ರಾಜ್ಯದ ಕರಾವಳಿ ಮತ್ತು ಮಲೆನಾಡಲ್ಲಿ ಭಾರೀ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಬಿಡುವುಕೊಟ್ಟಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಈ ವಾರ ಪೂರ್ತಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು (ಆ.4) ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆಯಿಂದ (ಜು.5) ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಆ.7 ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕು […]

ಉಡುಪಿ:ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಕೆ ಕಡ್ಡಾಯ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿನ ಎಲ್ಲಾ ಕಛೇರಿ, ಹೊಟೇಲ್, ಬ್ಯಾಂಕ್, ಕಂಪೆನಿಗಳು ಹಾಗೂಅಂಗಡಿಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿರುವಂತೆ ಹಾಗೂ ನಾಮಫಲಕದ ಜೊತೆಗೆ ಆ ಸ್ಥಳದ ಐತಿಹ್ಯ ಹಾಗೂ ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಊರಿನ ಹೆಸರನ್ನು ಸಹ ನಮೂದಿಸುವುದು ಕಡ್ಡಾಯವಾಗಿರುವ ಹಿನ್ನೆಲೆ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿನ ಎಲ್ಲಾ ಉದ್ದಿಮೆದಾರರು 15 ದಿನಗಳ ಒಳಗಾಗಿ ತಮ್ಮ ಉದ್ದಿಮೆಯ ನಾಮಫಲಕದಲ್ಲಿ ಊರಿನ ಹೆಸರಿನೊಂದಿಗೆ ಕನ್ನಡದಲ್ಲಿ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಲು ಮತ್ತು ಇತರೆ ಭಾಷೆಯ ನಾಮಫಲಕಕ್ಕಿಂತ ಕನ್ನಡದ ನಾಮಫಲಕವನ್ನು ಶೇ.60 ರಷ್ಟು […]

ಉಡುಪಿ:ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸ್ತನ್ಯಪಾನ ಅವಶ್ಯಕ : ಡಾ.ಅಶೋಕ್ ಹೆಚ್

ಉಡುಪಿ: ಸ್ತನ್ಯಪಾನವು ಮಗುವಿನ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಪೂರಕವಾದ ಸಮತೋಲಿತ ಪೂರ್ಣಆಹಾರವಾಗಿದೆ. ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸ್ತನ್ಯಪಾನ ಅವಶ್ಯಕ ಎಂದು ಜಿಲ್ಲಾ ಸರ್ಜನ್ ಡಾ.ಅಶೋಕ್ ಹೆಚ್ ಹೇಳಿದರು. ಅವರು ಶುಕ್ರವಾರ ನಗರದ ಸರಕಾರಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ ಉಡುಪಿ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ- ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸ್ತನ್ಯಪಾನ ಮಾಡುವುದು […]

ಉಡುಪಿ:ಜಿಲ್ಲೆಯಲ್ಲಿ ಏಕನಿವೇಶನ ನಕ್ಷೆ ಅನುಮೋದನೆಗೆ ಸರ್ಕಾರ ಹೊರಡಿಸಿರುವ ಸೊತ್ತೋಲೆಯನ್ವಯ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಸರ್ಕಾರ ಏಕ ನಿವೇಶನ ನಕ್ಷೆ ಅನುಮೋದನೆ ನೀಡಲು ಈಗಾಗಲೇ ಕೆಲವೊಂದು ವಿನಾಯಿತಿಗಳನ್ನುಸಾರ್ವಜನಿಕರ ಹಿತದೃಷ್ಠಿಯಿಂದ ಸುತ್ತೋಲೆಯನ್ನು ಹೊರಡಿಸಿದೆ. ನಿಯಮಾನುಸಾರ ಇದರ ಅನುಷ್ಠಾನವನ್ನು ಮಾಡಬೇಕೆಂದು ಗ್ರಾಮಾಂತರ ಯೋಜನೆ ಇಲಾಖೆಯ ಅಭಿಯಂತರರುಗಳಿಗೆ ಜಿಲ್ಲಾಧಿಕಾರಿ ಸ್ವರೂಪಟ ಟಿ.ಕೆ ಸೂಚನೆ ನೀಡಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಏಕ ನಿವೇಶನ ನಕ್ಷೆ ಹಾಗೂ ನಮೂನೆ 9/11 ರಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರ್ಕಾರ ಕರಾವಳಿ ಪ್ರದೇಶಗಳ ಭೌಗೋಳಿಕ […]

ಉಡುಪಿ:ಆ. 5 ರಂದು ನೇರ ಸಂದರ್ಶನ

ಉಡುಪಿ:ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಗಸ್ಟ್ 5 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 […]