ಉಡುಪಿ:ಜನಸಾಮಾನ್ಯರು ನಮ್ಮ ಕ್ಲಿನಿಕ್‌ನಲ್ಲಿ ಲಭ್ಯವಿರುವ ಆರೋಗ್ಯ ಸೇವೆಯ ಪ್ರಯೋಜನ ಪಡೆದುಕೊಳ್ಳಿ : ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ: ಜನಸಾಮಾನ್ಯರು ಮೂಲಭೂತ ಪ್ರಾಥಮಿಕ ಆರೋಗ್ಯ ಸೇವೆಗಾಗಿ ದೂರ ಪ್ರಯಾಣಿಸದೇ ಜನವಸತಿಪ್ರದೇಶದಲ್ಲಿ ಆರಂಭಿಸಿರುವ ನಮ್ಮ ಕ್ಲಿನಿಕ್‌ನಲ್ಲಿ ಸುಲಭವಾಗಿ ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳುವಂತೆ ಶಾಸಕ ಯಶ್‌ಪಾಲ್ ಎ ಸುವರ್ಣ ತಿಳಿಸಿದರು. ಅವರು ಶುಕ್ರವಾರ ನಗರದ ಗುಂಡಿಬೈಲು ದೊಡ್ಡನಗುಡ್ಡೆಯಲ್ಲಿ ನಮ್ಮ ಕ್ಲಿನಿಕ್ ಘಟಕವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ನಗರ ಪ್ರದೇಶಗಳಲ್ಲಿ ವಾಸಿಸುವ ಬಡ ಜನರಿಗೆ ನೆರವಾಗುವಂತೆ ಕೇಂದ್ರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ನಮ್ಮ ಕ್ಲಿನಿಕ್ ಎಂಬ ಉಚಿತ ಆರೋಗ್ಯ ಸೇವಾ ವ್ಯವಸ್ಥೆಯನ್ನು ಸ್ಥಾಪಿಸಲಾಗಿದ್ದು, ನಮ್ಮ ಕ್ಲಿನಿಕ್ ಸ್ಥಾಪನೆಯಿಂದ ಸರಕಾರಿ ಆಸ್ಪತ್ರೆಗಳ ಮೇಲಿರುವ […]

ಉಡುಪಿ:ಕಾಂಕ್ರೀಟ್ ಕಾಮಗಾರಿ ಹಿನ್ನೆಲೆ, ಬದಲಿ ಮಾರ್ಗ ಅನುಸರಿಸಿ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಅಜ್ಜರಕಾಡು ವಾರ್ಡಿನ ವಿದ್ಯಾರಣ್ಯ ರಸ್ತೆಯಲ್ಲಿ ಅಲಂಕಾರ್ಟಾಕೀಸ್‌ನಿಂದ ಸಿಟಿ ಆಸ್ಪತ್ರೆ ತನಕ ಒಳಚರಂಡಿ ಜಾಲದ ಪೈಪ್ ಬದಲಾವಣೆ ಮಾಡಿ ಛೇಂಬರ್ ಪುನರ್ ನಿರ್ಮಾಣ ಮಾಡುವ ಕಾಮಗಾರಿ ಭಾಗಶಃ ಪೂರ್ಣಗೊಂಡಿದ್ದು, ಉಳಿದಂತೆ ಡಾಮರೀಕರಣ ಹಾಗೂ ಅಗೆದ ಭಾಗಕ್ಕೆ ಕಾಂಕ್ರೀಟ್ ಹಾಕುವ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವ ಹಿನ್ನೆಲೆ, ಆಗಸ್ಟ್ 5 ರಿಂದ 20 ರ ವರೆಗೆ ಸದರಿ ರಸ್ತೆಯನ್ನು ಬಂದ್ ಮಾಡಲಾಗುವುದು. ಸಾರ್ವಜನಿಕರು ಬದಲಿರಸ್ತೆಯನ್ನು ಬಳಸಿ ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಉಡುಪಿ:ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಗೆ ವ್ಯವಸ್ಥಿತ ಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ಜಿಲ್ಲಾ ಮಟ್ಟದಲ್ಲಿ ನಡೆಸಲಾಗುವ ಬ್ರಹ್ಮಶ್ರೀ ನಾರಾಯಣ ಗುರು ರವರ ಜಯಂತಿಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ವ್ಯವಸ್ಥಿತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಅಪರಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಬ್ರಹ್ಮಶ್ರೀ ನಾರಾಯಣ ಗುರುರವರ ಜಯಂತಿ ಕಾರ್ಯಕ್ರಮವನ್ನು ಸೆಪ್ಟಂಬರ್ 7 ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ತಾಲೂಕುಮಣಿಪುರದ ಶ್ರೀ ನಾರಾಯಣ […]

ಉಡುಪಿ:ಕೂಲಿ ಕೆಲಸಕ್ಕೆಂದು ತೆರಳಿದ ವ್ಯಕ್ತಿ ನಾಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕು ಪೆಜಮಂಗೂರು ಗ್ರಾಮದ ಕೊಕ್ಕರ್ಣೆ ಕೆಳಪೇಟೆಯ ಬಾಡಿಗೆ ಮನೆಯೊಂದರಲ್ಲಿವಾಸವಿದ್ದ ಸುರೇಂದ್ರ ನಾಯ್ಕ (36) ಎಂಬ ವ್ಯಕ್ತಿಯು ಜೂನ್ 28 ರಂದು ಕೂಲಿ ಕೆಲಸಕ್ಕೆಂದು ಮನೆಯಿಂದ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಮರಾಠಿ ಭಾಷೆಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.