ದರ್ಶನ್ ರಂತೆ ತನಗೂ ಬೇಲ್ ಬೇಕು ಎಂದ ನೇಹಾ ಹಿರೇಮಠ ಪ್ರಕರಣದ ಹಂತಕ.!

ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾಳನ್ನು ಫಯಾಜ್ ಮಾರಕಾಸ್ತ್ರಗಳಿಂದ ಚುಚ್ಚಿ ಕೊಲೆಗೈದಿದ್ದ, ಈ ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳಿಗೆ ಜಾಮೀನು ಮಂಜೂರಾದಂತೆ ತನಗೂ ಜಾಮೀನು ನೀಡುವಂತೆ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾನೆ. ಪ್ರಕರಣದ ವಿಚಾರಣೆ ತೀವ್ರಗೊಂಡಿದ್ದು, ಇಂದು ನ್ಯಾಯಾಲಯದ ತೀರ್ಪಿನ ಕಡೆ ಎಲ್ಲರ ಕಣ್ಣು ನೆಟ್ಟಿದೆ. ನೇಹಾ ಕೊಲೆ ಪ್ರಕರಣದಲ್ಲಿ ಲವ್ ಜಿಹಾದ್ […]
ಶುರುವಾಯ್ತು ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪ್ರಕ್ರಿಯೆ: ಪ್ರತೀ ಕೋರ್ಸ್ ಗೂ ವೇಳಾಪಟ್ಟಿ.!

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಯ ಅಂತಿಮ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ ಬೆನ್ನಲ್ಲೇ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ.ಇದೇ ಮೊದಲ ಬಾರಿಗೆ ಒಂದೊಂದು ಕೋರ್ಸ್‌ಗೂ ಪ್ರತೇಕ ಪ್ರವೇಶ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಆ ಪ್ರಕಾರ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಕಾಲೇಜುಗಳಿಗೆ ಪ್ರವೇಶ ಪಡೆಯಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ಛಾಯ್ಸ್-1 ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಶುಲ್ಕ ಪಾವತಿ, ನಂತರ ಸೀಟು ಖಾತರಿಯ ಪತ್ರವನ್ನು […]
ಧರ್ಮಸ್ಥಳ: ಮೃತದೇಹಗಳ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಯಂತ್ರ ಬಳಸಿ; ಸುಜಾತಾ ಭಟ್ ವಕೀಲರ ಆಗ್ರಹ

ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಪತ್ತೆ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ GROUND PENETRATING RADAR (ಗೌಂಡ್ ಪೆನೇಟ್ರೇಟಿಂಗ್ ರೇಡಾರ್- ಜಿಪಿಆರ್) ಗಳನ್ನು ಬಳಸುವಂತೆ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಎಂಬವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಎನ್. ಒತ್ತಾಯಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು, ಸಾಕ್ಷಿ-ದೂರುದಾರ ಈಗಾಗಲೇ ತೋರಿಸಿ ಅಗೆಸಿರುವ ಮತ್ತು ಅದರ ಸುತ್ತಮುತ್ತಲಿನ […]
ಕರ್ನಾಟಕ ವಿಧಾನಸಭೆಯಿಂದ ಕ್ಯಾಲಿಫೋರ್ನಿಯಾದ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯಕ್ಕೆ ಪ್ರಮುಖರ ಭೇಟಿ

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ಯು.ಟಿ. ಖಾದರ್ ನೇತೃತ್ವದ ನಿಯೋಗವು, ಮಂಜುನಾಥ್ ಭಂಡಾರಿ, ಪಿ.ಎಂ. ಅಶೋಕ್ ಪಟ್ಟಣ್, ದಿನೇಶ್ ಗೂಳಿ ಗೌಡ, ಶ್ರೀನಿವಾಸ್ ಮಾನೆ, ಗುರುರಾಜ್ ಗಂಟೆಹೊಳೆ, ಸುರೇಶ್ ಬಾಬು, ಅಶೋಕ್ ರೈ ಮತ್ತು ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿತು. ಭೇಟಿಯ ಭಾಗವಾಗಿ, ನಿಯೋಗವು ಸ್ಟ್ಯಾನ್ಫೋರ್ಡ್ ಸ್ಕೂಲ್ ಆಫ್ ಮೆಡಿಸಿನ್ನ ಸಹಾಯಕ ಪ್ರಾಧ್ಯಾಪಕ ಮತ್ತು ಸ್ಟ್ಯಾನ್ಫೋರ್ಡ್ ಬೈಯರ್ಸ್ ಸೆಂಟರ್ ಫಾರ್ ಬಯೋಡಿಸೈನ್ನಲ್ಲಿ ಗ್ಲೋಬಲ್ ಔಟ್ರೀಚ್ನ ನಿರ್ದೇಶಕ ಡಾ. ಅನುರಾಗ್ ಮೈರಾಲ್ […]
ಮನುಷ್ಯತ್ವ, ಮೋಕ್ಷತ್ವ, ಸಜ್ಜನರ ಸಂಗದಿಂದ ಜೀವನದ ಗುರಿ ತಲುಪಲು ಸಾಧ್ಯ- ಸ್ವಾಮಿನಿ ಮಂಗಳಾಮೃತ ಪ್ರಾಣ

ಉಡುಪಿ: ಮನುಷ್ಯತ್ವ, ಮೋಕ್ಷತ್ವ ಮತ್ತು ಸಜ್ಜನರ ಸಂಗ ಮಾಡುವುದರಿಂದ ಜೀವನದ ಧ್ಯೇಯ ಗುರಿಯನ್ನು ತಲುಪಲು ಸಾಧ್ಯವಿದೆ ಎಂದು ಮಂಗಳೂರು ಶ್ರೀ ಮಾತಾ ಅಮೃತಾನಂದಮಯಿ ಮಠದ ಮಠಾಧಿಪತಿಗಳಾದ ಸ್ವಾಮಿನಿ ಮಂಗಳಾಮೃತ ಪ್ರಾಣ ಹೇಳಿದರು. ಮಾತಾ ಅಮೃತಾನಂದಮಯಿ ಸೇವಾ ಸಮಿತಿ ಉಡುಪಿ ಇದರ ಆಶ್ರಯದಲ್ಲಿ ಗುರುಪೂರ್ಣಿಮಾ ದಿನಾಚರಣೆಯ ಅಂಗವಾಗಿ ಮಲ್ಪೆ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಿದ “ಮಹಾ ಮೃತ್ಯುಂಜಯ ಹೋಮ” ಹಾಗೂ ಗುರುಪಾದುಕಾ ಪೂಜೆಯಲ್ಲಿ ಭಾಗವಹಿಸಿ ಅವರು ಸಂದೇಶ ನೀಡಿದರು. ಸನಾತನ ಧರ್ಮದಲ್ಲಿ ಮೋಕ್ಷವೇ ಮನುಷ್ಯ ಜೀವನದ […]