂಡಿತು. ಈ ಶಾಖೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳು, ಸಮುದಾಯದ ಸದಸ್ಯರು ಮತ್ತು ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಿದರು. ಬೈಂದೂರಿನ ಹೋಲಿ ಕ್ರಾಸ್ ಚರ್ಚ್’ನ ಧರ್ಮಗುರುಗಳಾದ ರೆವರೆಂಡ್ ಫಾದರ್ ವಿನ್ಸೆಂಟ್ […]

ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಮತ್ತು ಬಿಪ್ರಾಕ್ಟಿಕಲ್ ಸಂಸ್ಥೆಯ ನಡುವೆ ಒಡಂಬಡಿಕೆ

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯವು ಭವಿಷ್ಯದ ಇಂಜಿನಿಯರ್‍ಗಳನ್ನು ರೂಪಿಸುವ ನಿಟ್ಟಿನಲ್ಲಿ ದಿನಾಂಕ 30 ಜುಲೈ 2025 ರಂದು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮ ತರಬೇತಿಯಲ್ಲಿ ಮುಂಚೂಣಿಯಲ್ಲಿರುವ ಬಿಪ್ರಾಕ್ಟಿಕಲ್ ಸಂಸ್ಥೆಯ ಜೊತೆ ಒಡಂಬಡಿಕೆಗೆ ಸಹಿ ಹಾಕಿತು. ಈ ಒಡಂಬಡಿಕೆಯಲ್ಲಿ ಶ್ರೀ ಸೋದೆ ವಾದಿರಾಜ ಮಠ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಪ್ರೊ. ಡಾ. ರಾಧಕೃಷ್ಣ ಎಸ್ ಐತಾಳ್, ಡೀನ್‍ಗಳು, ವಿಭಾಗದ ಮುಖ್ಯಸ್ಥರು, ಪ್ಲೇಸ್ಮೆಂಟ್ ಅಧಿಕಾರಿಗಳು ಹಾಗೂ ಬಿಪ್ರಾಕ್ಟಿಕಲ್‍ನ ನಿರ್ದೇಶಕರಾದ ಹರೀಶ್ ಕುಮಾರ್ […]

ಮಣಿಪಾಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಚಾಲಕ ಸ್ಥಳದಿಂದ ಪರಾರಿ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಣಿಪಾಲ ಪೊಲೀಸ್ ಠಾಣೆಯ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ. ಬೆಂಗಳೂರು ನೋಂದಣಿಯ ಕಾರು ಮಣಿಪಾಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂತಿಗಳು ರಸ್ತೆಗೆ ಬಿದ್ದಿದ್ದು, ಮಣಿಪಾಲದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ […]

ಕುಂದಾಪುರ: ಸ್ಕೂಟರ್ ಗೆ ಬಸ್ ಡಿಕ್ಕಿ: ಸಹಸವಾರೆ ಪತ್ನಿ ಮೃತ್ಯು, ಪತಿ ಗಂಭೀರ

ಉಡುಪಿ: ಬಸ್ಸೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರೆ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ಸಂಗಮ್ ಜಂಕ್ಷನ್ ಸಮೀಪದ ನವಭಾರತ್ ಟಿಂಬರ್ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಹೊಸಮಠ ಚಾರುಕೊಟ್ಟಿಗೆ ನಿವಾಸಿ ಜಲಜಾ(64) ಎಂದು ಗುರುತಿಸಲಾಗಿದೆ. ಇವರ ಪತಿ ಸ್ಕೂಟರ್ ಸವಾರ ನಾರಾಯಣ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಆನಗಳ್ಳಿಯಿಂದ ಚಾರುಕೊಟ್ಟಿಗೆ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದು, ಆಗ ಹಿಂದಿನಿಂದ ಬಂದ ಬಸ್, ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ನಾರಾಯಣ […]