ಶಿರೂರು ಪರ್ಯಾಯ ಮಹೋತ್ಸವದ ಸ್ವಾಗತ ಸಮಿತಿಯ ಪ್ರಥಮ ಸಭೆ

ಉಡುಪಿ: ಶಿರೂರು ಮಠದ ಶ್ರೀವೇದವರ್ಧನ ತೀರ್ಥ ಸ್ವಾಮೀಜಿಯ ಪ್ರಥಮ ಪರ್ಯಾಯ ಮಹೋತ್ಸವದ ಅಂಗವಾಗಿ ಸ್ವಾಗತ ಸಮಿತಿಯ ಪದಾಧಿಕಾರಿಗಳ ಪ್ರಥಮ ಸಭೆ ಕೃಷ್ಣಾಪುರ ಮಠದ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಉಡುಪಿಯ ಶಾಸಕ ಹಾಗೂ ಸ್ವಾಗತ ಸಮಿತಿಯ ಅಧ್ಯಕ್ಷ ಯಶಪಾಲ್ ಸುವರ್ಣ ಮಾತನಾಡಿ, ಪ್ರತಿ ಬಾರಿಯಂತೆ ಈ ಬಾರಿಯು ಪರ್ಯಾಯ ಮಹೋತ್ಸವವನ್ನು ನಾಡಹಬ್ಬದ ರೀತಿಯಲ್ಲಿ ಆಚರಿಸಲಾಗುವುದು. ಇದು ತುಳುವರ ಕಾರ್ಯಕ್ರಮ. ಇದನ್ನು ಯಶಸ್ವಿಗೊಳಿಸಲು ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು. ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಡುಪಿ […]
ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ

ಉಡುಪಿ: ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪ ಹೊರಿಸಿ ಮೇಲೆ ಬಂಧಿಸಿರುವ ಹಾಗೂ ದೌರ್ಜನ್ಯ ನಡೆಸಿರುವ ಕ್ರಮವನ್ನು ಖಂಡಿಸಿ ಕಥೊಲಿಕ್ ಸಭಾ ಉಡುಪಿ ಪ್ರದೇಶದ ನೇತೃತ್ವದಲ್ಲಿ ಇತರ ಸಹಭಾಗಿ ಸಂಘಟನೆಗಳ ಸಹಕಾರದೊಂದಿಗೆ ಸೋಮವಾರ ಸಂಜೆ ಉಡುಪಿ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ನೆರೆದ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಾಮಾಜಿಕ ಚಿಂತಕರಾದ ಗಣನಾಥ್ ಎಕ್ಕಾರ್ ದೇಶದಾದ್ಯಂತ 30000ಕ್ಕೂ ಅಧಿಕ ಕ್ರೈಸ್ತ ಶಿಕ್ಷಣ ಸಂಸ್ಥೆಗಳಿಂದ್ದು 50ಲಕ್ಷ ಜನರು ಅವುಗಳಿಂದ ಪ್ರಯೋಜನ […]
ಸ್ವಾತಂತ್ರ್ಯೋತ್ಸವ ಪ್ರಯುಕ್ತ ವಿ.ಕೆ. ಫರ್ನಿಚರ್ & ಎಲೆಕ್ಟ್ರಾನಿಕ್ಸ್ ವತಿಯಿಂದ 2025ನೇ ಸಾಲಿನ 4ನೇ ವರ್ಷ ಆನ್‌ಲೈನ್ ಫ್ಯಾನ್ಸಿ ಡ್ರೆಸ್ ಸ್ಪರ್ಧೆ

