ಕರ್ನಾಟಕ ರಾಜ್ಯಕ್ಕೆ 46,933 ಕೋಟಿ ತೆರಿಗೆ ಹಣ ಬಿಡುಗಡೆ; ಕೇಂದ್ರ ಹಣಕಾಸು ಸಚಿವಾಲಯ

ನವದೆಹಲಿ: 2024-25ನೇ ಹಣಕಾಸು ವರ್ಷದಲ್ಲಿ ಕೇಂದ್ರ ತೆರಿಗೆಗಳು ಮತ್ತು ಸುಂಕಗಳಲ್ಲಿ ಕರ್ನಾಟಕ ರಾಜ್ಯಕ್ಕೆ 46,933 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಈರಣ್ಣ ಕಡಾಡಿ ಕೇಳಿದ ಪ್ರಶ್ನೆಗೆ ಲಖಿತ ಉತ್ತರ ನೀಡಿದ ಸಚಿವರು, 2022-23ರಲ್ಲಿ 34,596 ಕೋಟಿ ರೂ. ಹಾಗೂ 2023-24ರಲ್ಲಿ 41,193 ಕೋಟಿ ರೂ.ಬಿಡುಗಡೆಗೊಳಿಸಲಾಗಿತ್ತು. ಸ್ಥಳೀಯ ಸಂಸ್ಥೆಗಳು, ವಿಪತ್ತು ನಿರ್ವಹಣೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಕಳೆದ ಮೂರು […]

ಪುತ್ತೂರು: ಯುವ ವೈದ್ಯೆ ಆತ್ಮಹತ್ಯೆ

ಪುತ್ತೂರು: ಯುವ ವೈದ್ಯೆಯೋರ್ವಳು‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.ಪುತ್ತೂರಿನ ಬಪ್ಪಳಿಗೆ ನಿವಾಸಿ ಚಾಟರ್ಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ ಕೀರ್ತನಾ ಜೋಶಿ (27) ಆತ್ಮಹತ್ಯೆಗೆ ಶರಣಾದ ವೈದ್ಯೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೀರ್ತನಾ ಜೋಶಿ ಅವರ ಮೃತದೇಹವನ್ನು ಪುತ್ತೂರಿನ ಮನೆಗೆ ತಂದು, ಅಂತ್ಯಸಂಸ್ಕಾರ ನೆರವೇರಿಸಲಾಯಿತು.ಪಶುವೈದ್ಯಕೀಯದಲ್ಲಿ ಎಂ.ಡಿ. ಶಿಕ್ಷಣ ಪೂರೈಸಿರುವ ಡಾ| ಕೀರ್ತನಾ ಜೋಶಿ ಅವರು ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಖಾಸಗಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಸೋಮವಾರ ತಡರಾತ್ರಿ ಸ್ವಗೃಹದಲ್ಲಿ ನೇಣಿಗೆ […]

ಆಗಸ್ಟ್ 9ರಂದು ಕೃಷ್ಣಮಠದ ನೂತನ ‘ಯಾಳಿ’ ಲೋಕಾರ್ಪಣೆ

ಉಡುಪಿ: ಸುಮಾರು ಎಂಟು ಶತಮಾನಗಳಿಂದ ದ್ವೈತ ತತ್ವದ ಬೆಳಕನ್ನು ವಿಶ್ವಕ್ಕೆ ನೀಡಿದ ಆಚಾರ್ಯ ಮಧ್ವಕರಾರ್ಚಿತ ಉಡುಪಿ ಶ್ರೀಕೃಷ್ಣನ ಉಡುಪಿಯ ಕೃಷ್ಣಮಠದ ಪ್ರಾಚೀನ ಸೌಂದರ್ಯವನ್ನು ಆಧುನಿಕ ಬೆಳಕಿಂಡಿಯಲ್ಲಿ ದರ್ಶಿಸುವ ಅವಕಾಶವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕಲ್ಪಿಸಿದ್ದು, ಕರಾವಳಿಯ ಮೂಲ ವಾಸ್ತುಶೈಲಿ ಮಾದರಿಯ ಕಾಷ್ಠ ಯಾಳಿ (ಸುತ್ತುಪೌಳಿ)ಯನ್ನು ಸುಮಾರು ಒಂದು‌ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕನಕ ಗೋಪುರಕ್ಕೆ ಹೊಂದಿಕೊಂಡಿರುವ ಚಂದ್ರಶಾಲೆ ಸಹಿತ ಮಧ್ವ ಸರೋವರದ ವರೆಗೆ ಶ್ರೀಕೃಷ್ಣ ಆಲಯದ ಮೇಲ್ಛಾವಣಿಗೆ ಪ್ರಾಚೀನ ವಾಸ್ತುಶೈಲಿಯ ರೂಪ […]

ಬ್ರಹ್ಮಾವರ: ಪಿಗ್ಮಿ ಸಂಗ್ರಹಕನ ಹಣ ಕಳವು ಪ್ರಕರಣ: ಅಂತರ್ ರಾಜ್ಯ ಕಳ್ಳನ ಬಂಧನ

ಉಡುಪಿ: ಬೈಕಿನ ಸೈಡ್ ಬಾಕ್ಸ್ ನಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಅಂತರ್ ರಾಜ್ಯ ಕಳ್ಳನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಂತೋಷ್‌ ಹನುಮಂತ ಕಟ್ಟಿಮನಿ (39) ಬಂಧಿತ ಆರೋಪಿ. ಈತನಿಂದ ಕಳವು ಮಾಡಿದ 32000ರೂ. ನಗದು ಹಾಗೂ ಮೊಬೈಲ್‌ನ್ನು ವಶಪಡಿಸಕೊಳ್ಳಲಾಗಿದೆ. ಸೊಸೈಟಿಯೊಂದರ ಪಿಗ್ಮಿ ಸಂಗ್ರಹಕರು ಆ.4ರಂದು ಸಂಜೆ ಬ್ರಹ್ಮಾವರ ಶಿವಳ್ಳಿ ಹೋಟೆಲ್‌ ಎದುರುಗಡೆ ಕರ್ನಾಟಕ ಬ್ಯಾಂಕ್‌ ಎಟಿಎಮ್‌ ಬಳಿ ಪಿಗ್ಮಿ ಕಲೆಕ್ಷನ್‌ ಮಾಡಿದ ನಗದನ್ನು ಬೈಕ್ ನ ಸೈಡ್‌ ಬಾಕ್ಸ್‌ನಲ್ಲಿ […]

ಉಡುಪಿ:ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅರಿವುಶೈಕ್ಷಣಿಕ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ https://kacdc.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 9448451111 ಅಥವಾ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.