ಮಂಗಳೂರು: ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿ.ಕೆ. ಫರ್ನಿಚರ್ & ಎಲೆಕ್ಟ್ರಾನಿಕ್ಸ್ ವತಿಯಿಂದ ಆನ್‌ಲೈನ್ ಫ್ಯಾನ್ಸಿ ಡ್ರೆಸ್ ಸ್ಪರ್ಧೆ – 2025 ಏರ್ಪಡಿಸಲಾಗಿದೆ. ಈ ವೇದಿಕೆ ಮಕ್ಕಳ ಪ್ರತಿಭೆ, ಸೃಜನಶೀಲತೆ ಮತ್ತು ದೇಶಾಭಿಮಾನವನ್ನು ಪ್ರದರ್ಶಿಸಲು ಒಂದು ಸುವರ್ಣಾವಕಾಶವಾಗಿದೆ. ಥೀಮ್: ನಿಮ್ಮ ಮಗುವನ್ನು ಸ್ವಾತಂತ್ರ್ಯ ಹೋರಾಟಗಾರರ ವೇಷದಲ್ಲಿ ಸಿಂಗರಿಸಿ, ಇತ್ತೀಚಿನ ಫೋಟೋ / ವೀಡಿಯೊ ಕಳುಹಿಸಿ. ವಯೋಮಿತಿ/ವಿಭಾಗಗಳು: ಪ್ರತಿ ವಿಭಾಗದ ಬಹುಮಾನಗಳು:1ನೇ ಬಹುಮಾನ – ಬೈಸಿಕಲ್ / ಸ್ಟಡಿ ಟೇಬಲ್2ನೇ ಬಹುಮಾನ – ಸ್ಟಡಿ ಟೇಬಲ್ ವಿತ್ ಬುಕ್ […]
ಉಡುಪಿ: ಮಹಿಳೆಯರು, ಪುರುಷರಿಗೆ ಉದ್ಯೋಗಾವಕಾಶ; ತಿಂಗಳಿಗೆ ರೂ.40,000 ವರೆಗೆ ವೇತನ.!

ಉಡುಪಿ: ಉಡುಪಿ ಅಜ್ಜೆರಕಾಡಿನಲ್ಲಿರುವ ‘ರಿಲಯನ್ಸ್ ನಿಪ್ಪಾನ್ ಲೈಫ್ ಇನ್ಶೂರೆನ್ಸ್ ಕಂಪನಿಯಲ್ಲಿ ‘ಸೇಲ್ಸ್ ಮ್ಯಾನೇಜರ್’ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ: ಸೇಲ್ಸ್ ಮ್ಯಾನೇಜರ್ ವಯಸ್ಸು: 25 ವರ್ಷದಿಂದ 50 ವರ್ಷದವರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಯಾವುದೇ ಪದವಿ ಶಿಕ್ಷಣ. ಪಿಎಫ್, ಮೆಡಿಕಲ್ ಇನ್ಸೂರೆನ್ಸ್ ಹಾಗೂ ಇನ್ಸೆಂಟಿವ್ಸ್ ಸೌಲಭ್ಯವಿದೆ. ಪುರುಷರು ಅಥವಾ ಮಹಿಳೆಯರಿಗೆ ಅವಕಾಶ ಕಲ್ಪಿಸಲಾಗಿದೆ. ಸ್ಥಳ ಉಡುಪಿ ಅಜ್ಜೆರಕಾಡು. ಸಂಪರ್ಕಿಸಿ:9844598291Email: [email protected]
ಉಡುಪಿ: ಪ್ರತ್ಯೇಕ ಪ್ರಕರಣ – ನಾಲ್ವರು ಆತ್ಮಹತ್ಯೆ

ಹಿರಿಯಡ್ಕ: ಅನಾರೋಗ್ಯ ಹಾಗೂ ಕುಡಿತದ ಚಿಂತೆಯಿಂದ ಜು.30ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪೆರ್ಡೂರಿನ ರಾಮ(59) ಎಂಬವರು ಆ.3ರಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಂದೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಉಪ್ಪುಂದ ಗ್ರಾಮದ ಲಕ್ಷ್ಮಣ(32) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಆ.3ರಂದು ಬೆಳಗ್ಗೆ ಮನೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. […]